ದಕ್ಷಿಣ ಕನ್ನಡ | ವೃದ್ಧೆ ರೋಗಿಗೆ ಲೈಂಗಿಕ ಕಿರುಕುಳ; ಹೋಮ್‌ ನರ್ಸ್‌ ಬಂಧನ

Date:

  • ವೃದ್ಧೆ ಪದೇಪದೆ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದರು
  • ವೃದ್ಧೆ ರೋಗಿಯನ್ನು ಥಳಿಸುತ್ತಿರುವ ದೃಶ್ಯ ಸೆರೆ

ವೃದ್ಧೆ ರೋಗಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಹೋಮ್ ನರ್ಸ್‌ನನ್ನು ಪೊಲೀಸರು ಬಂಧಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಪಟ್ಟಣದಲ್ಲಿ ಘಟನೆ ನಡೆದಿದೆ.

ಗದಗ ಮೂಲದ ಶಿವಾನಂದ ವಿ (19) ಬಂಧಿತ ಆರೋಪಿ. “ಆರೋಪಿಯನ್ನು ಕೊಡಂಗಲ್ಲು ಬಳಿಯ ಹುಡ್ಕೋ ಕಾಲೋನಿಯಲ್ಲಿರುವ ಅವರ ನಿವಾಸದಲ್ಲಿ ಅನಾರೋಗ್ಯದ ವೃದ್ಧೆಯನ್ನು ಆರೈಕೆ ಮಾಡಲು ನೇಮಿಸಲಾಗಿತ್ತು” ಎಂದು ಪೊಲೀಸರು ತಿಳಿಸಿದ್ದಾರೆ.

“ವೃದ್ಧೆಯು ಪದೇಪದೆ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದರು. ಜೊತೆಗೆ ಖಿನ್ನತೆಗೆ ಒಳಗಾಗುತ್ತಿದ್ದರು. ರೋಗಿಯ ಮೇಲೆ ಕೆಲವು ಗುರುತುಗಳನ್ನು ಗಮನಿಸಿದ ಕುಟುಂಬಸ್ಥರು ಆರೋಪಿಗೆ ಗೊತ್ತಾಗದಂತೆ ಮೊಬೈಲ್‌ ಕ್ಯಾಮೆರಾವನ್ನು ರಹಸ್ಯವಾಗಿ ಇರಿಸಿದ್ದರು” ಎಂದು ಮಾಹಿತಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಆರೋಪಿ ಹೋಂ ನರ್ಸ್‌, ವೃದ್ಧೆಯನ್ನು ಅಸ್ವಾಭಾವಿಕ ಲೈಂಗಿಕತೆಗೆ ಬಲವಂತ ಮಾಡಿರುವುದು ಕ್ಯಾಮೆರಾ ದೃಶ್ಯಾವಳಿಯಲ್ಲಿ ಕಂಡುಬಂದಿದೆ. ತನ್ನ ಬೇಡಿಕೆಗಳನ್ನು ಒಪ್ಪಿಕೊಳ್ಳುವಂತೆ ಆರೋಪಿಯು ವೃದ್ಧೆಗೆ ಥಳಿಸುತ್ತಿದ್ದುದೂ ಕೂಡ ಕ್ಯಾಮೆರಾದಲ್ಲಿ ಸೆರೆಯಾಗಿದೆ” ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಚಿಕ್ಕಬಳ್ಳಾಪುರ | ನೀರಿನಲ್ಲಿ ಮುಳುಗಿ ಮೂವರು ವಿದ್ಯಾರ್ಥಿಗಳ ಸಾವು

ರೆಕಾರ್ಡಿಂಗ್ ಆಧಾರದ ಮೇಲೆ, ಮರುದಿನ ದೂರು ದಾಖಲಿಸಲಾಯಿತು. ಬಳಿಕ ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 323 (ಸ್ವಯಂಪ್ರೇರಣೆಯಿಂದ ನೋವುಂಟು ಮಾಡುವುದು), 377 (ಅಸ್ವಾಭಾವಿಕ ಅಪರಾಧಗಳು) ಮತ್ತು 506 (ಕ್ರಿಮಿನಲ್ ಬೆದರಿಕೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...