ದಕ್ಷಿಣ ಕನ್ನಡ | ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ ನಾಮಪತ್ರ ಸಲ್ಲಿಕೆ

Date:

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ ಬುಧವಾರ ನಾಮಪತ್ರ ಸಲ್ಲಿಸಿದರು.

ಬುಧವಾರ ಬೆಳಗ್ಗೆ ಕುದ್ರೋಳಿ ಗೋಕರ್ಣನಾಥ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಳಿಕ ಮೆರವಣಿಗೆಯಲ್ಲಿ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು, ಅಭಿಮಾನಿಗಳೊಂದಿಗೆ ಪದ್ಮರಾಜ್ ಅವರು ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದರು.

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಮುಲ್ಲೈ ಮುಗಿಲನ್ ಅವರು ನಾಮಪತ್ರ ಸ್ವೀಕರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಾಮಪತ್ರ ಸಲ್ಲಿಸಿದ ಬಳಿಕ ಪದ್ಮರಾಜ್ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ್ದು, “ಕಳೆದ 33 ವರ್ಷಗಳಿಂದ ಈ ಜಿಲ್ಲೆಯ ಮೇಲೆ ಕೋಮು ಸೂಕ್ಷ್ಮ ಪ್ರದೇಶವೆಂಬ ಕಪ್ಪುಚುಕ್ಕೆ ಬಿದ್ದಿದೆ. ವಿಶಿಷ್ಟ ಸಂಸ್ಕೃತಿಯ ಜಿಲ್ಲೆಯಲ್ಲಿ ಬಿಜೆಪಿ ಆಡಳಿತದಲ್ಲಿ ಕೋಮು ಸಾಮರಸ್ಯ ಕದಡಿದ್ದು ದೊಡ್ಡ ಹಿನ್ನಡೆಯಾಗಿದೆ. ಅದನ್ನು ನಿವಾರಿಸುವುದೇ ನಮ್ಮ ಉದ್ದೇಶ. ಜಾತಿ ಧರ್ಮ ಮೀರಿದ ಬಾಂಧವ್ಯ ಮಾಯವಾಗಿದೆ. ಇದರಿಂದಾಗಿ ಈ ಭಾಗದಲ್ಲಿ ಹೂಡಿಕೆ ಆಗುತ್ತಿಲ್ಲ. ಜನರು ಇದರ ಬಗ್ಗೆ ಅರಿವು ಮೂಡಿಸಿಕೊಂಡಿದ್ದು, ಬದಲಾವಣೆ ಬಯಸಿದ್ದಾರೆ. ನಿರುದ್ಯೋಗ ಹೆಚ್ಚಳದಿಂದಾಗಿ ಜನರು ಕಾಂಗ್ರೆಸಿನತ್ತ ವಾಲಿದ್ದು, ಮತವಾಗಿ ಪರಿವರ್ತನೆಯಾಗಲಿದೆ” ಎಂದು ಅಭಿಪ್ರಾಯಪಟ್ಟರು.

“ರಾಜ್ಯ ಕಾಂಗ್ರೆಸ್ ನೀಡಿರುವ ಐದು ಗ್ಯಾರಂಟಿ ಯೋಜನೆಗಳಿಂದ ಗೃಹಿಣಿಯ ಮುಖದಲ್ಲಿ ನಗು ಮೂಡಿಸಿದೆ. ಬಡ ಕುಟುಂಬಗಳಿಗೆ ಶಕ್ತಿ ನೀಡಿದೆ. ನಾವು ಯಾರ ಬಗ್ಗೆಯೂ ದ್ವೇಷ ಮಾಡುವುದಿಲ್ಲ. ಟೀಕೆಯನ್ನೂ ಮಾಡುವುದಿಲ್ಲ. ವಾಸ್ತವ ಏನಿದೆಯೋ ಅದನ್ನು ಜನರ ಮುಂದಿಡುತ್ತೇನೆ. ಜಾತಿ ರಾಜಕಾರಣ ಮಾಡುವುದಿಲ್ಲ. ಜನರ ಸ್ಪಂದನೆ ಉತ್ತಮವಾಗಿದ್ದು, ಈ ಬಾರಿ ನೂರಕ್ಕೆ ನೂರು ಕಾಂಗ್ರೆಸ್ ಗೆಲ್ಲಲಿದೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ | 6 ಮಂದಿ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ವಿಧಾನ ಪರಿಷತ್ ಸದಸ್ಯರಾದ ಬಿ ಕೆ ಹರಿಪ್ರಸಾದ್, ಡಾ‌ ಮಂಜುನಾಥ್ ಭಂಡಾರಿ, ಹರೀಶ್ ಕುಮಾರ್, ಮಾಜಿ ಸಚಿವ ಬಿ ರಮಾನಾಥ ರೈ, ಮಾಜಿ ಶಾಸಕ ಜೆ ಆರ್‌ ಲೋಬೊ, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ಮಾಜಿ ಸಚಿವ ಅಭಯಚಂದ್ರ ಜೈನ್ ಸೇರಿದಂತೆ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...