ಮಂಗಳೂರು | ವಿದ್ಯಾರ್ಥಿ ದಿಗಂತ್‌ನನ್ನು ಯಾರೂ ಅಪಹರಿಸಿರಲಿಲ್ಲ,ಅವನೇ ಮನೆಬಿಟ್ಟಿದ್ದ: ದ.ಕ. ಎಸ್‌ಪಿ ಯತೀಶ್

Date:

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಹೊರವಲಯದ ಫರಂಗಿಪೇಟೆಯ ವಿದ್ಯಾರ್ಥಿ ದಿಗಂತ್ ನಾಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾನುವಾರ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಸ್ಪಷ್ಟೀಕರಣ ನೀಡಿರುವ ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್, “ದಿಗಂತ್‌ನನ್ನು ಯಾರೂ ಅಪಹರಿಸಿರಲಿಲ್ಲ,ಅವನೇ ಹೋಗಿದ್ದ” ಎಂದು ತಿಳಿಸಿದ್ದಾರೆ.

“ದಿಗಂತ್ ಮನೆಯಿಂದ ನಾಪತ್ತೆಯಾದ ಬಳಿಕ ಬಂಟ್ವಾಳ ಡಿವೈಎಸ್ ಪಿ ನೇತೃತ್ತದಲ್ಲಿ ಏಳು ತಂಡ ತನಿಖೆ ನಡೆಸಿತ್ತು. 10‌ ದಿನಗಳ ಕಾಲ ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿದ್ದೆವು. ಕಾಣೆಯಾಗಿದ್ದ ದಿಗಂತ್ ಶನಿವಾರ ಉಡುಪಿಯಲ್ಲಿ ಪತ್ತೆಯಾಗಿದ್ದಾನೆ.‌ಆತನನ್ನು ವಿಚಾರಣೆ ನಡೆಸಿದಾಗ ಸಾಕಷ್ಟು ಮಾಹಿತಿ ಹೊರ ಹಾಕಿದ್ದಾನೆ” ಎಂದು ತಿಳಿಸಿದ್ದಾರೆ.

“ಮಾ.3‌ ?ರಿಂದ ದ್ವಿತೀಯ ಪಿಯುಸಿ ಫೈನಲ್‌ ಪರೀಕ್ಷೆಯ ಇದ್ದ ಹಿನ್ನೆಲೆಯಲ್ಲಿ ಹೆದರಿರುವ ಬಗ್ಗೆ ಹೇಳಿದ್ದಾನೆ‌. ಪರೀಕ್ಷೆಗೆ ಸರಿಯಾದ ತಯಾರಿ ಮಾಡದೇ ಇರುವುದರಿಂದ ಹೆದರಿ‌ ಮನೆಬಿಟ್ಟು, ನಾಪತ್ತೆಯಾಗಿದ್ದಾನೆ.‌ಅವನು ಮನೆಯಿಂದ ರೈಲ್ವೆ ಟ್ರ್ಯಾಕ್‌ನಲ್ಲಿ ಅರ್ಕುಳಕ್ಕೆ ಬಂದಿದ್ದ.‌ ಬಳಿಕ ಬೈಕ್ ಹಿಡಿದು ಮಂಗಳೂರಿಗೆ ಬಂದಿದ್ದಾನೆ” ಎಂದು ಎಸ್ ಪಿ ಯತೀಶ್ ತನಿಖೆಯ ನಂತರ ತಿಳಿದು ಬಂದ ಎಲ್ಲ ವಿವರಗಳನ್ನು ಬಿಚ್ಚಿಟ್ಟಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಂಗಳೂರಿಗೆ ಬಂದ ಬಳಿಕ ಅಲ್ಲಿಂದ ಬಸ್ಸಿನಲ್ಲಿ ಶಿವಮೊಗ್ಗ ಹೋಗಿ ಅಲ್ಲಿಂದ ಮೈಸೂರು ಹೋಗಿದ್ದಾನೆ. ಬಳಿಕ ಬೆಂಗಳೂರಿನ ಕೆಂಗೇರಿಗೆ ಹೋಗಿ ರೆಸಾರ್ಟ್‌ವೊಂದರಲ್ಲಿ ಕೆಲಸ ಮಾಡಿದ್ದಾನೆ. ಬಳಿಕ ಬೆಂಗಳೂರು ತಿರುಗಿ ಮತ್ತೆ ಮೈಸೂರು ಬಂದು ರೈಲಿನಲ್ಲಿ ಉಡುಪಿಗೆ ಬಂದಿದ್ದಾನೆ. ಉಡುಪಿಯಲ್ಲಿ ಬಟ್ಟೆ ತೆಗೆದುಕೊಳ್ಳಲು ಡಿ ಮಾರ್ಟ್ ಮಳಿಗೆಗೆ ಹೋಗಿದ್ದ. ಅಲ್ಲಿ ದುಡ್ಡು ಕೊಡದೇ ಎಸ್ಕೇಪ್ ಆಗುವ ವೇಳೆ ಸಿಬ್ಬಂದಿ ಕೈಗೆ ತಗಲಾಕಿಕೊಂಡಿದ್ದಾನೆ” ಎಂದು ತಿಳಿಸಿದರು.

“ಮನೆಯಿಂದ ಹೋಗುವಾಗ 500 ರೂ‌ ತೆಗೆದುಕೊಂಡು ಹೋಗಿದ್ದಾನೆ. ಆ ಬಳಿಕ ಕೆಲವು ಕಡೆ ಟಿಕೆಟ್ ಕೊಡದೇ ಪ್ರಯಾಣ ಮಾಡಿದ್ದಾನೆ. ಅವನ ಪಾದದಲ್ಲಿ ಗಾಯ ಆಗಿದ್ದು, ಅದೇ ರಕ್ತ ಚಪ್ಪಲಿಯಲ್ಲಿ ಅಂಟಿಕೊಂಡಿದೆ ಅಂತ ಅವನೇ ಹೇಳಿದ್ದಾನೆ. ಅವನನ್ನ ಯಾರೂ ಎತ್ತಿಕೊಂಡು ಹೋಗಿರಲಿಲ್ಲ,ಅವನೇ ಹೋಗಿದ್ದ. 11 ದಿನಗಳ ಪ್ರಯಾಣದಲ್ಲಿ ಅವನು ಯಾರನ್ನೂ ಸಂಪರ್ಕ ಮಾಡಿಲ್ಲ” ಎಂದು ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಮಾಹಿತಿ ನೀಡಿದ್ದಾರೆ.

“ದಿಗಂತ್ ಕಲಿಯೋದರಲ್ಲಿ ಹುಷಾರಿದ್ದ. ಕೆಲ ದಿನಗಳಿಂದ ಸ್ವಲ್ಪ ಡಲ್ ಇದ್ದ. ಹತ್ತನೇ ತರಗತಿಯಲ್ಲಿ 80% ಅಂಕ ಗಳಿಸಿದ್ದ” ಎಂದಿರುವ ಎಸ್ ಪಿ, “ಸದ್ಯ ಹೈಕೋರ್ಟ್ ಹೆಬಿಯಸ್ ಕಾರ್ಪಸ್ ದಾಖಲಾಗಿರುವ ಕಾರಣ ಹೈಕೋರ್ಟಿಗೆ ಸೋಮವಾರ ಹಾಜರುಪಡಿಸಲಾಗುವುದು. ಸದ್ಯ ವಿದ್ಯಾರ್ಥಿ ದಿಗಂತ್‌ನನ್ನು ಬೊಂದೇಲ್‌ನಲ್ಲಿರುವ ಬಾಲ ಮಂದಿರದಲ್ಲಿ‌ ಇರಿಸಿದ್ದೇವೆ” ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್ ವಿವರಿಸುವ ಮೂಲಕ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪಷ್ಟೀಕರಣ ನೀಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...