ದಕ್ಷಿಣ ಕನ್ನಡ | ಜೆರೋಸಾ ಶಾಲೆ ಪ್ರಕರಣದ ತನಿಖೆಗೆ ಐಎಎಸ್ ಅಧಿಕಾರಿ ನೇಮಕ: ಸಚಿವ ದಿನೇಶ್ ಗುಂಡುರಾವ್ 

Date:

ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ನಗರದ ಜೆರೋಸಾ ಶಾಲೆಯಲ್ಲಿ ನಡೆದ ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸಲು ಗುಲ್ಬರ್ಗದ ಶಾಲಾ ಶಿಕ್ಷಣ ಇಲಾಖೆಯ ಹೆಚ್ಚುವರಿ ಆಯುಕ್ತ ಐಎಎಸ್ ಅಧಿಕಾರಿ ಡಾ.ಆಕಾಶ್ ಎಸ್ ಅವರನ್ನು ತನಿಖಾಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡುರಾವ್ ತಿಳಿಸಿದರು.

ಮಂಗಳೂರು ನಗರಲ್ಲಿ ಈ ದಿನ.ಕಾಮ್ ಜೊತೆ ಮಾತನಾಡಿದ ಸಚಿವರು, “ಶಾಲೆಯಲ್ಲಿ ನಡೆದಿರುವ ಪಠ್ಯ ಪ್ರವಚನದ ಬಗ್ಗೆಯೂ ಕೂಡ ತನಿಖೆಯಾಗಲಿದೆ. ಪೋಷಕರ ದೂರಿನ ಬಗ್ಗೆಯೂ ತನಿಖೆಯಾಗಲಿದೆ” ಎಂದು ಸಚಿವರು ತಿಳಿಸಿದರು.

“ಶಾಲೆಯೊಳಗೆ ಇತ್ಯರ್ಥಪಡಿಸಬಹುದಾಗಿದ್ದ ವಿಚಾರವನ್ನು ಶಾಸಕರಿಬ್ಬರು ಸೇರಿಕೊಂಡು ಆಶಾಂತಿಯ ಹಾಗೂ ಭಯ ಹುಟ್ಟಿಸುವ ರೀತಿಯಲ್ಲಿ ಪರಿವರ್ತನೆ ಮಾಡಿದ್ದು ನಿಜಕ್ಕೂ ವಿಷಾದನೀಯ. ನಾಗರಿಕ ಸಮಾಜ ತಲೆ ತಗ್ಗಿಸುವ ವಿಚಾರವಾಗಿದೆ” ಎಂದು ಸಚಿವ ಗುಂಡುರಾವ್ ಅವರು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪ್ರಕರಣದ ಒಟ್ಟಾರೆ ಸಂಚು ಯಾವ ರೀತಿ ನಡೆದಿತ್ತು, ಯಾರು ಸಂಚು ರೂಪಿಸಿದರು, ಶಾಸಕರು ಯಾವ ರೀತಿಯಲ್ಲಿ ಪ್ರಚೋದನೆ ಮಾಡಿದರು ಎನ್ನುವ ಬಗ್ಗೆ ಕೂಡ ತನಿಖೆ ನಡೆಯಲಿದೆ” ಎಂದು ಸಚಿವ ಗುಂಡುರಾವ್ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಹೋರಾಟದಲ್ಲಿ ಮೃತಪಟ್ಟ ರೈತರಿಗೆ ಶ್ರದ್ಧಾಂಜಲಿ ಸಲ್ಲಿಸಿ ಸಿಪಿಐಎಂಎಲ್ ರೆಡ್ ಸ್ಟಾರ್

ಶಾಸಕ ವೇದವ್ಯಾಸ ಕಾಮತ್ ಶಾಲೆಯ ಬಳಿಗೆ ಬಂದು ಇನ್ನೋರ್ವ ಶಾಸಕ ಭರತ್ ಶೆಟ್ಟಿ ಶಿಕ್ಷಣಾಧಿಕಾರಿ ಕಚೇರಿ ಬಳಿ ಜನ ಸೇರಿಸಿ ಕೋಮು ಪ್ರಚೋದನೆ ಮಾಡಿರುವುದು ದಾಖಲೆ ಸಹಿತ ಸಾಬೀತಾಗಿದೆ. ಇದರಿಂದ ಅವರ ವಿರುದ್ಧ ಎಫ್‌ಐಆರ್ ದಾಖಲು ಮಾಡಲಾಗಿದೆ. ಇದೀಗ ತಮ್ಮ ಮೇಲಿನ ಎಫ್‌ಐಆರ್ ಹಿಂಪಡೆಯುವಂತೆ ಈ ಶಾಸಕರಿಬ್ಬರು ಒತ್ತಾಯಿಸುತ್ತಿದ್ದಾರೆ. ಆದರೆ ಅವರು ಆಗ್ರಹಿಸಿದ ಎಫ್‌ಐಆರ್ ಹಿಂಪಡೆಯಲು ಸಾಧ್ಯವಿಲ್ಲ. ಕಾನೂನಿನ ಪ್ರಕಾರ ತನಿಖೆ ನಡೆಯಲಿದೆ, ಕಾನೂನಿನ ಪ್ರಕಾರವೇ ಕ್ರಮ ಜರುಗಿಸಲಾಗುವುದು” ಎಂದು ಸಚಿವ ದಿನೇಶ್ ಗುಂಡೂರಾವ್ ಅವರು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...