ದಕ್ಷಿಣ ಕನ್ನಡ | ಭಾರೀ ಮಳೆ; 2 ದಿನ ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ

Date:

ಕರಾವಳಿಯಲ್ಲಿ ಭಾರೀ ಮಳೆ ಸುರಿಯುತ್ತಿರುವ ಕಾರಣ ಹವಾಮಾನ ಇಲಾಖೆಯು ರೆಡ್‌ ಅಲರ್ಟ್‌ ಘೋಷಣೆ ಮಾಡಿದೆ. ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಮೇ 27 ಹಾಗೂ 28ರಂದು ರಜೆ ಘೋಷಿಸಿ ಆದೇಶಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾಧಿಕಾರಿ(ಜಿಲ್ಲಾಧಿಕಾರಿ) ಈ ಬಗ್ಗೆ ಆದೇಶ ಹೊರಡಿಸಿದ್ದು, “ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ ಅತಿ ಹೆಚ್ಚಿನ ಮಳೆ ದಾಖಲಾಗಿದೆ. ಇದೇ ಹವಾಮಾನ ಪರಿಸ್ಥಿತಿ ಮುಂದುವರಿಯುವ ಸೂಚನೆಯಿದ್ದು, ಮೇ 28ರವರೆಗೆ ಜಿಲ್ಲಾದ್ಯಂತ ರೆಡ್ ಅಲರ್ಟ್ ಘೋಷಣೆಯಾಗಿರುತ್ತದೆ. ಈ ನಿಟ್ಟಿನಲ್ಲಿ ಮುಂಜಾಗೃತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ” ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ಇತರೆ ಮುನ್ನೆಚ್ಚರಿಕೆ ಕ್ರಮಗಳು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಜಿಲ್ಲಾಧಿಕಾರಿ ಆದೇಶ

ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿತೀರ ಹಾಗೂ ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗೃತೆ ವಹಿಸಬೇಕು. ಮೀನುಗಾರರು ಸಮುದ್ರಕ್ಕೆ ಇಳಿಯಬಾರದು. ಪ್ರವಾಸಿಗರು/ಸಾರ್ವಜನಿಕರು ನದಿತೀರಕ್ಕೆ, ಸಮುದ್ರತೀರಕ್ಕೆ, ಚಾರಣಕ್ಕೆ ತೆರಳಬಾರದು ಎಂದು ಮುನ್ಸೂಚನೆ ನೀಡಲಾಗಿದೆ.

ಇದನ್ನೂ ಓದಿದ್ದೀರಾ? ದಕ್ಷಿಣ ಕನ್ನಡ | ಭಾರೀ ಮಳೆ; ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಣೆ

ಪ್ರಾಕೃತಿಕ ವಿಕೋಪಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ತುರ್ತು ಸೇವೆಗೆ ಟೋಲ್ ಫ್ರೀ ದೂರವಾಣಿ ಸಂಖ್ಯೆ – 1077, 0824 2442590ಕ್ಕೆ ಸಂಪರ್ಕಿಸುವಂತೆ ತಿಳಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...