ದಕ್ಷಿಣ ಕನ್ನಡ | ಉತ್ತಮ ಬಡ್ಡಿ ದರದೊಂದಿಗೆ ಅಂಚೆ ಯೋಜನೆ;‌ ಖಾತೆ ತೆರೆಯಲು ಕೆಲವೇ ದಿನ ಬಾಕಿ

Date:

ಉತ್ತಮ ಬಡ್ಡಿಯನ್ನು ಒದಗಿಸುವ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಮಹಿಳಾ ಸಮ್ಮಾನ್ ಉಳಿತಾಯ ಪ್ರಮಾಣ ಪತ್ರ  ಯೋಜನೆಯಡಿ ಖಾತೆ ತೆರೆಯಲು ಕೆಲವೇ ದಿನಗಳು ಬಾಕಿ ಇವೆ.

ಮಹಿಳಾ ಸಮ್ಮಾನ್‌ ಉಳಿತಾಯ ಖಾತೆ ಕುರಿತು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕಳೆದ ವರ್ಷ ಮಂಗಳೂರು ವಿಭಾಗದಲ್ಲಿ 23793 ಮಹಿಳಾ ಸಮ್ಮಾನ್‌ ಉಳಿತಾಯ ಖಾತೆ ರಚನೆಯಾಗಿದ್ದವು. ಈ ವರ್ಷ ಹತ್ತು ತಿಂಗಳ ಅವಧಿಯಲ್ಲಿ ಸುಮಾರು 11194 ಖಾತೆಗಳು ರಚನೆಯಾಗಿ ಮಾಹಿಳೆಯರು ನಗದು ಠೇವಣಿ ಇರಿಸಿದ್ದಾರೆ.

2023ರ ಏಪ್ರಿಲ್‌ 01ರಿಂದ ಜಾರಿಗೆ ಬಂದಿರುವ ಈ ಯೋಜನೆಯು ಇದೇ ಮಾರ್ಚ್‌ 31ರಂದು ಮುಕ್ತಾಯಗೊಳ್ಳಲಿದೆ. ಎರಡು ವರ್ಷದ ಅವಧಿಗೆ ಮಹಿಳೆಯರು ಈ ಯೋಜನೆಯಡಿ ಠೇವಣಿ ಇಡಲು ಅವಕಾಶವಿದೆ. ಕನಿಷ್ಟ 1 ಸಾವಿರದಿಂದ 2 ಲಕ್ಷಗಳ ವರೆಗೆ ಠೇವಣಿ ಇಟ್ಟರೆ ಶೇ. 7.5ರಷ್ಟು ಆಕರ್ಷಕ ಬಡ್ಡಿಯೊಂದಿಗೆ 2 ವರ್ಷದ ನಂತರ ಹಣವನ್ನು ಹಿಂದಿರುಗಿಸುವ ಯೋಜನೆ ಇದಾಗಿದೆ. ಮಹಿಳಾ ಸಬಲೀಕರಣವನ್ನು ದೃಷ್ಟಿಯಲ್ಲಿಟ್ಟುಕೊಂಡು ಸರ್ಕಾರ ಈ ನಡೆಗೆ ಮುಂದಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2 ಲಕ್ಷ ಠೇವಣಿ ಇರಿಸಿದ ಖಾತೆದಾರರಿಗೆ ಬಡ್ಡಿ ಸಹಿತ 2,32,044 ರೂ ಹಣವನ್ನು ಹಿಂದಿರುಗಿಸಲಾಗುತ್ತದೆ. ಚಿಕ್ಕಮಕ್ಕಳಿಂದ ಹಿಡಿದು ಎಲ್ಲಾ ವಯೋಮಾನದ ಮಹಿಳೆಯರಿಗಾಗಿ ಈ ಯೋಜನೆ ರೂಪಿಸಲಾಗಿದೆ. ಒಬ್ಬ ಮಹಿಳೆಗೆ ಒಂದೇ ಠೇವಣಿಗೆ ಅವಕಾಶವಿದ್ದು, ಮತ್ತೊಮ್ಮೆ ಠೇವಣಿ ಇಡ ಬಯಸಿದರೆ ಮೂರು ತಿಂಗಳ ಬಳಿಕ ಇಡಬಹುದಾಗಿದೆ.

ಈ ಸುದ್ದಿ ಓದಿದ್ದೀರಾ?:ದಕ್ಷಿಣ ಕನ್ನಡ | ಬಜಾಲ್ ವಾರ್ಡ್ ಅಭಿವೃದ್ಧಿಗೆ ಜನಪ್ರತಿನಿಧಿ, ಅಧಿಕಾರಿಗಳ ನಿರ್ಲಕ್ಷ್ಯ: ಡಿವೈಎಫ್ಐ ಆರೋಪ

ಎಲ್ಲಾ ವರ್ಗದ ಮಹಿಳೆಯರಿಗೆ ಈ ಯೋಜನೆ ಅನುಕೂಲವಾಗಲಿದ್ದು, ಪ್ರತಿಯೊಬ್ಬರೂ ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಅಂಚೆ ಇಲಾಖೆ ಪ್ರಕಟಣೆ ತಿಳಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...