ದಕ್ಷಿಣ ಕನ್ನಡ | ಮಂಗಳೂರು ಮಳೆ ನೀರಿನಲ್ಲಿ ಕೆಟ್ಟು ನಿಂತ ಬಸ್; ಸ್ಮಾರ್ಟ್‌ಸಿಟಿ ಅಣಕಿಸಿದ ನೆಟ್ಟಿಗರು

Date:

ಒಂದು ತಿಂಗಳು ತಡವಾಗಿ ನೈರುತ್ಯ ಮಾನ್ಸೂನ್ ಮಾರುತಗಳು (ಮುಂಗಾರು ಮಳೆ) ರಾಜ್ಯವನ್ನು ಪ್ರವೇಶಿಸಿವೆ. ಕರಾವಳಿ ಭಾಗದಲ್ಲಿ ಕಳೆದ ನಾಲ್ಕು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳಿಗೆ ಮಂಗಳವಾರ ರಜೆ ಘೋಷಿಸಲಾಗಿದೆ.

ಮಂಗಳೂರು ಸೇರಿದಂತೆ ಜಿಲ್ಲೆಯ ನಾನಾ ಭಾಗಗಳಲ್ಲಿ ಅಬ್ಬರದ ಮಳೆಯಾಗುತ್ತಿದ್ದು, ಹಲವಾರು ಪ್ರದೇಶಗಳು ಜಲಾವೃತಗೊಂಡಿವೆ. ಮಂಗಳೂರು ನಗರದ ಹಲವು ರಸ್ತೆಗಳಲ್ಲಿ ನೀರು ತುಂಬಿಕೊಂಡಿದೆ. ಸಂಚಾರ ಅಸ್ಥವ್ಯಸ್ಥವಾಗಿದೆ. ನಗರದ ಪಂಪ್‌ವೆಲ್‌ ರಸ್ತೆಯಲ್ಲಿ ತುಂಬಿರುವ ನೀರಿನಿಂದ ಖಾಸಗೀ ಬಸ್‌ವೊಂದರ ಎಂಜಿನ್ ಹಾಳಾಗಿದ್ದು, ರಸ್ತೆಯಲ್ಲಿಯೇ ಕೆಟ್ಟುಹೋಗಿದೆ.

ಆ ಬಸ್‌ಅನ್ನು ನೀರಿನ ಮಧ್ಯದಲ್ಲಿಯೇ ಹಲವಾರು ತಳ್ಳಿಕೊಂಡು ಹೋಗುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಹಲವು ನೆಟ್ಟಿಗರು ಮಂಗಳೂರು ಸ್ಮಾರ್ಟ್‌ಸಿಟಿ ಯೋಜನೆಯನ್ನು ಅಣಕಿಸಿ, ವ್ಯಂಗ್ಯವಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನೆಟ್ಟಿಗರೊಬ್ಬರು ವಿಡಿಯೋವನ್ನು ಟ್ವಿಟರ್‌ನಲ್ಲಿ ಅಪ್‌ಲೋಡ್ ಮಾಡಿದ್ದು, ‘ಸ್ಮಾರ್ಟ್ ಸಿಟಿ ಮಂಗಳೂರು. ಶ್ರೇಯಸ್ಸೆಲ್ಲಾ ಮೋದಿಯವರಿಗೇ ಮೀಸಲು’ ಎಂದು ವ್ಯಂಗ್ಯವಾಡಿದ್ದಾರೆ.

ವಿಡಿಯೋವನ್ನು ಹಲವರು ರೀ-ಟ್ವೀಟ್‌ ಮಾಡಿದ್ದು, “ಚರಂಡಿ, ಮೋರಿ, ರಸ್ತೆಗಳ ಬಗ್ಗೆ ಮಾತಾಡಬೇಡಿ. ಲವ್ ಜಿಹಾದ್ ಬಗ್ಗೆ ಮಾತಾಡಿ” ಎಂದು ಲೇವಡಿ ಮಾಡಿದ್ದಾರೆ. ಕೆಲವರು “40% ಕಮಿಷನ್‌ನ ಕೃಪೆ” ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...