ಆ್ಯಸಿಡ್ ದಾಳಿಗೊಳಗಾಗಿ ಚಿಕಿತ್ಸೆ ಪಡೆಯುತ್ತಿರುವ ಕಡಬ ಸರ್ಕಾರಿ ಪಿಯು ಕಾಲೇಜಿನ ಮೂವರು ವಿದ್ಯಾರ್ಥಿನಿಯರನ್ನು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡುರಾವ್ ಶನಿವಾರ (ಮಾ.9) ಸಂಜೆ ಆಸ್ಪತ್ರೆಯಲ್ಲಿ ಭೇಟಿ ಮಾಡಿದ್ದಾರೆ. ಸಂತ್ರೆಸ್ತೆಯರ ಆರೋಗ್ಯ ವಿಚಾರಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಸರ್ಕಾರಿ ಪಿಯು ಕಾಲೇಜಿನ ಮೂವರು ವಿದ್ಯಾರ್ಥಿನಿಯರ ಮೇಲೆ ಕಳೆದ ವಾರ ಕಾಲೇಜಿನ ಆವರಣದಲ್ಲಿ ಯುವಕನೊಬ್ಬ ಆ್ಯಸಿಡ್ ದಾಳಿ ಮಾಡಿದ್ದ. ಗಾಯಾಳು ವಿದ್ಯಾರ್ಥಿನಿಯರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಎ.ಜೆ. ಆಸ್ಪತ್ರೆಗೆ ದಾಖಲಿಸಲಾಗಿತ್ತು.
ವಿದ್ಯಾರ್ಥಿನಿಯರನ್ನು ಭೇಟಿ ಮಾಡಿದ ಬಳಿಕ ಈದಿನ.ಕಾಮ್ ಜೊತೆ ಮಾತನಾಡಿದ ಸಚಿವ, “ವಿದ್ಯಾರ್ಥಿನಿಯರೆಲ್ಲರೂ ಅಪಾಯದಿಂದ ಪಾರಾಗಿದ್ದು, ಚೇತರಿಸಿಕೊಂಡಿದ್ದಾರೆ. ವಿದ್ಯಾರ್ಥಿನಿಯರ ಚಿಕಿತ್ಸೆಗೆ ಸರ್ಕಾರದಿಂದ ನೆರವು ನೀಡಲಾಗಿದೆ. ಪರಿಹಾರವನ್ನು ಕೂಡ ನೀಡಲಾಗಿದೆ. ಅಗತ್ಯವಿದ್ದರೆ ಹೆಚ್ಚಿನ ನೆರವು ಕೂಡ ನೀಡಲಾಗುವುದು. ವಿದ್ಯಾರ್ಥಿನಿಯರ ಚಿಕಿತ್ಸೆಯ ನಿಗಾ ವಹಿಸುವಂತೆ ಜಿಲ್ಲಾ ಆರೋಗ್ಯಾಧಿಕಾರಿ ಅವರಿಗೆ ನಿರ್ದೇಶನ ನೀಡಿದ್ದೇನೆ” ಎಂದರು.
ಸಚಿವರು ಆಸ್ಪತ್ರೆಗೆ ಭೇಟಿ ನೀಡಿದ ವೇಳೆ ಜಿಲ್ಲಾ ಆರೋಗ್ಯ ಅಧಿಕಾರಿ, ಕಾರ್ಪೋರೆಟರ್ ವಿನಯರಾಜ್ ಜೊತೆಗಿದ್ದರು.




