ದಕ್ಷಿಣ ಕನ್ನಡ | ಮೊಬೈಲ್‌ ನೋಡುತ್ತಾ ಬಸ್‌ ಚಾಲನೆ; ಚಾಲಕನ ಪರವಾನಗಿ ರದ್ದತಿಗೆ ಕ್ರಮ

Date:

ಒಂದು ಕೈಯಲ್ಲಿ ಸ್ಟೇರಿಂಗ್‌ ಹಿಡಿದು ಇನ್ನೊಂದು ಕೈಯಲ್ಲಿ ಹಿಡಿದಿದ್ದ ಮೊಬೈಲ್ ನೋಡಿಕೊಂಡೇ ಸ್ಟೇರಿಂಗ್ ತಿರುಗಿಸುತ್ತ ಸಿಟಿ ಬಸ್ ಓಡಿಸುತ್ತಿದ್ದ ಚಾಲಕನ ನಿರ್ಲಕ್ಷ್ಯವನ್ನು ಬಸ್ ಪ್ರಯಾಣಿಕರೊಬ್ಬರು ವೀಡಿಯೋ ರೆಕಾರ್ಡ್ ಮಾಡಿದ್ದು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ. 

ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರಿನಿಂದ ತಲಪಾಡಿ ನಡುವೆ ಓಡಾಟ ನಡೆಸುವ 42 ರೂಟ್ ಸಂಖ್ಯೆಯ “ಸೈಂಟ್ ಆಂಟನಿ‌” ಸಿಟಿ ಬಸ್ಸಿನ ಚಾಲಕ ನಿರ್ಲಕ್ಷ್ಯದಿಂದ ಬಸ್ಸು ಚಲಾಯಿಸಿರುವ ಘಟನೆ ನಡೆದಿದೆ. ಭಾನುವಾರ ಮಧ್ಯಾಹ್ನದ ವೇಳೆ ಪ್ರಯಾಣಿಕರಿಂದ ತುಂಬಿದ್ದ ಬಸ್ಸು ಮಂಗಳೂರಿನಿಂದ ತಲಪಾಡಿಗೆ ಸಾಗುತ್ತಿದ್ದ ವೇಳೆ ಚಾಲಕ ಮೊಬೈಲ್ ನೋಡಿಕೊಂಡು ಒಂದೇ ಕೈಯಲ್ಲಿ ಸ್ಟೇರಿಂಗ್ ತಿರುಗಿಸಿ ಬಸ್ ಚಲಾಯಿಸಿರುವುದು ಕಂಡುಬಂದಿದೆ.

ಬಸ್ಸಿನ ಎದುರಿನ ಕ್ಯಾಬಿನ್ ಸೀಟಿನಲ್ಲಿ ಕುಳಿತುಕೊಂಡಿದ್ದ ಪ್ರಯಾಣಿಕರೊಬ್ಬರು ಚಾಲಕನ ನಡೆಯಿಂದ ಕುಪಿತಗೊಂಡಿದ್ದು, ಜಪ್ಪಿನಮೊಗರುವಿಗೆ ಬಸ್ ತಲುಪಿದಾಗ ತನ್ನ ಮೊಬೈಲಲ್ಲಿ ಅಜಾಗರೂಕತೆಯ ಚಾಲನೆಯ ವಿಡಿಯೋ ಸೆರೆ ಹಿಡಿದಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಹರಿಯ ಬಿಟ್ಟಿದ್ದಾರೆ. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚಾಲಕನನ್ನು ನಂಬಿಯೇ ಪ್ರಯಾಣಿಕರು ಬಸ್ಸಿನಲ್ಲಿ ಪ್ರಯಾಣಿಸುತ್ತಾರೆ. ಪ್ರಯಾಣಿಕರ ನಂಬಿಕಸ್ಥ ಚಾಲಕನೇ ಈ ರೀತಿ ಯಾರ ಗೊಡವೆ ಇಲ್ಲದೆ ಮೊಬೈಲ್ ನೋಡಿಕೊಂಡು ಬಸ್ ಚಲಾಯಿಸುವಾಗ ಹೆಚ್ಚು ಕಡಿಮೆಯಾದರೆ ಯಾರು ಹೊಣೆ?. ಚಾಲನೆಯಲ್ಲಿ ಮೊಬೈಲ್ ಬಳಸಿದರೆ ಅಂಥವರ ಡ್ರೈವಿಂಗ್ ಲೈಸೆನ್ಸ್ ರದ್ದು ಪಡಿಸುವ ಹಕ್ಕು ಆರ್‌ಟಿಒ ಅಧಿಕಾರಿಗಳಿಗೆ ಇದೆ. ಇಂತಹ ಬೇಜವ್ದಾರಿ ಚಾಲಕರ ಡ್ರೈವಿಂಗ್ ಲೈಸನ್ಸ್ ರದ್ದು ಪಡಿಸಬೇಕು” ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

“ತಪ್ಪಿತಸ್ಥ ಬಸ್ ಚಾಲಕನ್ನು ಈಗಾಗಲೇ ಗುರುತಿಸಿದ್ದು, ಅವರ ವಿರುದ್ಧ ಮಂಗಳೂರು ದಕ್ಷಿಣ ಸಂಚಾರ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಜೊತೆಗೆ ಅವರ ಡಿಎಲ್ ರದ್ದುಗೊಳಿಸಲು ಆರ್‌ಟಿಒಗೆ ಕಳುಹಿಸಲಾಗುವುದು” ಎಂದು ಮಂಗಳೂರು ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಜೈನ್ ಮಾಹಿತಿ‌ ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...