ದಕ್ಷಿಣ ಕನ್ನಡ | ಸ್ವಾತಂತ್ರ್ಯ ದಿನಾಚರಣೆಯಲ್ಲಿ ಸಾವರ್ಕರ್‌ಗೆ ಜೈಕಾರ; ಶಿಕ್ಷಕಿ ಕ್ಷಮೆ ಯಾಚನೆ

Date:

ಸ್ವಾತಂತ್ರ್ಯ ದಿನಾಚರಣೆಯಂದು ವಿದ್ಯಾರ್ಥಿಗಳಿಂದ ಸಾವರ್ಕರ್‌ಗೆ ‘ಜೈಕಾರ’ ಘೋಷಣೆ ಕೂಗಿಸಿದ್ದ ಶಿಕ್ಷಕಿಯ ವಿರುದ್ಧ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದು, ಶಿಕ್ಷಕಿ ಕ್ಷಮೆ ಕೇಳಿದ್ದಾರೆ. ಅಲ್ಲದೆ, ಜೈಕಾರ ಕೂಗುವ ದೃಶ್ಯವನ್ನು ವಿಡಿಯೋ ಮಾಡಿ ಹರಿಬಿಟ್ಟಿದ್ದವರ ವಿರುದ್ಧ ವಿಟ್ಲ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಸರ್ಕಾರಿ ಶಾಲೆಯಲ್ಲಿ ಆಗಸ್ಟ್‌ 15ರಂದು ನಡೆದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕಿಯೊಬ್ಬರು ವಿದ್ಯಾರ್ಥಿಗಳಿಗೆ ಸಾವರ್ಕರ್‌ಗೆ ಜೈಕಾರ ಕೂಗಿದ್ದರು. ಇದರಿಂದ ಸಿಟ್ಟಾಗಿದ್ದ ಕೆಲವು ಪೋಷಕರು ಘಟನೆಯನ್ನು ಖಂಡಿಸಿದ್ದರು. ಶಿಕ್ಷಕಿ ಕ್ಷಮೆ ಕೇಳಬೇಕೆಂದು ಒತ್ತಾಯಿಸಿದ್ದರು.

ಪೋಷಕರ ಒತ್ತಾಯಕ್ಕೆ ಮಣಿದ ಮುಖ್ಯ ಶಿಕ್ಷಿಕಿ ಪೋಷಕರೊಂದಿಗೆ ಸಭೆ ನಡೆಸಿದ್ದು, ಸಭೆಯಲ್ಲಿ ಶಿಕ್ಷಕಿಯಿಂದ ಕ್ಷಮೆ ಕೇಳಿಸಿದ್ದರು. ಮಾಡಿದ ತಪ್ಪಿಗೆ ಶಿಕ್ಷಕಿ ಕ್ಷಮೆ ಯಾಚಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದರೆ, ಕಾರ್ಯಕ್ರಮದಲ್ಲಿ ಜೈಕಾರ ಕೂಗುವ ದೃಶ್ಯವನ್ನು ಸ್ಥಳದಲ್ಲಿದ್ದ ಯುವಕನೊಬ್ಬ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದರು. ವಿಡಿಯೋವನ್ನು ಹರಿಬಿಟ್ಟಿರುವುದು ದ್ವೇಷ ಮತ್ತು ಗಲಾಟೆಗೆ ಪ್ರಚೋದನೆ ನೀಡುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿರುವ ಮುಖ್ಯ ಶಿಕ್ಷಕಿ, ವಿಡಿಯೋ ಹರಿಬಿಟ್ಟವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...