ಪುತ್ತೂರು ಪ್ರೇಮ ವಂಚನೆ| ಸಂತ್ರಸ್ತೆ ಮನೆಗೆ ಮಂಗಳೂರಿನ ಮಹಿಳಾ ಸಂಘಟನೆಗಳ ನಿಯೋಗ ಭೇಟಿ

Date:

ಬಿಜೆಪಿ ಮುಖಂಡನ ಪುತ್ರನ ಕಾಮತೃಷೆಗೆ ಬಲಿಪಶುವಾದ ಪುತ್ತೂರಿನ ವಿದ್ಯಾರ್ಥಿನಿ ಮನೆಗೆ ಜನವಾದಿ ಮಹಿಳಾ ಸಂಘಟನೆ, ಸಾಮರಸ್ಯ ಮಂಗಳೂರು ಸಹಿತ ವಿವಿಧ ಮಹಿಳಾ ಸಂಘಟನೆಗಳ ಪ್ರಮುಖರು ಭೇಟಿ ನೀಡಿ ಧೈರ್ಯ ತುಂಬಿದರು.

ಮದುವೆಯಾಗುವ ಭರವಸೆ ನೀಡಿ, ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿದ ನಂತರ ರಾಜಕೀಯ ಬೆಂಬಲದಿಂದ ತಲೆ ಮರೆಸಿಕೊಂಡಿರುವ ಕೃಷ್ಣ ರಾವ್ ನನ್ನು ತಕ್ಷಣ ಬಂಧಿಸಬೇಕು. ಗರ್ಭಪಾತಕ್ಕೆ ಒತ್ತಾಯಿಸಿ ಹಣದ ಆಮಿಷ ಒಡ್ಡಿದ ಸಂಘಟನೆಗಳ ಪ್ರಮುಖರನ್ನು ತನಿಖೆಗೆ ಒಳಪಡಿಸಬೇಕು ಎಂದು ಮಹಿಳಾ ನಾಯಕರು ಈ ಸಂದರ್ಭ ಆಗ್ರಹಿಸಿದರು. ಈ ಕುರಿತು ನ್ಯಾಯ ಒದಗಿಸದಿದ್ದಲ್ಲಿ ಜಿಲ್ಲೆಯ ಜನಪರ ಮಹಿಳಾ ಸಂಘಟನೆಗಳನ್ನು ಜೊತೆ ಸೇರಿಸಿ ಪ್ರತಿಭಟನೆಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ನಿಯೋಗ ಎಚ್ಚರಿಸಿತು.

ಜನವಾದಿ ಮಹಿಳಾ ಸಂಘಟನೆಯ ಜಿಲ್ಲಾಧ್ಯಕ್ಷೆ, ಮಾಜಿ ಕಾರ್ಪೊರೇಟರ್ ಜಯಂತಿ ಶೆಟ್ಟಿ, ಸಾಮರಸ್ಯ ಮಂಗಳೂರಿನ ಮಂಜುಳಾ ನಾಯಕ್, ವಿದ್ಯಾ ಶೆಣೈ, ದಲಿತ ಹಕ್ಕುಗಳ ಸಮಿತಿಯ ಈಶ್ವರಿ ಪದ್ಮುಂಜ, ನ್ಯಾಯವಾದಿ ಶೈಲಜಾ ಅಮರನಾಥ್, ಜನವಾದಿ ಮಹಿಳಾ ಸಂಘಟನೆಯ ಪ್ರಮೀಳಾ ಕಾವೂರು, ಅಸುಂತಾ ಡಿ ಸೋಜಾ, ಪ್ರಮೀಳಾ ದೇವಾಡಿಗ, ಪ್ಲೇವಿ ಕ್ರಾಸ್ತಾ ನಿಯೋಗದಲ್ಲಿ ಇದ್ದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...