ದಕ್ಷಿಣ ಕನ್ನಡ | ನೀರಿಗೆ ಹಾಹಾಕಾರ; ಮುಚ್ಚಿದ ಕಾಲೇಜುಗಳು, ಶುರುವಾದ ಆನ್‌ಲೈನ್ ತರಗತಿಗಳು

Date:

ಬೇಸಿಗೆ ಮುಗಿದು, ಮಳೆಗಾಲ ಆರಂಭವಾಗುತ್ತಿದೆ. ಬೇಸಿಗೆಯಲ್ಲಿಯೂ ಹವಾಮಾನ ಬದಲಾವಣೆಯಿಂದ ಕೆಲವೆಡೆ ಭಾರೀ ಮಳೆಯಾಗಿದೆ. ಇದೆಲ್ಲದರ ನಡುವೆಯೂ ಕರಾವಳಿ ಪ್ರದೇಶ ಮಾತ್ರ ನೀರಿಲ್ಲದೆ ಬಳಲುತ್ತಿದೆ. ನೀರಿನ ಸಮಸ್ಯೆಗಳಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಹಲವು ಕಾಲೇಜುಗಳನ್ನು ಮುಚ್ಚಲಾಗಿದೆ. ವಿದ್ಯಾರ್ಥಿಗಳಿಗೆ ಆನ್‌ಲೈನ್‌ ತರಗತಿಗಳನ್ನು ನಡೆಸಲಾಗುತ್ತಿದೆ.

ಮಂಗಳೂರಿಗೆ ನೀರು ಒದಗಿಸುವ ತುಂಬೆ ಅಣೆಕಟ್ಟು ಬರಿದಾಗುತ್ತಿದೆ. ನಂದಿನಿ ನದಿ ಒಣಗಿದೆ. ಹೀಗಾಗಿ, ನಗರಕ್ಕೆ ಅಗತ್ಯವಿರುವಷ್ಟು ನೀರು ಪೂರೈಕೆ ಮಾಡಲಾಗದೆ ಮಂಗಳೂರು ಮಹಾನಗರ ಪಾಲಿಕೆ ಹೆಣಗಾಡುತ್ತಿದೆ. ಪ್ರತಿ ದಿನ ನಲ್ಲಿಗಳಲ್ಲಿ ನೀರು ಹರಿಸುತ್ತಿದ್ದ ಪಾಲಿಕೆ, ಈಗ ಎರಡು-ಮೂರು ದಿನಗಳಿಗೊಮ್ಮೆ ನೀರು ಪೂರೈಸುತ್ತಿದೆ. ಈ ವಾರದಲ್ಲಿ ನಂದಿನಿ ನದಿಯ ತಟದಲ್ಲಿ ಮಳೆಯಾಗದಿದ್ದರೆ, ನಗರಕ್ಕೆ ನೀರಿನ ಹಾಹಾಕಾರ ಎದುರಾಗುವ ಭೀತಿಯಲ್ಲಿ ನಗರವಾಸಿಗಳಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಕರಾವಳಿ ಭಾಗದಲ್ಲಿ ನೀರಿನ ಅಭಾವ; ಹಲವು ದೇವಾಲಯಗಳಲ್ಲಿ ಮಳೆಗಾಗಿ ಪ್ರಾರ್ಥನೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಂಗಳೂರು ನಗರದಲ್ಲಿರುವ ಹಂಪನಕಟ್ಟೆ ಕಾಲೇಜು, ಕುಂಟಿಕಾನದ ಖಾಸಗಿ ಮೆಡಿಕಲ್‌ ಕಾಲೇಜಿನಲ್ಲಿ ನೀರಿಗೆ ಅಭಾವ ಸೃಷ್ಟಿಯಾಗಿದೆ. ವಿದ್ಯಾರ್ಥಿಗಳಿಗೆ ಭೌತಿಕ ತರಗತಿಗಳನ್ನು ರದ್ದು ಮಾಡಿದ್ದು, ಆನ್‌ಲೈನ್‌ ಮೂಲಕ ತರಗತಿಗಳನ್ನು ನಡೆಸಲಾಗುತ್ತಿದೆ.

ಜಿಲ್ಲೆಯ ನೂರಾರು ಶಾಲಾ-ಕಾಲೇಜುಗಳಿಗೆ ಟ್ಯಾಂಕರ್‌ಗಳ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ. ವೆನ್ಲಾಕ್ ಸರ್ಕಾರಿ ಆಸ್ಪತ್ರೆಯಲ್ಲಿಯೂ ನೀರಿಗೆ ಹಾಹಾಕಾರ ಶುರುವಾಗಿದೆ. ಆಸ್ಪತ್ರೆಗೆ ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...