ಪ್ರಧಾನಿ ಮೋದಿ 3ನೇ ಬಾರಿಗೆ ಪ್ರಧಾನಿಯಾದ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಬಿಜೆಪಿ ವಿಜಯೋತ್ಸವದ ವೇಳೆ ಇಬ್ಬರಿಗೆ ಚೂರಿ ಇರಿದ ಘಟನೆ ನಡೆದಿತ್ತು. ಪ್ರಕರಣ ಸಂಬಂಧ ಈ ಹಿಂದೆ 6 ಮಂದಿಯನ್ನು ಬಂಧಿಸಲಾಗಿತ್ತು. ಇದೀಗ, ಮತ್ತೆ 7 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಜಿಲ್ಲೆಯ ಬಂಟ್ವಾಳ ತಾಲೂಕಿನ ಬೋಳಿಯಾರ್ ಪ್ರದೇಶದಲ್ಲಿ ಜೂನ್ 9ರಂದು ಬಿಜೆಪಿ ವಿಜಯೋತ್ಸವ ನಡೆದಿತ್ತು. ಈ ವೇಳೆ, ಘೋಷಣೆ ವಿಚಾರಕ್ಕೆ ಗಲಾಟೆಯಯಾಗಿದ್ದು, ಇಬ್ಬರು ಬಿಜೆಪಿ ಕಾರ್ಯಕರ್ತರಿಗೆ ಚೂರಿ ಇರಿಯಲಾಗಿತ್ತು. ಬಿಜೆಪಿ ಕಾರ್ಯಕರ್ತ ಹರೀಶ್ ಮತ್ತು ನಂದಕುಮಾರ್ ಚೂರಿ ಇರಿತಕ್ಕೆ ಒಳಗಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರಕರಣ ದಾಖಲಿಸಿಕೊಂಡಿದ್ದ ಕೊಣಾಜೆ ಠಾಣೆಯ ಪೊಲೀಸರು ಜೂನ್ 10ರಂದು ಆರು ಮಂದಿಯನ್ನು ಬಂಧಿಸಿದ್ದರು. ಇದೀಗ, ಮತ್ತೆ 7 ಮಂದಿಯನ್ನು ಬಂಧಿಸಿದ್ದಾರೆ. ಬಂಧತರನ್ನು ಇಮ್ರಾನ್, ಇರ್ಷಾದ್, ಶರ್ವಾನ್, ತಾಜುದ್ದೀನ್, ಮುಬಾರಕ್, ಅಶ್ರಫ್, ತಲ್ಲತ್ ಎಂದು ಗುರುತಿಸಲಾಗಿದೆ. ಬಂಧಿತರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ.




