ದಕ್ಷಿಣ ಕನ್ನಡ | ಗುಡಿಸು ಅಂದ್ರೆ ಗುಡಿಸುವೆ, ಒರಸು ಅಂದ್ರೆ ಒರಸುವೆ: ನಳಿನ್ ಕುಮಾರ್ ಕಟೀಲ್

Date:

ಲೋಕಸಭಾ ಚುಣಾವಣೆಗೆ ಟಿಕೆಟ್ ಕೈ ತಪ್ಪುವ ಸಾಧ್ಯತೆ ಹಿನ್ನಲೆಯಲ್ಲಿ ಮಂಗಳೂರಿನಲ್ಲಿ ಮಂಗಳವಾರ (ಮಾ.12) ಪ್ರತಿಕ್ರಿಯಿಸಿದ ಸಂಸದ ನಳಿನ್ ಕುಮಾರ್ ಕಟೀಲ್ ಭಾವುಕರಾಗಿ ಮಾತನಾಡಿದ್ದಾರೆ.‌ “ಟಿಕೆಟ್ ಮಿಸ್ ಆದ್ರೆ ನನಗೆ ಏನು ಬೇಸರ ಇಲ್ಲ. ಪಕ್ಷದ ಕೆಲಸ ಮಾಡ್ತೇನೆ. ಪಕ್ಷ ಗುಡಿಸು ಅಂದ್ರೆ ಗುಡಿಸುತ್ತೇನೆ, ಒರಸು ಅಂದ್ರೆ ಒರಸುತ್ತೇನೆ, ನನಗೆ ಯಾವ ಬೇಸರವೂ ಇಲ್ಲ” ಎಂದಿದ್ದಾರೆ.

“ಟಿಕೆಟ್ ನಿರಾಕರಣೆಯಾದರೆ ನನಗಂತು ಅಸಮಾಧಾನ ಇಲ್ಲ. ಅಸಮಾಧಾನ ಯಾಕೆ? ಪಕ್ಷ ನನಗೆ ಮೂರು ಅವಧಿ ಅವಕಾಶ ನೀಡಿದೆ. 15 ವರ್ಷ ಸಂಸದನಾಗಿ ಕೆಲಸ ಮಾಡಲು ಅವಕಾಶ ನೀಡಿದೆ” ಎಂದರು.‌

“ನಮ್ಮ ಪಾರ್ಟಿಯಲ್ಲಿ ತುಳಿಯುವ ಕೆಲಸ ನಡೆಯಲ್ಲ. ಬೆಳೆಸುವ ಕೆಲಸ ನಡೆಯುತ್ತೆ, ನಾನೊಬ್ಬ ಸಾಮಾನ್ಯ ಕಾರ್ಯಕರ್ತನಾಗಿದ್ದೆ, ಸಂಘದ ಕೆಲಸ ಮಾಡಿಕೊಂಡಿದ್ದೆ, ಬಿಜೆಪಿಯ ಕೆಲಸ ಮಾಡೋ ಅಂದ್ರು, ಆಕೆಲಸ ಮಾಡಿದ್ದೇನೆ. ಯಾವ ಪಾರ್ಟಿಯಲ್ಲಿ ಒಬ್ಬ ಸಾಮಾನ್ಯ ಕಾರ್ಯಕರ್ತನನ್ನ ರಾಜ್ಯಾಧ್ಯಕ್ಷ ಮಾಡ್ತಾರೆ? ನನಗೆ ಇಂತಹ ಅವಕಾಶ ಪಕ್ಷ ಕೊಟ್ಟಿದೆ.‌ ಅದರ ಬಗ್ಗೆ ತೃಪ್ತಿ ಇದೆ” ಎಂದು ನಳಿನ್ ಹೇಳಿದರು.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅವಕಾಶ ಸಿಕ್ಕಾಗ ನನಗೆ ನ್ಯಾಯ, ಸಿಕ್ಕಿದೆ ಅವಕಾಶ ಸಿಗ್ಲಿಲ್ಲ ಅಂದಾಗ ಅನ್ಯಾಯ ಆಗಿದೆ ಅನ್ನುವ ಜಾಯಮಾನ  ನನ್ನದಲ್ಲ. ಪಾರ್ಟಿ ಏನು ಹೇಳುತ್ತೋ ಆ ಕೆಲಸ ಮಾಡುವವರು ನಾವು, ಗುಡಿಸಿ ಅಂದರೆ ಗುಡಿಸುವವರರು, ಒರೆಸಿ ಎಂದರೆ ಒರೆಸುವವರು. ರಾಷ್ಟ್ರೀಯ ನಾಯಕರ ಚಿಂತನೆಗಳಿಗೆ, ಅವರ ನಿರ್ಧಾರಕ್ಕೆ ನಾನು ಬದ್ಧ” ಎಂದು ನಳಿನ್ ಕುಮಾರ್ ಕಟೀಲ್ ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...