ದಕ್ಷಿಣ ಕನ್ನಡ | 36 ‘ಆಸಾಮಿ’ಗಳನ್ನು ಗಡೀಪಾರು ಮಾಡಲು ಮುಂದಾದ ಪೊಲೀಸ್ ಇಲಾಖೆ : ಪಟ್ಟಿ ಬಿಡುಗಡೆ

Date:

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲವು ತಿಂಗಳುಗಳಿಂದ ನಡೆಯುತ್ತಿರುವ ಕೋಮು ಗಲಾಟೆಯ ಹಿನ್ನೆಲೆಯಲ್ಲಿ ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿರುವ ಪೊಲೀಸ್ ಇಲಾಖೆ, ಸುಮಾರು 36 ಮಂದಿ ರೌಡಿಶೀಟರ್ ಹಾಗೂ ರೌಡಿಗಳನ್ನು ಗಡೀಪಾರು ಮಾಡಲು ಕಾನೂನು ಕ್ರಮ ಕೈಗೊಳ್ಳಲು ಮುಂದಾಗಿದೆ.

ಈ ಬಗ್ಗೆ ಸುಮಾರು 36 ಮಂದಿಯ ಪಟ್ಟಿಯನ್ನು ಬಿಡುಗಡೆ ಮಾಡಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, “ಒಟ್ಟು 36 ಆಸಾಮಿಗಳನ್ನು ಗಡೀಪಾರು ಮಾಡುವ ಸಂಬಂಧ ಕಾನೂನು ಪ್ರಕ್ರಿಯೆಗಳನ್ನು ಆರಂಭಿಸಲಾಗಿದೆ” ಎಂದು ತಿಳಿಸಿದ್ದಾರೆ.

ಧರ್ಮಸ್ಥಳದಲ್ಲಿ ಅತ್ಯಾಚಾರಕ್ಕೆ ಒಳಗಾಗಿ ಕೊಲೆಗೀಡಾಗಿದ್ದ ಯುವತಿ ಸೌಜನ್ಯ ಪರ ಹೋರಾಟಗಾರರಾಗಿ ಗುರುತಿಸಿಕೊಂಡಿರುವ ಮಹೇಶ್ ಶೆಟ್ಟಿ ತಿಮರೋಡಿ, ಸಂಘಪರಿವಾರದ ಅರುಣ್ ಕುಮಾರ್ ಪುತ್ತಿಲ, ಭರತ್ ಕುಮ್ದೇಲು ಸೇರಿದಂತೆ ಒಟ್ಟು 36 ಜನರ‌ ಪಟ್ಟಿಯನ್ನು ಪೊಲೀಸ್ ಇಲಾಖೆ ಸೋಮವಾರ ಬಿಡುಗಡೆ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅರುಣ್ ಕುಮಾ‌ರ್ ಪುತ್ತಿಲ ಅವರಿಗೆ ಗಡೀಪಾರು ಬಗ್ಗೆ ನೋಟಿಸ್‌ ನೀಡಲಾಗಿದ್ದು ಜೂನ್ 6ರಂದು ವಿಚಾರಣೆ ಹಾಜರಾಗಲು ಈಗಾಗಲೇ ಪೊಲೀಸರು ಸೂಚನೆ ನೀಡಿದ್ದರು. ಇದರ ಬೆನ್ನಲ್ಲೇ ಪೊಲೀಸ್‌ ಇಲಾಖೆ, ಬಂಟ್ವಾಳ ನಗರ, ಬಂಟ್ವಾಳ ಗ್ರಾಮಾಂತರ, ಬೆಳ್ತಂಗಡಿ, ಪುತ್ತೂರು ನಗರ, ಪುತ್ತೂರು ಗ್ರಾಮಾಂತರ, ಸುಳ್ಯ, ಬೆಳ್ಳಾರೆ, ವಿಟ್ಲ ಠಾಣಾ ವ್ಯಾಪ್ತಿಯ ರೌಡಿ ಲಿಸ್ಟ್ ಹೊಂದಿರುವ ಹಿಂದೂ ಮತ್ತು ಮುಸ್ಲಿಂ ಸಂಘಟನೆ ಕಾರ್ಯಕರ್ತರು, ಸಂಘಪರಿವಾರದಲ್ಲಿ ಗುರುತಿಸಿಕೊಂಡವರ ಪಟ್ಟಿ ರೆಡಿ ಮಾಡಿದ್ದಾರೆ. ಇವರೆಲ್ಲರನ್ನೂ ಗಡೀಪಾರು ಮಾಡಲು ಕಾನೂನು ಪ್ರಕ್ರಿಯೆ ಆರಂಭಿಸಿದ್ದು, ಈ ಪಟ್ಟಿಯಲ್ಲಿರುವ ಒಟ್ಟು 36 ಮಂದಿಯಲ್ಲಿ 15 ಮಂದಿ ಮುಸ್ಲಿಮರಿದ್ದಾರೆ.

1000780695
WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...