ಬಂಟ್ವಾಳ | ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಒತ್ತಾಯಿಸಿ ಸಾಮೂಹಿಕ ಧರಣಿ

Date:

ಅಂತರದ ನಿಯಮ ಸಹಿತ ಹಲವು ನಿಯಮಗಳನ್ನು ಉಲ್ಲಂಘಿಸಿ 23 ವರ್ಷಗಳಿಂದ ಕಾರ್ಯಾಚರಿಸುತ್ತಿರುವ ಬಂಟ್ವಾಳ ತಾಲೂಕಿನ ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವುಗೊಳಿಸಲು ಒತ್ತಾಯಿಸಿ ಸಮಾನ ಮನಸ್ಕ ಸಂಘಟನೆಗಳ ಸಹಭಾಗಿತ್ವದಲ್ಲಿ “ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವು ಹೋರಾಟ ಸಮಿತಿ, ಬಂಟ್ವಾಳ” ಹಮ್ಮಿಕೊಂಡಿದ್ದ ‘ಸಾಮೂಹಿಕ ಧರಣಿ’ ಅಪಾರ ಸಂಖ್ಯೆಯ ಜನರ ಭಾಗವಹಿಸುವಿಕೆಯೊಂದಿಗೆ ಯಶಸ್ವಿಯಾಗಿ ನಡೆಯಿತು.

ಜಾತ್ಯಾತೀತ ಪಕ್ಷಗಳು, ಸಂಘಟನೆಗಳು, ರೈತ, ದಲಿತ, ಕಾರ್ಮಿಕ, ಸಾರಿಗೆ ರಂಗದ ಸಂಘಟನೆಗಳಿಗೆ ಸೇರಿದ ದೊಡ್ಡ ಸಂಖ್ಯೆಯ ಪ್ರತಿನಿಧಿಗಳು, ಸಾರ್ವಜನಿಕರು ಧರಣಿಯಲ್ಲಿ ಉತ್ಸಾಹದಿಂದ ಪಾಲ್ಗೊಂಡರು. ಸುಳ್ಯದಿಂದ ಮೂಲ್ಕಿಯವರಗೆ ಜಿಲ್ಲೆಯ ಎಲ್ಲಾ ತಾಲೂಕುಗಳಿಂದಲೂ ಆಗಮಿಸಿದ್ದ ಮುಖಂಡರು ಧರಣಿಯಲ್ಲಿ ಭಾಗವಹಿಸಿ ಗಮನ ಸೆಳೆದರು.

ಹೋರಾಟ ಸಮಿತಿಯ ಗೌರವಾಧ್ಯಕ್ಷ ಹಾಗೂ ಮಾಜಿ ಸಚಿವ ಬಿ ರಮಾನಾಥ ರೈ ಧರಣಿಯನ್ನು ಉದ್ಘಾಟಿಸಿ ಮಾತನಾಡಿದರು. ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯ ಪ್ರಮುಖರಾದ ಮುನೀರ್ ಕಾಟಿಪಳ್ಳ ಹೋರಾಟದ ದಿಕ್ಸೂಚಿ ಭಾಷಣ ಮಾಡಿದರು. ಸಾಮಾಜಿಕ ಕಾರ್ಯಕರ್ತರು, ಬರಹಗಾರ ಎಮ್ ಜಿ ಹೆಗ್ಡೆ, ನ್ಯಾಯವಾದಿ ಅಶ್ವಿನ್ ಕುಮಾರ್ ರೈ, ಬಂಟ್ವಾಳ ಸಮಾನ ಮನಸ್ಕ ಸಂಘಟನೆಗಳ ಒಕ್ಕೂಟದ ಕಾರ್ಯದರ್ಶಿ ಸುರೇಶ್ ಕುಮಾರ್, ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಸದಾಶಿವ ಪಡುಬಿದ್ರೆ, ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಎಮ್ ಎಸ್ ಮುಹಮ್ಮದ್, ಮಾಜಿ ಸದಸ್ಯರುಗಳಾದ ತುಂಬೆ ಪ್ರಕಾಶ್ ಚಂದ್ರ ಶೆಟ್ಟಿ, ಸಾಹುಲ್ ಹಮೀದ್, ರೈತ ನಾಯಕ ರೂಪೇಶ್ ರೈ, ಸಿಐಟಿಯು ಜಿಲ್ಲಾಧ್ಯಕ್ಷ ಬಿ ಎಮ್ ಭಟ್, ಐಟಕ್ ಜಿಲ್ಲಾ‌ ಕಾರ್ಯದರ್ಶಿ ಸೀತಾರಾಮ ಬೆರಿಂಜೆ, ಕಾರ್ಮಿಕ ನಾಯಕರಾದ ಸುನಿಲ್ ಕುಮಾರ್ ಬಜಾಲ್, ರಾಮಣ್ಣ ವಿಟ್ಲ, ಪುತ್ತೂರಿನ ಹಿರಿಯ ಮುಂದಾಳು ಕಾವು ಹೇಮನಾಥ ಶೆಟ್ಟಿ, ಯುವ ಮುಂದಾಳು ಸುಹೈಲ್ ಕಂದಕ್, ಸಾಮರಸ್ಯ ಮಂಗಳೂರಿನ ಮಂಜುಳಾ ನಾಯಕ್, ಮಮತಾ ಗಟ್ಟಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ದಕ್ಷಿಣ ಕನ್ನಡ | ನಿಯಂತ್ರಣ ತಪ್ಪಿ ಸರ್ಕಲ್‌ಗೆ ಡಿಕ್ಕಿ ಹೊಡೆದ ಕಾರು; ಮೂವರು ಸಾವು

ಹೋರಾಟ ಸಮಿತಿಯ ಸಂಚಾಲಕರುಗಳಾದ ಬಿ ಶೇಖರ್, ಮೋಹನ್ ಶೆಟ್ಟಿ ಪಂಜಿಕಲ್ಲು, ಮುಖಂಡರಾದ ಬೇಬಿ ಕುಂದರ್ ಕಾರ್ಯಕ್ರಮ ನಿರ್ವಹಿಸಿದರು. ಬಿ ಶೇಖರ್ ಮನವಿ ವಾಚನ ಮಾಡಿದರು. ಯುವ ನಾಯಕ ಲುಕ್ಮಾನ್ ಬಂಟ್ವಾಳ, ಡಿವೈಎಫ್ಐ ಜಿಲ್ಲಾ‌ ಕಾರ್ಯದರ್ಶಿ ಸಂತೋಷ್ ಬಜಾಲ್, ರೈತ ನಾಯಕ ರಾದ ಶ್ರೀಧರ್ ಶೆಟ್ಟಿ, ಕೆ ಯಾದವ ಶೆಟ್ಟಿ, ವಿವಿಧ ಸಂಘಟನೆಗಳ ಪ್ರಮುಖರಾದ ಅಬ್ಬಾಸ್ ಅಲಿ, ಸದಾಶಿವ ದಾಸ್, ಪಿಯೂಸ್, ಲಾವಣ್ಯ ಬಳ್ಳಾಲ್, ಅಶ್ರಫ್ ಕಲ್ಲೇಗ, ವಿ ಕುಕ್ಯಾನ್ ಸಹಿತ ಹಲವಾರು ಪ್ರಮುಖರು ಉಪಸ್ಥಿತರಿದ್ದರು.

ಸಮುದಾಯದ ಶ್ಯಾಮರಾಜ್ ಪಟ್ರಮೆ, ಈಶ್ವರಿ ಪದ್ಮುಂಜ, ಜಯಶ್ರೀ ಟೋಲ್‌ ವಿರೋಧಿ ಹಾಡುಗಳನ್ನು ಹಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಹೇಶ್ ಶೆಟ್ಟಿ ತಿಮರೋಡಿಗೆ ಮೂರನೇ ಬಾರಿ ಗಡಿಪಾರು ಆದೇಶ, ಮಧ್ಯರಾತ್ರಿ ನೋಟಿಸ್ ಜಾರಿ !

ಧರ್ಮಸ್ಥಳ ಸೌಜನ್ಯ ‌ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಮೂರನೇ...

ಕರಾವಳಿ | LPG ಅಭಾವ; ಹೋಟೆಲ್ ಉದ್ಯಮಕ್ಕೆ ಭಾರೀ ಹೊಡೆತ

ಮಧ್ಯಪ್ರಾಚ್ಯ ದೇಶಗಳಲ್ಲಿ ಉಂಟಾಗಿರುವ ಯುದ್ಧದ ಪರಿಣಾಮವಾಗಿ ಅಡುಗೆ ಅನಿಲ (LPG) ಸರಬರಾಜಿನಲ್ಲಿ...

ಧರ್ಮಸ್ಥಳ ಪೊಲೀಸ್ ಠಾಣೆಗೆ ಆಯೋಗದ ಅಧ್ಯಕ್ಷರ ಭೇಟಿ

ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಾದ ಶಶಿಧರ್ ಎಸ್.ಕೋಸಂಬೆ...

ಮಂಗಳೂರು | ಪಾಸ್ಟಿಕ್, ಪತ್ರಿಕೆಯಲ್ಲಿ ಹೋಟೆಲ್ ಬಿಸಿ ಆಹಾರ ಪಾರ್ಸೆಲ್ ನಿಷೇಧಕ್ಕೆ ಸೂಚನೆ

ಹೋಟೆಲ್, ಕ್ಯಾಂಟೀನ್, ಕೆಫೆಗಳಲ್ಲಿ ಪ್ಲಾಸ್ಟಿಕ್ ಕವರ್, ಪತ್ರಿಕೆಗಳಲ್ಲಿ ಬಿಸಿ ಆಹಾರ ಪದಾರ್ಥಗಳನ್ನು...