ದಕ್ಷಿಣ ಕನ್ನಡ | ಪೊಲೀಸ್‌ ಸಿಬ್ಬಂದಿ ಮೇಲೆಯೇ ಅನೈತಿಕ ಪೊಲೀಸ್‌ಗಿರಿ; ಇಬ್ಬರ ಬಂಧನ

Date:

ಮುಸ್ಲಿಂ ಸಮುದಾಯವರೆಂದು ಭಾವಿಸಿ ಪೊಲೀಸ್ ಸಿಬ್ಬಂದಿ ಮತ್ತು ಅವರ ಪತ್ನಿಯ ಮೇಲೆ ಹಿಂದುತ್ವವಾದಿ ಕೋಮು ಸಂಘಟನೆಯ ಕಾರ್ಯಕರ್ತರು ಹಲ್ಲೆ ನಡೆಸಿರುವ ಘಟನೆ ದಕ್ಷಿಣ ಕನ್ನಡ ಬಂಟ್ವಾಳದಲ್ಲಿ ನಡೆದಿದೆ.

ನಗರದ ಬಿ.ಸಿ.ರೋಡ್‌ನಲ್ಲಿ ಪೊಲೀಸ್‌ ದಂಪತಿಯನ್ನು ಅಡ್ಡಗಟ್ಟಿದ ಗೂಂಡಾಗರು ಹಲ್ಲೆ ನಡೆಸಿದ್ದಾರೆ. ಅನೈತಿಕ ಪೊಲೀಸ್ ಗಿರಿ ನಡೆಸಿದ ಸಂಘಪರಿವಾರದಲ್ಲಿ ತೊಡಗಿಸಿಕೊಂಡಿರುವ ತುಂಬೆ ನಿವಾಸಿಗಳಾದ ಮನೀಶ್ ಪೂಜಾರಿ ಮತ್ತು ಮಂಜುನಾಥ್ ಆಚಾರ್ಯ ಎಂಬ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬಂಟ್ವಾಳ ಸಂಚಾರ ಠಾಣೆಯ ಪೊಲೀಸ್ ಸಿಬ್ಬಂದಿ ಕುಮಾರ್ ಹನಮಂತಪ್ಪ ಮತ್ತು ಅವರ ಕುಟುಂಬದ ಮೇಲೆ ದಾಳಿ ನಡೆದಿದೆ. ಕುಮಾರ್ ಅವರು ಬಂಟ್ವಾಳ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಅವರ ದೂರಿನ ಆಧಾರದ ಮೇಲೆ ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 341, 504, 035(ಡಿ), 354(ಎ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಘಟನೆಯ ವಿವರ:

ಜು.27ರ ರಾತ್ರಿ ಕುಮಾರ್ ಅವರು ತಮ್ಮ ಪತ್ನಿ ಹಾಗೂ ನಾದಿನಿ ಜೊತೆ ಬಿ.ಸಿ.ರೋಡಿನ ಹೊಟೇಲ್ ಒಂದರಲ್ಲಿ ಊಟ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ವೇಳೆ, ಬಾರ್ ಒಂದರ ಬಳಿ ನಿಂತಿದ್ದ ಆರೋಪಿಗಳು ಬೈಕ್‌ನಲ್ಲಿ ಹಿಂಬಾಲಿಸಿದ್ದಾರೆ. ಆ ಬಳಿಕ ಕುಮಾರ್ ಪತ್ನಿ ಮತ್ತು ನಾದಿನಿಯನ್ನು ವಸತಿಗೃಹದ ಬಳಿ ಬಿಟ್ಟು ಕರ್ತವ್ಯಕ್ಕೆ ಹಿಂತಿರುಗುವಾಗ, ಬೈಕ್‌ನಲ್ಲಿ ಬಂದ ಆರೋಪಿಗಳು ಅವರನ್ನು ಅಡ್ಡಗಟ್ಟಿದ್ದಾರೆ. ಆಗ ಕುಮಾರ್ ಅವರು ತಾನು ಪೊಲೀಸ್ ಎಂದು ಹೇಳಿದರೂ ಕೇಳದ ಆರೋಪಿಗಳು, ”ನೀನು ಪೊಲೀಸ್ ಅಲ್ಲ, ನೀನು ಬ್ಯಾರಿ. ಈಕೆಯನ್ನು ಎಲ್ಲಿಗೆ ಕರೆದುಕೊಂಡು ಹೋಗುತ್ತೀಯಾ?” ಎಂದು ಅಸಭ್ಯವಾಗಿ ವರ್ತಿಸಿದ್ದಾರೆ. ಇಲ್ಲಿನ ವಿಚಾರ ನಿನಗೆ ಗೊತ್ತಿಲ್ಲ ಎಂದು ಬೆದರಿಕೆ ಹಾಕಿ, ಹಲ್ಲೆಗೆ ಮುಂದಾಗಿದ್ದಾರೆ. ಈ ವೇಳೆ ಪತ್ನಿ ಅಲ್ಲಿಗೆ ಓಡಿಬಂದಾಗ ಆಕೆಯ ಮೇಲೂ ಹಲ್ಲೆ ಮಾಡಿದ್ದಾರೆ ಎಂದು ದೂರಿನಲ್ಲಿ ವಿವರಿಸಲಾಗಿದೆ.

ಈ ಗಲಾಟೆಯು ಜೋರಾಗುತ್ತಿದ್ದಂತೆ ಪೊಲೀಸ್ ವಸತಿ ಗೃಹದಲ್ಲಿದ್ದ ಸಹೋದ್ಯೋಗಿಗಳು ಹೊರಬಂದು ಆರೋಪಿಗಳನ್ನು ಸೆರೆಹಿಡಿದಿದ್ದಾರೆ.

ಗಲಾಟೆಯ ವೇಳೆ ಕುಮಾರ್ ಅವರ ಪತ್ನಿಯ ವಿಡಿಯೋವನ್ನು ಆರೋಪಿಗಳು ಚಿತ್ರೀಕರಣ ಮಾಡಿದ್ದು, ಮಾನಭಂಗಕ್ಕೆ ಯತ್ನಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಪೊಲೀಸ್ ಕುಟುಂಬದ ಮಾನಭಂಗಕ್ಕೆ ಯತ್ನ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳನ್ನು ಬಂಧಿಸಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...