ದಕ್ಷಿಣ ಕನ್ನಡ | ನೀರಿನ ಅಭಾವ; ಎನ್‌ಐಟಿಕೆಯಿಂದ ತರಗತಿ, ಪರೀಕ್ಷೆಗಳು‌ ಮುಂದೂಡಿಕೆ

Date:

  • ನೀರಿನ ಅಭಾವ ಉಂಟಾಗಿ ಊರುಗಳಿಗೆ ತೆರಳಲು ಮುಂದಾದ ವಿದ್ಯಾರ್ಥಿಗಳು
  • ನೀರಿನ ಅಭಾವ ಇದ್ದರೂ ಮೂರನೇ ವರ್ಷದ ಯುಜಿ ಪರೀಕ್ಷೆ ಮುಂದುವರಿಕೆ

ನೀರಿನ ಅಭಾವ ಉಂಟಾದ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್‌ನ ನ್ಯಾಷನಲ್ ಇನ್ಸ್‌ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ (ಎನ್‌ಐಟಿಕೆ) ಅಂತಿಮ ವರ್ಷದ ಯುಜಿ (ಬಿ.ಟೆಕ್) ಮತ್ತು ಪ್ರಥಮ ವರ್ಷದ ಪಿಜಿ ತರಗತಿಗಳು ಹಾಗೂ ಪರೀಕ್ಷೆಗಳನ್ನು ಕನಿಷ್ಠ ಎರಡು ವಾರಗಳವರೆಗೆ ಮುಂದೂಡಲು ನಿರ್ಧರಿಸಿದೆ.

ಎನ್ಐಟಿಕೆಯಲ್ಲಿ 6,000ಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದು, ಪ್ರತಿದಿನ ಒಟ್ಟು 10 ಲಕ್ಷ ಲೀಟರ್ ನೀರು ಬಳಕೆಯಾಗುತ್ತಿದೆ. ಆದರೆ, ಕಳೆದ ಮೂರು ವಾರಗಳಲ್ಲಿ ಮಂಗಳೂರು ಮಹಾನಗರ ಪಾಲಿಕೆಯಿಂದ ಸರಬರಾಜು ಮಾಡುವ ನೀರಿನ ಮಟ್ಟ ದಿನಕ್ಕೆ 3.5 ಲಕ್ಷ ಲೀಟರ್‌ಗೆ ಇಳಿದಿದೆ.

ಪಾಲಿಕೆಯಿಂದ ನೀರು ಸರಬರಾಜು ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಸಂಸ್ಥೆಯು ಈಗ ಆಂತರಿಕ ನೀರಿನ ವ್ಯವಸ್ಥೆ ಮತ್ತು ಟ್ಯಾಂಕರ್ ನೀರನ್ನು ಬಳಸಿಕೊಂಡು ಕಾರ್ಯನಿರ್ವಹಿಸಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪ್ರಸ್ತುತ ಬೇಸಿಗೆಯಲ್ಲಿ ತೀವ್ರ ನೀರಿನ ಅಭಾವ ಉಂಟಾಗುವ ಸಾಧ್ಯತೆ ಇರುವುದರಿಂದ ಅಂತಿಮ ವರ್ಷದ ಬಿ.ಟೆಕ್ ಮತ್ತು ಮೊದಲ ವರ್ಷದ ಪಿಜಿ ಕೋರ್ಸ್‌ಗಳ ತರಗತಿಗಳು ಹಾಗೂ ಪರೀಕ್ಷೆಗಳನ್ನು ಮುಂದೂಡಲು ಸಂಸ್ಥೆ ನಿರ್ಧರಿಸಿದೆ” ಎಂದು ಡೀನ್ ವಿದ್ಯಾ ಶೆಟ್ಟಿ ಕೆ ತಿಳಿಸಿದ್ದಾರೆ.

ಎನ್‌ಐಟಿಕೆ ಕ್ಯಾಂಪಸ್‌ನಲ್ಲಿ ಸುಮಾರು 2,000 ವಿದ್ಯಾರ್ಥಿಗಳಿದ್ದಾರೆ. ನೀರಿನ ಕೊರತೆ ಉಂಟಾಗಿರುವುದರಿಂದ ಪರೀಕ್ಷೆ ಮುಗಿದ ಬಳಿಕ ವಿದ್ಯಾರ್ಥಿಗಳು ತಮ್ಮ ಊರುಗಳಿಗೆ ತೆರಳಲು ಮುಂದಾಗಿದ್ದಾರೆ. ಹಾಗಾಗಿ ಪರೀಕ್ಷೆಗಳನ್ನು ಮುನ್ನಡೆಸುವ ಸಲುವಾಗಿ, ನಾವು ಈಗ ಶನಿವಾರ ಮತ್ತು ಭಾನುವಾರ ವಿದ್ಯಾರ್ಥಿಗಳಿಗೆ ಪೂರ್ಣ ದಿನದ ತರಗತಿಗಳನ್ನು ನಡೆಸುತ್ತಿದ್ದೇವೆ” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ದಕ್ಷಿಣ ಕನ್ನಡ | 47,000 ಮಂದಿ ಹಿರಿಯ ಮತದಾರಿಗೆ ಮನೆಯಿಂದಲೇ ಮತ ಚಲಾಯಿಸಲು ಅವಕಾಶ

“ಶೈಕ್ಷಣಿಕ ವರ್ಷದ ವೇಳಾಪಟ್ಟಿಯಂತೆ ಈ ಕೋರ್ಸ್‌ಗಳ ತರಗತಿಗಳು ಏಪ್ರಿಲ್ 21ರಂದು ಕೊನೆಗೊಂಡು, ತಕ್ಷಣವೇ ಮೇ ಮೊದಲ ವಾರದಲ್ಲಿ ಪರೀಕ್ಷೆಗಳು ಕೊನೆಗೊಳ್ಳಬೇಕಿತ್ತು. ಈಗ ತರಗತಿಗಳು ಏಪ್ರಿಲ್ 12ರಂದು ಕೊನೆಗೊಂಡು ಏಪ್ರಿಲ್ 24ರೊಳಗೆ ಪರೀಕ್ಷೆಗಳು ಮುಕ್ತಾಯವಾಗುತ್ತವೆ.

“ಸಾಂಕ್ರಾಮಿಕ ರೋಗದಿಂದಾಗಿ ತಡವಾಗಿ ಪ್ರಾರಂಭವಾದ ಇತರ ಯುಜಿ ಮತ್ತು ಪಿಜಿ ಕೋರ್ಸ್‌ಗಳ ತರಗತಿಗಳನ್ನು ನಾವು ಮುನ್ನಡೆಸಲು ಸಾಧ್ಯವಿಲ್ಲ. ನಾವು ಮೂರನೇ ವರ್ಷದ ಯುಜಿ ಪರೀಕ್ಷೆಯನ್ನು ಮುಂದುವರಿಸಲು ಯೋಜಿಸಿದ್ದೇವೆ. ಆದರೆ, ಅದನ್ನು ಇನ್ನೂ ಅಂತಿಮಗೊಳಿಸಲಾಗಿಲ್ಲ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...