ದಕ್ಷಿಣ ಕನ್ನಡ | ಆಹ್ವಾನ ಪತ್ರಿಕೆಯಲ್ಲಿ ಪ್ರಿಯಾಂಕ್‌ ಖರ್ಗೆ ಹೆಸರು ಕೈತಪ್ಪಿದ್ದಕ್ಕೆ ಇಬ್ಬರು ಅಧಿಕಾರಿಗಳ ಅಮಾನತು; ಸಿಎಂ ಮೊರೆ ಹೋದ ಬಿಜೆಪಿ ಶಾಸಕ

Date:

ಗ್ರಾಮ ಪಂಚಾಯಿತಿ ಕಟ್ಟಡದ ಉದ್ಘಾಟನಾ ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಅವರ ಹೆಸರು ಹಾಕದೆ ಶಿಷ್ಟಾಚಾರ ಉಲ್ಲಂಘಿಸಿದ ಆರೋಪದ ಮೇಲೆ ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆ ಮೂಡುಬಿದಿರೆ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ದಯಾವತಿ ಹಾಗೂ ಇರುವೈಲ್ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ(ಪಿಡಿಒ) ಕಂಠಪ್ಪ ಅವರನ್ನು ಅಮಾನತುಗೊಳಿಸಲಾಗಿದೆ.

ಗ್ರಾಮ ಪಂಚಾಯಿತಿ ಕಟ್ಟಡದ ಉದ್ಘಾಟನಾ ಕಾರ್ಯಕ್ರಮಕ್ಕೆ ಆಹ್ವಾನಿಸದೇ ಶಿಷ್ಟಾಚಾರ ಉಲ್ಲಂಘಿಸಿದ ಆರೋಪದ ಮೇಲೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಇಬ್ಬರು ಅಧಿಕಾರಿಗಳನ್ನು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಂಗಳವಾರ ಅಮಾನತು ಮಾಡಿ ಆದೇಶ ಹೊರಡಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇರುವೈಲ್ ಪಂಚಾಯಿತಿಯ ನೂತನ ಕಟ್ಟಡ ಸೋಮವಾರ ಉದ್ಘಾಟನೆಯಾಗಬೇಕಿತ್ತು. ಆದರೆ, ಆಹ್ವಾನ ಪತ್ರಿಕೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರ ಹೆಸರನ್ನು ಹಾಕದೇ ಶಿಷ್ಟಾಚಾರ ಉಲ್ಲಂಘನೆ ಮಾಡಿದ್ದಾರೆ. ಹೀಗಾಗಿ ಈ ಇಬ್ಬರನ್ನೂ ಅಮಾನತು ಮಾಡಲಾಗಿದೆ” ಎಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆನಂದ್ ಕೆ ಆದೇಶದಲ್ಲಿ ತಿಳಿಸಿದ್ದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ನಾನು ‌ಸ್ವತಂತ್ರವಾಗಿ ಸ್ಪರ್ಧಿಸಲು ಸಿದ್ಧ, ಅವರೂ ಸ್ವತಂತ್ರವಾಗಿ ಸ್ಪರ್ಧಿಸಲಿ: ಸಂಸದ ಸಿದ್ದೇಶ್ವರ್‌ಗೆ ಮಲ್ಲಿಕಾರ್ಜುನ್ ಸವಾಲು

ಆಗಸ್ಟ್ 01ರ ಮಂಗಳವಾರದಂದು ಮಂಗಳೂರಿಗೆ ಬಂದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಪ್ರಗತಿ ಪರಿಶೀಲನೆ ನಡೆಸಿದ್ದರು. ಈ ವೇಳೆ ಶಾಸಕ ಉಮಾನಾಥ ಕೋಟ್ಯಾನ್ ಅವರು ಅಧಿಕಾರಿಗಳನ್ನು ವರ್ಗಾವಣೆ ಮಾಡಿರುವ ಬಗ್ಗೆ ಮುಖ್ಯಮಂತ್ರಿ ಗಮನಕ್ಕೆ ತಂದಿದ್ದು, ಅಧಿಕಾರಿಗಳ ಅಮಾನತು ಹಿಂಪಡೆಯಬೇಕು. ಹಾಗೆಯೇ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ. ಸಿದ್ದರಾಮಯ್ಯನವರು ಪ್ರತಿಕ್ರಿಯಿಸಿದ್ದು, ಈ ಬಗ್ಗೆ ತನಿಖೆ ನಡೆಸುವುದಾಗಿ ಶಾಸಕರಿಗೆ ಭರವಸೆ ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...