ದಕ್ಷಿಣ ಕನ್ನಡ | ಮೂರು ವಾಹನಗಳಲ್ಲಿ ಅಕ್ರಮ ಗೋವು ಸಾಗಾಟ; ಬಿಜೆಪಿ ಕಾರ್ಯಕರ್ತರು ಸೇರಿ ನಾಲ್ವರ ಬಂಧನ

Date:

ಬಿಜೆಪಿ ಕಾರ್ಯಕರ್ತರ ನೇತೃತ್ವದಲ್ಲಿ ಮೂರು ವಾಹನಗಳಲ್ಲಿ ಹಿಂಸಾತ್ಮಕವಾಗಿ ದನ-ಕರುಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಪ್ರಕರಣವೊಂದನ್ನು ಪತ್ತೆ ಹಚ್ಚಿರುವ ಧರ್ಮಸ್ಥಳ ಪೊಲೀಸರು, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಮೋರ್ತಾಜೆ ನಿವಾಸಿ ಪ್ರಮೋದ್ ಸಾಲ್ಯಾನ್, ಒಳಗದ್ದೆ ನಿವಾಸಿ ಪುಷ್ಪರಾಜ್ ಹಾಗೂ ಹಾಸನ ಜಿಲ್ಲೆಯ ಕಸಬಾ ಹೋಬಳಿ, ಅರಕಲಗೂಡು ನಿವಾಸಿ ಚೆನ್ನಕೇಶವ ಮತ್ತು ಹೊಳೆನರಸೀಪುರ ನಿವಾಸಿ ಸಂದೀಪ್ ಹಿರೇಬೆಳಗುಳಿ ಬಂಧಿತ ಆರೋಪಿಗಳಾಗಿದ್ದು, ಇವರು ಸಕ್ರಿಯ ಬಿಜೆಪಿ ಕಾರ್ಯಕರ್ತರು ಎನ್ನಲಾಗಿದೆ. ಗೋವುಗಳ ಅಕ್ರಮ ಸಾಗಾಟಕ್ಕೆ ಬಳಸಿದ್ದ ಮೂರು ವಾಹನ, 6 ದನ ಮತ್ತು 2 ಹೋರಿ ಕರುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಘಟನೆ ಹಿನ್ನೆಲೆ: ಖಚಿತ ಮಾಹಿತಿಯ ಹಿನ್ನೆಲೆಯಲ್ಲಿ ಧರ್ಮಸ್ದಳ ಠಾಣೆಯ ಎಸ್‌ಐ ಅನಿಲ್ ಕುಮಾರ್ ನೇತೃತ್ವದ ತಂಡ ಜುಲೈ 12ರ ರಾತ್ರಿ ಧರ್ಮಸ್ಥಳ ಗ್ರಾಮದ ಕನ್ಯಾಡಿ ರಾಮ ಮಂದಿರದ ಬಳಿ ವಾಹನಗಳನ್ನು ತಪಾಸಣೆ ಮಾಡುತ್ತಿತ್ತು. ರಾತ್ರಿ 8-45ರ ಸುಮಾರಿಗೆ ಉಜಿರೆ ಕಡೆಯಿಂದ ಧರ್ಮಸ್ಥಳದತ್ತ ಬರುತ್ತಿದ್ದ ಎರಡು ಪಿಕಪ್ ಸೇರಿದಂತೆ ಮೂರು ವಾಹನಗಳಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಾಹನದಲ್ಲಿ ಆರು ದನಗಳು, ಎರಡು ಹೋರಿಕರುಗಳು ಸೇರಿ ಒಟ್ಟು 8 ಜಾನುವಾರುಗಳನ್ನು ತುಂಬಿಸಿ ಅಕ್ರಮವಾಗಿ ಸಾಗಾಟ ಮಾಡುತ್ತಿರುವುದು ಕಂಡುಬಂದಿತ್ತು. ವಾಹನದಲ್ಲಿದ್ದವರನ್ನು ಪೊಲೀಸರು ವಿಚಾರಿಸಿದಾಗ ಮಾರಾಟ ಮಾಡುವ ಉದ್ದೇಶದಿಂದ ಸಾಗಾಟ ಮಾಡುತ್ತಿರುವುದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ವಾಹನ ಸಹಿತ ಜಾನುವಾರುಗಳನ್ನು ವಶಪಡಿಸಿಕೊಂಡು, ನಾಲ್ವರು ಆರೋಪಿಗಳನ್ನು ಬಂಧಿಸಿರುವುದಾಗಿ ಪೊಲೀಸರು ತಿಳಿಸಿರುವುದು ವರದಿಯಾಗಿದೆ.

ಈ ಸುದ್ದಿ ಓದಿದ್ದೀರಾ? ಹಾಸನ | ಕರ್ತವ್ಯ ಲೋಪ; ಮೂವರು ಪಿಡಿಒಗಳ ಅಮಾನತು

ವಶಕ್ಕೆ ಪಡೆದ ಜಾನುವಾರುಗಳ ಅಂದಾಜು ಮೌಲ್ಯ ₹65,000 ಹಾಗೂ ವಾಹನಗಳ ಅಂದಾಜು ಮೌಲ್ಯ ₹7 ಲಕ್ಷ ಸೇರಿದಂತೆ ಒಟ್ಟು ಸೊತ್ತುಗಳ ಅಂದಾಜು ಮೊತ್ತ ₹7.65 ಲಕ್ಷ ಎಂದು ಅಂದಾಜಿಸಲಾಗಿದೆ. ಧರ್ಮಸ್ಥಳ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...