ದಕ್ಷಿಣ ಕನ್ನಡ | ತ್ರಿವಳಿ ತಲಾಖ್: ಪತಿ ವಿರುದ್ಧ ದೂರು ದಾಖಲಿಸಿದ ಮಹಿಳೆ

Date:

ತನ್ನ ಪತಿ ಮೂರು ಬಾರಿ ತಲಾಖ್ ಹೇಳಿ, ತಕ್ಷಣ ವಿಚ್ಛೇದನ ನೀಡಿದ್ದಾನೆ ಎಂದು ಆರೋಪಿಸಿ 35 ವರ್ಷದ ಮಹಿಳೆಯೊಬ್ಬರು ಮಂಗಳೂರಿನ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಆರೋಪಿ ಪತಿ ಮತ್ತು ಆತನ ಪೋಷಕರನ್ನು ಪೊಲೀಸರು ಬಂಧಿಸಿದ್ದಾರೆ.

“ಮದುವೆಯಾದ ಎಂಟೇ ದಿನಗಳಲ್ಲಿ ತನ್ನ ಪತಿ ಮೊಹಮ್ಮದ್ ಹುಸೇನ್, ತನ್ನ ಬಳಿಯಿದ್ದ ಚಿನ್ನಾಭರಣಗಳನ್ನು ಕಿತ್ತುಕೊಂಡಿದ್ದಾರೆ. ಮಾನಸಿಕ ಮತ್ತು ದೈಹಿಕ ಕಿರುಕುಳ ನೀಡಿದ್ದಾರೆ. ಬಲವಂತವಾಗಿ ಗರ್ಭಪಾತ ಮಾಡಿಸಿದ್ದಾರೆ. ದಿನನಿತ್ಯ ವರದಕ್ಷಿಣೆ ಕಿರುಕುಳ ನೀಡುತ್ತಿದ್ದರು” ಎಂದು ಮಹಿಳೆ ಆರೋಪಿಸಿದ್ದಾರೆ.

ಮೊದಲ ಗಂಡನಿಂದ ವಿಚ್ಛೇದನ ಪಡೆದುಕೊಂಡಿದ್ದೆ. 2022ರ ನವೆಂಬರ್‌ 10ರಂದು ಆರೋಪಿ ಮೊಹಮ್ಮದ್ ಹುಸೇನ್ ಮತ್ತು ನಾನು ವಿವಾಹವಾಗಿದ್ದೆವು. ಬಳಿಕ ಮಾರ್ನಮಿಕಟ್ಟೆಯ ಅಪಾರ್ಟ್‌ಮೆಂಟ್‌ನಲ್ಲಿ ವಾಸವಾಗಿದ್ದೆವು” ಎಂದು ಮಹಿಳೆ ತನ್ನ ದೂರಿನಲ್ಲಿ ವಿವರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಳೆದ ತಿಂಗಳ (ಮೇ) 26ರಂದು ತನ್ನ ಮೇಲೆ ಹಲ್ಲೆ ನಡೆಸಿ, ಬೆದರಿಕೆ ಹಾಕಿದ್ದಾರೆ. ತ್ರಿವಳಿ ತಲಾಖ್ ನೀಡಿದ್ದಾರೆ” ಎಂದು ಅವರು ವಿವರಿಸಿದ್ದಾರೆ.

ಮಹಿಳೆಯ ದೂರಿನ ಆಧಾರದ ಮೇಲೆ, ವರದಕ್ಷಿಣೆ ನಿಷೇಧ ಕಾಯ್ದೆ ಮತ್ತು ಮುಸ್ಲಿಂ ಮಹಿಳೆಯರ (ವಿವಾಹದ ಮೇಲಿನ ಹಕ್ಕುಗಳ ರಕ್ಷಣೆ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...