ದಕ್ಷಿಣ ಕನ್ನಡ | ಫೆ.25ರಿಂದ ಡಿವೈಎಫ್‌ಐ ರಾಜ್ಯ ಸಮ್ಮೇಳನ

Date:

ಸಾಮರಸ್ಯ, ಉದ್ಯೋಗ, ಘನತೆಯ ಬದುಕಿಗಾಗಿ ಎಂಬ ಘೋಷಣೆಯೊಂದಿಗೆ ಫೆಬ್ರವರಿ 25, 26, 27ರಂದು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಉಳ್ಳಾಲದ ಕಲ್ಲಾಪು ಬಳಿ ಇರುವ ಯುನಿಟಿ ಸಭಾಂಗಣದಲ್ಲಿ ಡಿವೈಎಫ್ಐನ 12ನೇ ರಾಜ್ಯ ಸಮ್ಮೇಳನ ನಡೆಯಲಿದೆ.‌

ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಮಂಗಳೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, “ಮೂರು ದಿನಗಳ ಕಾಲ ನಡೆಯುವ ಈ ಸಮ್ಮೇಳನ ಮೊದಲ ಎರಡು ದಿನ ಪ್ರತಿನಿಧಿ ಅಧಿವೇಶನ ನಡೆಯಲಿದ್ದು, ರಾಜ್ಯದ ಪ್ರತಿ ಜಿಲ್ಲೆಗಳಿಂದಲೂ ಸದಸ್ಯತ್ವದ ಆಧಾರದ ಮೇಲೆ ಮುನ್ನೂರು ಪ್ರತಿನಿಧಿಗಳು ಭಾಗವಹಿಸಲಿದ್ದಾರೆ” ಎಂದು ತಿಳಿಸಿದರು.

“ಸಮ್ಮೇಳನದ ಉದ್ಘಾಟನೆ ರಾಜ್ಯ ಸಮ್ಮೇಳನದ ಉದ್ಘಾಟನಾ ಸಮಾರಂಭವು 25ರಂದು ಬೆಳಿಗ್ಗೆ 10ಕ್ಕೆ ಯುನಿಟಿ ಹಾಲ್‌ನ ಪ್ರೊಫೆಸರ್‌ ಅಮೃತ ಸೋಮೇಶ್ವರ ವೇದಿಕೆ,‌ ಡಾ ವಿಠಲ್ ಭಂಡಾರಿ ಸಭಾಂಗಣದಲ್ಲಿ ನಾಗೇಶ್ ಕುಮಾರ್ ನಗರದಲ್ಲಿ ನಡೆಯಲಿದ್ದು, ಕರ್ನಾಟಕದ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿಗಳಾದ ನಾಗಮೋಹನ್ ದಾಸ್ ರವರು ಉದ್ಘಾಟಿಸಲಿದ್ದಾರೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮುಖ್ಯ ಅತಿಥಿಗಳಾಗಿ ಡಿವೈಎಫ್ಐ ಅಖಿಲ ಭಾರತ ಅಧ್ಯಕ್ಷರು ಹಾಗೂ ರಾಜ್ಯಸಭಾ ಸದಸ್ಯ ಎ ಎ ರಹೀಮ್ ಅವರು ಭಾಗವಹಿಸಲಿದ್ದಾರೆ. ಡಿವೈಎಫ್ಐ ಕರ್ನಾಟಕ ರಾಜ್ಯ ಅಧ್ಯಕ್ಷ ಮುನೀರ್ ಕಾಟಿಪಳ್ಳ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದು, ಕಾರ್ಯದರ್ಶಿ ಬಸವರಾಜ್ ಪೂಜಾರ್, ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ರಾಜೇಶ್ ವೆಲ್ಲಾಟ್, ಕರ್ನಾಟಕ ರಾಜ್ಯ ಸಮಿತಿ ಸದಸ್ಯರುಗಳಾದ ರೇಣುಕಾ ಕಹರ್ ಭಾಗವಹಿಸಲಿದ್ದಾರೆ” ಎಂದರು.

ಯೂಥ್ ಮಾರ್ಚ್ : “ಸಮ್ಮೇಳನದ ಸಮಾರೋಪವು 27ರಂದು ನಡೆಯಲಿದ್ದು, ಆ ದಿನ ಸಂಜೆ 3ಕ್ಕೆ ಕುತ್ತಾರ್ ಜಂಕ್ಷನ್‌ನಿಂದ ಕಲ್ಲಾಪು ಯುನಿಟಿ ಹಾಲ್ ಮೈದಾನದವರೆಗೆ ಯುವಜನರ ವರ್ಣರಂಜಿತ ಮೆರವಣಿಗೆ ನಡೆಯಲಿದೆ” ಎಂದರು.

ಸಮ್ಮೇಳನದ ಬಹಿರಂಗ ಸಭೆ : “ರಾಜ್ಯ ಸಮ್ಮೇಳನದ ಬಹಿರಂಗ ಸಭೆಯು ತೊಕ್ಕೊಟ್ಟು ಯುನಿಟಿ ಮೈದಾನದ ಭಾಸ್ಕರ ಕುಂಬಳೆ ವೇದಿಕೆ, ಶ್ರೀನಿವಾಸ್ ಬಜಾಲ್ ನಗರದಲ್ಲಿ ನಡೆಯಲಿದ್ದು, ಇದರ ಪ್ರಧಾನ ಭಾಷಣಕಾರರಾಗಿ ಸಿಪಿಐಎಂ ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ, ಬಹು ಭಾಷಾ ಚಲನಚಿತ್ರ ನಟ ಪ್ರಕಾಶ್ ರೈ, ರಾಜ್ಯಸಭಾ ಸದಸ್ಯರು ಹಾಗೂ ಡಿವೈಎಫ್ಐನ ಅಖಿಲ ಭಾರತ ಅಧ್ಯಕ್ಷ ಎ ಎ ರಹೀಂ ಅವರು ಪ್ರಧಾನ ಭಾಷಣಕಾರರಾಗಿ ಭಾಗವಹಿಸಲಿದ್ದಾರೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ತುಮಕೂರು | ಸ್ಲಂ ನಿವಾಸಿಗಳ ಬೇಡಿಕೆ ಈಡೇರಿಕೆಗೆ ಕೊಳಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿ ಆಗ್ರಹ 

“ಫೆಬ್ರವರಿ 26ರಂದು ಬೆಳಿಗ್ಗೆ 10:30ಕ್ಕೆ ದೆಹಲಿ ಜೆಎನ್‌ಯು ವಿವಿಯ ವಿಶ್ರಾಂತ ಪ್ರಾಧ್ಯಾಪಕ ಡಾ. ಪುರುಷೋತ್ತಮ ಬಿಳಿಮಲೆಯವರಿಂದ “ಕರಾವಳಿ ಕಟ್ಟಿದ ಬಗೆ” ಎಂಬ ವಿಷಯದ ಮೇಲೆ ವಿಶೇಷ ಉಪನ್ಯಾಸ ನಡೆಯಲಿದೆ” ಎಂದು ತಿಳಿಸಿದರು.

ಸುದ್ದಿಗೋಷ್ಟಿಯಲ್ಲಿ ಸಮ್ಮೇಳನ ಸಮಿತಿಯ ಕಾರ್ಯಧ್ಯಕ್ಷ ಡಾ. ಕೃಷ್ಣಪ್ಪ ಕೊಂಚಾಡಿ, ಡಿವೈಎಫ್‌ಐ ಮುಖಂಡರುಗಳಾದ ಸಂತೋಷ್ ಬಜಾಲ್, ಸುನಿಲ್ ಕುಮಾರ್ ಬಜಾಲ್, ಬಿ ಕೆ ಇಮ್ತಿಯಾಜ್,
ನವೀನ್ ಕೊಂಚಾಡಿ,‌ ಮನೋಜ್ ವಾಮಂಜೂರು, ರಿಜ್ವಾನ್ ಹರೇಕಳ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...