ದಕ್ಷಿಣ ಕನ್ನಡ |‌ ಶವವಿಟ್ಟು ಪ್ರತಿಭಟಿಸಿದ ಬಳಿಕ ಸ್ಮಶಾನಕ್ಕೆ ಭೂಮಿ ನೀಡಿದ ತಹಶೀಲ್ದಾರ್

Date:

ನೆರಿಯ ಗ್ರಾಮದಲ್ಲಿ ಸ್ಮಶಾನ ಭೂಮಿಗೆ ಸಂಬಂಧಿಸಿದಂತೆ ಗ್ರಾಮಸ್ಥರ ಪ್ರತಿಭಟನೆಗೆ ಮಣಿದ ತಹಶೀಲ್ದಾರ್ ಜಾಗ ಗುರುತಿಸಿದ್ದು, ಗ್ರಾಮ ಪಂಚಾಯಿತಿ ಬಳಿಯೇ ಅಂತ್ಯಕ್ರಿಯೆ ನಡೆಸುವ ಮೂಲಕ ಪ್ರಕರಣ ಸುಖಾಂತ್ಯ ಕಂಡಿದೆ.

ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ಮಶಾನ ಭೂಮಿ ಇಲ್ಲದಿರುವ ಬಗ್ಗೆ ಗ್ರಾಮಸ್ಥರು ಜುಲೈ 14ರಂದು ನೆರಿಯ ಗ್ರಾಮದ ಜನತಾ ಕಾಲೋನಿ ನಿವಾಸಿಗಳು ಮೃತದೇಹವಿಟ್ಟು ಪ್ರತಿಭಟನೆ ನಡೆಸಿದ್ದರು.

ಅಂತ್ಯ ಸಂಸ್ಕಾರ ನಡೆಸಲು 25 ವರ್ಷಗಳ ಹಿಂದೆ ಇಟ್ಟಾಡಿ ಎಂಬ ಕುಂಮ್ಕಿ ಸ್ಥಳದಲ್ಲಿ ಕಾಯ್ದಿರಿಸಿದ್ದ 1.12 ಎಕರೆ ಜಾಗ ಬೇರೊಬ್ಬರ ಸ್ವಾಧೀನದಲ್ಲಿದ್ದು, ಅಲ್ಲಿಗೆ ತೆರಳಲು ಸೂಕ್ತ ರಸ್ತೆಯಿಲ್ಲ. ಅವರ ಮನೆಮುಂದೆ ಮೃತದೇಹ ಕೊಂಡೊಯ್ಯಲು ಮನೆಮಂದಿ ಬಿಡುವುದಿಲ್ಲವೆಂದು ಗಲಭೆ ಎಬ್ಬಿಸಿದರ ಪರಿಣಾಮ ಗ್ರಾಮಸ್ಥರು ನೆರಿಯ ಗ್ರಾಮ ಪಂಚಾಯಿತಿ ಎದುರು ಅಂತ್ಯ ಸಂಸ್ಕಾರ ನಡೆಸಲು ಸಿದ್ಧತೆ ನಡೆಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೆಳ್ತಂಗಡಿ ತಹಶೀಲ್ದಾರ್ ಸುರೇಶ್ ಟಿ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದರು. ಈ ವೇಳೆ ಗ್ರಾಮಸ್ಥರು “ಇಂದೇ ಸ್ಶಾನ ಭೂಮಿಗೆ ಜಾಗ ಗುರುತಿಸಿ ಕೊಡಬೇಕು, ಅದೇ ಜಾಗದಲ್ಲಿ ಮೃತದೇಹದ ಅಂತ್ಯಸಂಸ್ಕಾರ ಮಾಡಲಾಗುವುದು” ಎರಂದು ಪಟ್ಟು ಹಿಡಿದಿದ್ದರು.

ತಹಶೀಲ್ದಾರ್ ಸೇರಿದಂತೆ ಅಧಿಕಾರಿಗಳು ಪಂಚಾಯತ್ ಬಳಿ ಇರುವ ಜಾಗವನ್ನು ಪರಿಶೀಲಿಸಿ ಸ್ಮಶಾನಕ್ಕೆ ಬೇಕಾಗಿರುವ ಸುಮಾರು 20 ಸೆಂಟ್ಸ್ ಸ್ಥಳ ಗುರುತಿಸಿದ ಬಳಿಕ ಗ್ರಾಮಸ್ಥರು ಪ್ರತಿಭಟನೆಯನ್ನು ಹಿಂಪಡೆದರು.

ಬಳಿಕ ಅದೇ ಜಾಗದಲ್ಲಿ ಮೃತರ ಅಂತ್ಯಸಂಸ್ಕಾರ ನೆರವೇರಿಸಲು ವ್ಯವಸ್ಥೆ ಮಾಡುವ ಮೂಲಕ ತಾರಕಕ್ಕೇರಿದ್ದ ನೆರಿಯ ಸ್ಮಶಾನ ಭೂಮಿಗಾಗಿ ನಡೆಸಿದ್ದ ಪ್ರತಿಭಟನೆ ಸುಖಾಂತ್ಯಗೊಂಡಿದೆ.

ಘಟನೆ ಹಿನ್ನೆಲೆ

ಅಂತ್ಯ ಸಂಸ್ಕಾರ ಮಾಡಲು ಸ್ಮಶಾನ ಇಲ್ಲದಿರುವುದರಿಂದ ಮೃತರ ಅಂತ್ಯ ಸಂಸ್ಕಾರಕ್ಕೆ ತೊಂದರೆಯಾಗುತಿದ್ದು, ಸಮಸ್ಯೆ ಪರಿಹರಿಸುವಂತೆ ಗ್ರಾಮ ಪಂಚಾಯಿತಿ ಎದುರು ಮೃತದೇಹವಿಟ್ಟು ಆಗ್ರಹಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದಲ್ಲಿ ನಡೆದಿತ್ತು.

“ಕಳೆದ ಹಲವು ವರ್ಷಗಳಿಂದ ಸ್ಮಶಾನಕ್ಕಾಗಿ ಸ್ಥಳ ಮಂಜೂರುಗೊಳಿಸುವಂತೆ ಹಲವಾರು ಗ್ರಾಮ ಸಭೆಗಳಲ್ಲಿ ಬೇಡಿಕೆ ಇಟ್ಟರೂ ಯಾರು ಗ್ರಾಮಸ್ಥರ ಮನವಿಗೆ ಸ್ಪಂದಿಸುತ್ತಿಲ್ಲ” ಎಂದು ನೆರಿಯದಲ್ಲಿ ಪ್ರತಿಭಟನೆ ನಡೆಸಿದ್ದರು.

“ಒಂದು ವೇಳೆ ಸ್ಪಂದನೆ ಸಿಗದಿದ್ದಲ್ಲಿ ಗ್ರಾಮ ಪಂಚಾಯಿತಿ ಎದುರೇ ಅವರ ಅಂತ್ಯ ಸಂಸ್ಕಾರ ಮಾಡುತ್ತೇವೆ” ಎಂದು ಗ್ರಾಮಸ್ಥರು ಎಚ್ಚರಿಕೆ ನೀಡಿದ್ದರು.

ಮೃತದೇಹವಿಟ್ಟು ಪ್ರತಿಭಟನೆಗೆ ಸಿದ್ಧ

ಜನತಾ ಕಾಲೋನಿ ನಿವಾಸಿಯೊಬ್ಬರು ಜುಲೈ 14 ರಂದು ಮೃತಪಟ್ಟಿದ್ದು, ಅವರ ಮೃತದೇಹವನ್ನು ಗ್ರಾಮ ಪಂಚಾಯಿತಿ ಎದುರು ಇಟ್ಟು ಪ್ರತಿಭಟನೆ ಮಾಡಲು ಗ್ರಾಮಸ್ಥರು ಮುಂದಾದರು. ಈ ವೇಳೆ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಅಧಿಕಾರಿಗಳು ಮೃತರ ಮನೆಗೆ ಬಂದು ಗ್ರಾಮಸ್ಥರ ಮನವೊಲಿಸಲು ಪ್ರಯತ್ನಿಸಿದ್ದಾರೆ. ಆದರೂ ಇಷ್ಟು ವರ್ಷದ ಬೇಡಿಕೆ ಈಡೇರಿಲ್ಲ. ಸ್ಮಶಾನ ಆಗುವ ತನಕ ಪಂಚಾಯಿತಿಗೆ ಬೀಗ ಹಾಕಿ ಎಂದು ಅಧಿಕಾರಿಗಳನ್ನು ತರಾಟೆಗೆ ತಗೊಂಡಿದ್ದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಅಕ್ರಮ ಆರೋಪ; ಮಹಾನಗರ ಪಾಲಿಕೆ ಬಿಲ್‌ ಕಲೆಕ್ಟರ್‌ ಅಮಾನತು

“ತಹಶೀಲ್ದಾರ್ ಸ್ಥಳಕ್ಕೆ ಆಗಮಿಸಿ, ಜಾಗ ನಿಗದಿ ಪಡಿಸಬೇಕು. ಒಂದು ವೇಳೆ ನಮ್ಮ ಬೇಡಿಕೆ ಈಡೇರದಿದ್ದರೆ ಪಂಚಾಯಿತಿ ಎದುರು ಅಂತ್ಯ ಸಂಸ್ಕಾರ ನೆರವೇರಿಸುತ್ತೇವೆ” ಎಂದು ಗ್ರಾಮಸ್ಥರು ಆಗ್ರಹಿಸಿದ್ದರು. ಈ ಹಿನ್ನೆಲೆಯಲ್ಲಿ ತಹಶೀಲ್ದಾರ್‌ ಸುರೇಶ್‌ ಟಿ ಸ್ಥಳಕ್ಕೆ ಬಂದಿದ್ದು, ಸ್ಮಶಾನಕ್ಕೆ ಜಾಗ ಗುರುತಿಸಿ ಅಂತ್ಯ ಸಂಸ್ಕಾರಕ್ಕೆ ಅನುವು ಮಾಡಿ ಕೊಟ್ಟಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...