ದಕ್ಷಿಣ ಕನ್ನಡ | ಆನ್‌ಲೈನ್‌ನಲ್ಲಿ ಕ್ರಿಕೆಟ್ ಬೆಟ್ಟಿಂಗ್; ಹಲವರ ಬಂಧನ

Date:

ಕರಾವಳಿಯಲ್ಲಿ ಆನ್‌ಲೈನ್‌ ಮೂಲಕ ಕ್ರಿಕೆಟ್ ಬೆಟ್ಟಿಂಗ್ ನಡೆಸುವ ಜಾಲವೊಂದನ್ನು ಪೊಲೀಸರು ಪತ್ತೆ ಹಚ್ಚಿದ್ದು, ಆರೋಪಿಗಳನ್ನು ಸೆರೆಹಿಡಿದಿದ್ದಾರೆ.

ಮಂಗಳೂರು ಸಿಟಿ ಪೊಲೀಸ್ ಕಮೀಷನರ್ ನಿರ್ದೇಶನದ ಮೇರೆಗೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಬೆಟ್ಟಿಂಗ್‌ ನಡೆಸುತ್ತಿದ್ದ ಪತ್ಯೇಕ ಪ್ರಕರಣಗಳಲ್ಲಿ ಹಲವರನ್ನು ಬಂಧಿಸಲಾಗಿದೆ. ಮೊದಲನೇ ಪ್ರಕರಣದಲ್ಲಿ ಮಾರ್ಪಾಡಿಯ ಸುಖೇಶ್ ಆಚಾರ್ಯ(33) ಉಮೇಶ್(40) ಮತ್ತು ಪುರಂದರ ಕುಲಾಲ್(38) ಎಂಬ ಆರೋಪಿಗಳನ್ನು ಬಂಧಿಸಲಾಗಿದೆ.

ಮೂಡುಬಿದಿರೆಯ ಕಡಲಕೆರೆ ಪಾರ್ಕ್‌ನಲ್ಲಿ ಸುಖೇಶ್ ಆಚಾರ್ಯ ಎಂಬಾತನು ಪುರಂದರ್ ಎಂಬಾತನಿಂದ ಹಣ ಪಡೆದು allpaanel.com/m/home ಎಂಬ ಮೊಬೈಲ್ ವೆಬ್ ಸೈಟ್‌ನಲ್ಲಿ ಕ್ರಿಕೆಟ್ ಬೆಟ್ಟಿಂಗ್ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯಂತೆ ಸ್ಥಳಕ್ಕೆ ದಾಳಿ ನಡೆಸಿ ಸುಖೇಶ್ ಆಚಾರ್ಯ ಎಂಬಾತನನ್ನು ಹಿಡಿದು ಪೊಲೀಸರು ವಿಚಾರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶ್ರೀಲಂಕ ಮತ್ತು ಆಸ್ಪ್ರೇಲಿಯಾ ಕ್ರಿಕೆಟ್ ಪಂದ್ಯದಲ್ಲಿ ಬೆಟ್ಟಿಂಗ್ ಮಾಡಲು ಅವರಿಂದ ಹಣ ಪಡೆದು ಬೆಟ್ಟಿಂಗ್ ಆಡುತ್ತಿರುವುದಾಗಿ ಸುಖೇಶ್ ಆಚಾರ್ಯ ವಿಚಾರಣೆ ವೇಳೆ ತಿಳಿಸಿದ್ದು, allpaanel.com/m/home ಎಂಬ ವೆಬ್ ಸೈಟನ್ನು ಮುಂಬೈನಲ್ಲಿರುವ ವ್ಯಕ್ತಿ ನಿಯಂತ್ರಣ ಮಾಡುತ್ತಿದ್ದಾನೆಂದು ತಿಳಿಸಿರುತ್ತಾನೆ.

ಆರೋಪಿ ಸುಖೇಶ್ ಆಚಾರ್ಯನ ಬಳಿ ಇರುವ ಮೋಬೈಲ್‌ನ ಗೂಗಲ್ ಕ್ರೋಮ್‌ ಪರಿಶೀಲಿಸಿದಾಗ allpaanel.com/m/home ಎಂಬ ವೆಬ್ ಸೈಟ್‌ನಲ್ಲಿ ಹಣ ಪಣವಾಗಿರಿಸಿ ಕ್ರಿಕೆಟ್ ಬೆಟ್ಟಿಂಗ್‌ಗೆ ತೊಡಗಿಸಿಕೊಂಡಿರುವ ಬಗ್ಗೆ ಕಂಡುಬಂದಿದೆ. ಶ್ರೀಲಂಕ ಹಾಗೂ ಆಸ್ಟ್ರೇಲಿಯಾ ಕ್ರಿಕೆಟ್ ಪಂದ್ಯ ನಡೆದಿದ್ದು, ಈ ಪಂದ್ಯಕ್ಕಾಗಿ ಹಣವನ್ನು ಬೆಟ್ಟಿಂಗ್ ಹಾಕುವ ಗಿರಾಕಿಗಳಿಗಾಗಿ ಕಾಯುತ್ತಿರುವುದಾಗಿ ತಿಳಿಸಿದ್ದಾನೆ. ಇವರನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಲಾಗಿದೆ.

ಮತ್ತೊಂದು ಪ್ರಕರಣದಲ್ಲಿ ನವೀದ್ (30), ಉಮೇಶ್ (40), ಪ್ರಸಾದ್ ದೇವಾಡಿಗ (35) ಎಂಬುವವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.

ಮೂಡಬಿದಿರೆ ತಾಲೂಕು, ಮಾರ್ಪಾಡಿ ಗ್ರಾಮದ ಅಲಂಗಾರು ಎಂಬಲ್ಲಿರುವ ಅಂಗಡಿಯ ಮುಂಭಾಗ ನವೀದ್ ಎಂಬಾತನು ಪ್ರಸಾದ್ ಮತ್ತು ಉಮೇಶ್ ಎಂಬುವವರಿಂದ ಹಣ ಪಡೆದು Comfort Zone 247 ಎಂಬ ಮೊಬೈಲ್ ವೆಬ್ ಸೈಟ್‌ನಲ್ಲಿ ಕ್ರಿಕೆಟ್ ಬೆಟ್ಟಿಂಗ್ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯಂತೆ ಪೊಲೀಸರು ಸ್ಥಳಕ್ಕೆ ದಾಳಿ ನಡೆಸಿದ್ದಾರೆ.

ನವೀದ್ ಎಂಬಾತನನ್ನು ಹಿಡಿದು ವಿಚಾರಿಸಿದಾಗ ಶ್ರೀಲಂಕ ಮತ್ತು ಆಸ್ಪ್ರೇಲಿಯಾ ಕ್ರಿಕೆಟ್ ಪಂದ್ಯದಲ್ಲಿ  ಬೆಟ್ಟಿಂಗ್ ಮಾಡಲು ಅವರಿಂದ ಗೂಗಲ್ ಪೇ ಅಥವಾ ಫೋನ್ ಪೇ ಮೂಲಕ ಹಣ ಪಡೆಯುವುದಾಗಿ ತಿಳಿಸಿದ್ದಾನೆ.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | 5 ಗಂಟೆ ವಿದ್ಯುತ್‌ ಪೂರೈಕೆಗೆ ಬೆಸ್ಕಾಂ ಎಂ ಡಿ ಭರವಸೆ

Comfort Zone 247 ಎಂಬ ವೆಬ್ ಸೈಟನ್ನು ಮುಂಬೈನಲ್ಲಿರುವ ವ್ಯಕ್ತಿ ನಿಯಂತ್ರಣ ಮಾಡುತ್ತಿದ್ದಾನೆಂದು ತಿಳಿಸಿದ ಪ್ರಕಾರ ಆರೋಪಿ ನವೀದ್ ಬಳಿ ಇರುವ ಮೊಬೈಲ್‌ನ ಗೂಗಲ್ ಕ್ರೋಮ್‌ನಲ್ಲಿ Comfort Zone 247 ಎಂಬ ವೆಬ್ ಸೈಟ್‌ನಲ್ಲಿ ಹಣವನ್ನು ಪಣವಾಗಿರಿಸಿ ಕ್ರಿಕೆಟ್ ಬೆಟ್ಟಿಂಗ್‌ಗೆ ತೊಡಗಿಸಿಕೊಂಡಿರುವ ಬಗ್ಗೆ ಕಂಡುಬಂದಿದೆ.

ಮಾಹಿತಿ ಆಧಾರದ ಮೇಲೆ ಆರೋಪಿಗಳನ್ನು ವಶಕ್ಕೆ ಪಡೆದು ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...