ದಕ್ಷಿಣ ಕನ್ನಡ | ಸೌಜನ್ಯ ಪ್ರಕರಣದ ರಹಸ್ಯ ಬಿಚ್ಚಿಟ್ಟರೆ, ನನ್ನನ್ನೂ ಕೊಲ್ಲಬಹುದು: ಮಾಜಿ ಶಾಸಕ ವಸಂತ ಬಂಗೇರ

Date:

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ಒತ್ತಾಯಿಸಿ ರಾಜ್ಯಾದ್ಯಂತ ಹೋರಾಟಗಳು ಭುಗಿಲೆದ್ದಿವೆ. ಪ್ರಕರಣವನ್ನು ಮುಚ್ಚಿಹಾಕಲು ಪ್ರಭಾವಿಗಳು ಯತ್ನಿಸುತ್ತಿದ್ದಾರೆ ಎಂಬ ಆರೋಪಗಳು ಮೊದಲಿನಿಂದಲೂ ಕೇಳಿಬರುತ್ತಿವೆ. ಪ್ರಕರಣದ ಬಗ್ಗೆ ಮಾತನಾಡಿರುವ ಕಾಂಗ್ರೆಸ್‌ ಮುಖಂಡ, ಮಾಜಿ ಶಾಸಕ ವಸಂತ ಬಂಗೇರ, ‘ಸೌಜನ್ಯ ಪ್ರಕರಣದ ರಹಸ್ಯವನ್ನು ಬಿಚ್ಚಿಟ್ಟರೆ, ನನನ್ನೂ ಸಾಯಿಸಬಹುದು” ಎಂದು ಹೇಳಿದ್ದಾರೆ.

ಮಂಗಳೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, “ನಾನು ಶಾಸಕನಾಗಿದ್ದಾಗ ಸೌಜನ್ಯ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಸದನದಲ್ಲಿ ಆಗ್ರಹಿಸಿದ್ದೆ. ಮೊದಲಿಗೆ ಸಿಬಿಐಗೆ ವಹಿಸುವುದು ಸಾಧ್ಯವಿಲ್ಲವೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದರು. ಆ ನಂತರ, ಸಿಬಿಐಗೆ ವಹಿಸಲಾಯಿತು. ಆದರೆ, ಕೆಲವರು ಸಿಬಿಐ ತನಿಖೆಯನ್ನು ದಾರಿ ತಪ್ಪಿಸಿದ್ದಾರೆ” ಎಂದು ಹೇಳಿದ್ದಾರೆ.

“ಸೌಜನ್ಯ ಪ್ರಕರಣ ಮಾತ್ರವಲ್ಲ, ಬೆಳ್ತಂಗಡಿಯಲ್ಲಿ ನಡೆದ ಎಲ್ಲ ಅಮಾನುಷ ಕೊಲೆಗಳ ಕುರಿತು ಮುಖ್ಯಮಂತ್ರಿಗಳಿಗೆ ತಿಳಿಸಿದ್ದೆ. ಸೌಜನ್ಯ ಪ್ರಕರಣ ಸಿಬಿಐ ತನಿಖೆಯಲ್ಲಿ ನ್ಯಾಯ ಸಿಗುತ್ತೆ ಎಂಬ ನಂಬಿಕೆ ನನಗಿತ್ತು. ಆದರೆ, ಸಿಬಿಐ ತನಿಖೆ ಅರ್ಧದಷ್ಟು ಮುಂದೆಹೋದಾಗ ತನಿಖೆಯಲ್ಲಿ ಮೋಸವಾಗುತ್ತಿದೆ ಎಂದು ಗೊತ್ತಾಯಿತು. ಅದನ್ನು ಸಾರ್ವಜನಿಕವಾಗಿ ಹೇಳಲು ಸಾಧ್ಯವಿಲ್ಲ. ಆದರೆ ಸಂದರ್ಭ ಬಂದಾಗ ನಾನು ಅದನ್ನು ಪ್ರಸ್ತಾಪಿಸುತ್ತೇನೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪ್ರಕರಣದ ರಹಸ್ಯಗಳನ್ನು ಹೇಳಲು ಒಂದಲ್ಲ ಒಂದು ದಿನ ಕಾಲ ಬರುತ್ತದೆ. ಅವತ್ತು ಸೌಜನ್ಯ ಪ್ರಕರಣದ ದಿಕ್ಕು ತಪ್ಪಿಸಿದ್ದು ಯಾರು. ಅನ್ಯಾಯ, ತೊಂದರೆ ಕೊಟ್ಟಿದ್ದು ಯಾರು ಎಂದು ಹೇಳುತ್ತೇನೆ. ಆದರೆ, ಅದನ್ನು ಹೇಳಿದರೆ, ಅವರು ನನ್ನನ್ನು ಸಾಯಿಸಲೂಬಹುದು” ಎಂದು ಹೇಳಿದ್ದಾರೆ.

“ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಪ್ರಕರಣವನ್ನು ಹೇಗೆ ತನಿಖೆ ಮಾಡಬೇಕೆಂಬ ಬಗ್ಗೆ ವಿವರಿಸುತ್ತೇನೆ. ಖಾಕಿಯವರನ್ನೂ ಕೈ-ಕಾಲು ಕಟ್ಟಿ ತನಿಖೆ ಮಾಡಿಸುವಂತೆ ಸಿದ್ದರಾಮಯ್ಯನವರಿಗೆ ತಿಳಿಸುತ್ತೇನೆ. ತಪ್ಪು ಮಾಡಿದವರು ಎಷ್ಟೇ ದೊಡ್ಡ ವ್ಯಕ್ತಿಗಳಾಗಿದ್ದರೂ ಶಿಕ್ಷೆ ಅನುಭವಿಸಲೇಬೇಕು” ಎಂದು ವಿವರಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...