ದಕ್ಷಿಣ ಕನ್ನಡ | ಅಪ್ರಾಪ್ತೆ ಮೇಲೆ ಅತ್ಯಾಚಾರ; ಕಾಮುಕ ಆರೋಪಿ ಬಂಧನ

Date:

ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿ, ಆಕೆ ಗರ್ಭಿಣಿಯಾಗುವಂತೆ ಮಾಡಿದವನನ್ನು ಮಂಗಳೂರಿನ ಮಹಿಳಾ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಉಳ್ಳಾಲ ಪೇಟೆಯ ಮಹಮ್ಮದ್‌ ಶಾಫಿ ಯಾನೆ ಶಾಫಿ ಎಂಬಾತ ಬಂಧಿತ ಆರೋಪಿ.

ಜುಲೈ 15ರಂದು 12 ವರ್ಷ 10 ತಿಂಗಳು ಪ್ರಾಯದ ಬಾಲಕಿ ತನ್ನ ತಾಯಿಯೊಂದಿಗೆ ಮಂಗಳೂರು ಮಹಿಳಾ ಪೊಲೀಸ್ ಠಾಣೆಗೆ ಬಂದು ಒಂದು ದೂರು ನೀಡಿದ್ದಳು. ಹಾಗೆ ಬಂದಾಗ ಆಕೆ ಆರು ತಿಂಗಳ ಗರ್ಭಿಣಿಯಾಗಿದ್ದಳು. ಮಹಿಳಾ ಪೊಲೀಸರು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಇದೀಗ ಆರೋಪಿಯನ್ನು ಬಂಧಿಸಿ ಪೋಕ್ಸೊ ಕಾಯಿದೆಯಡಿ ಪ್ರಕರಣ ದಾಖಲಿಸಿದ್ದಾರೆ.

ಸಂತ್ರಸ್ತೆ ಬಾಲಕಿ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಆಕೆ ಶಾಲೆಗೆ ಹೋಗಿ ಬರುವ ದಾರಿಯಲ್ಲಿ ಆಗಾಗ ಸಿಗುತ್ತಿದ್ದ ಉಳ್ಳಾಲ ಪೇಟೆಯ ಮಹಮ್ಮದ್ ಶಾಫಿ ಯಾನೆ ಶಾಫಿ ಎಂಬಾತ ಆಕೆಯ ಪರಿಚಯ ಮಾಡಿಕೊಂಡಿದ್ದ. ಬಳಿಕ ಆಗಾಗ ಮಾತನಾಡಲು ಶುರು ಮಾಡಿದ್ದ. ಜೊತೆಗೆ ಆಕೆಯ ಮನೆ ವಿಷಯ ತಿಳಿದುಕೊಂಡಿದ್ದ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇದೇ ಜನವರಿ ತಿಂಗಳಲ್ಲಿ ಬಾಲಕಿ ಮನೆಯಲ್ಲಿ ಒಬ್ಬಳೇ ಇರುವುದನ್ನು ತಿಳಿದುಕೊಂಡ ಶಾಫಿ ಆವತ್ತು ಆಕೆಯ ಮನೆಗೆ ಬಂದಿದ್ದಾನೆ. ಪರಿಚಯದ ನೆಲೆಯಲ್ಲಿ ಮಾತು ಆರಂಭಿಸಿದ ಆತ ಬಾಲಕಿಯ ಬಾಯಿಗೆ ಕೈ ಹಿಡಿದು ಪಕ್ಕದ ರೂಮಿಗೆ ಎಳೆದುಕೊಂಡು ಹೋಗಿ ಆಕೆಯ ಮೇಲೆ ಅತ್ಯಾಚಾರ ಮಾಡಿದ್ದ. ಬಳಿಕ ಆಕೆಯ ಮನವೊಲಿಸಿ, ಕೆಲವೊಮ್ಮೆ ಬ್ಲ್ಯಾಕ್‌ಮೇಲ್‌ ಮಾಡಿ ಇತರೆ ದಿನಗಳಲ್ಲೂ ಅವಳು ಒಬ್ಬಳೇ ಇದ್ದಾಗ ಆಕೆಯ ಮನೆಗೆ ಹೋಗಿ ಅತ್ಯಾಚಾರ ಎಸಗಿದ್ದಾನೆ” ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಈ ನಡುವೆ ಈಗ ಆಕೆ 6 ತಿಂಗಳ ಗರ್ಭಿಣಿಯಾಗಿದ್ದಾಳೆ‌. ಆಕೆಯ ಹೊಟ್ಟೆ ದೊಡ್ಡದಾಗುತ್ತಿರುವುದು, ತಿಂಗಳ ಋತುಸ್ರಾವ ನಡೆಯದೆ ಇರುವುದನ್ನು ಗಮನಿಸಿ ಮನೆಯವರು ವಿಚಾರಿಸಿದಾಗ ಈ ವಿಷಯ ಬಯಲಾಗಿದೆ.

ಈ ಸುದ್ದಿ ಓದಿದ್ದೀರಾ? ಉಡುಪಿ ಪ್ರಕರಣ: ತನಿಖಾಧಿಕಾರಿ ಬದಲಾವಣೆ

ಅಪ್ರಾಪ್ತೆ ನೀಡಿದ ದೂರಿನಂತೆ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಂತೆ ಕೇಸು ದಾಖಲಾಗಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಶನಿವಾರ ಬೆಳಗ್ಗೆ ಬಂಧಿಸಿದ್ದಾರೆ.

ಆರೋಪಿಯನ್ನು ಮಂಗಳೂರು ಮಹಿಳಾ ಪೊಲೀಸ್ ಠಾಣೆಯ ಪೊಲೀಸರು ಮತ್ತು ಉಳ್ಳಾಲ ಪೊಲೀಸ್ ಠಾಣಾ ಪೊಲೀಸರು ಸೇರಿ ಬಂಧಿಸಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯವು 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿರುತ್ತದೆ. ಈ ಪ್ರಕರಣದ ತನಿಖೆಯನ್ನು ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪೊಲೀಸ್ ನಿರೀಕ್ಷಕ ಲೋಕೇಶ್ ಎ.ಸಿ ಅವರು ನಡೆಸುತ್ತಿದ್ದಾರೆ. ಮುಂದೆ ಬಾಲಕಿಯ ಆರೈಕೆ ಮತ್ತಿತರ ವಿಚಾರಗಳ ಬಗ್ಗೆ ಅವಲೋಕನ ನಡೆಯಬೇಕಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...