ಮತ್ತೆ ಮುನ್ನೆಲೆಗೆ ಅನ್ಯಮತೀಯ ವ್ಯಾಪಾರ ನಿಷೇಧ; ಕುಕ್ಕೆಯಲ್ಲಿ ಹಿಂದುಯೇತರ ವ್ಯಾಪಾರಿಗಳ ನಿರ್ಬಂಧಕ್ಕೆ ಒತ್ತಾಯ

Date:

ದೇವಸ್ಥಾನಗಳ ಬಳಿ ಹಿಂದುಯೇತರ ಸಮುದಾಯಗಳ ವ್ಯಾಪಾರಿಗಳಿಗೆ ವ್ಯಾಪಾರ ಮಾಡಲು ಅವಕಾಶ ನೀಡಬಾರದು ಎಂಬ ‘ವ್ಯಾಪಾರ ಕೋಮು ರಾಜಕೀಯ’ ಮತ್ತೆ ಮುನ್ನೆಲೆಗೆ ಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ದೇವಾಲಯದ ಬಳಿ ಹಿಂದುಯೇತರ ವ್ಯಾಪಾರಿಗಳಿಗೆ ಅವಕಾಶ ನೀಡಬಾರದು ಎಂದು ಹಿಂದುತ್ವ ಕೋಮುವಾದಿ ಸಂಘಟನಗಳು ಒತ್ತಾಯಿಸಿವೆ.

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಡಿಸೆಂಬರ್ 18ರಂದು ಚಂಪಾ ಷಷ್ಠಿ ನಡೆಯಲಿದೆ. ಈ ವೇಳೆ, ಹಿಂದುಯೇತರ ವ್ಯಾಪಾರಿಗಳಿಗೆ ವ್ಯಾಪಾರ ಮಾಡಲು ಅವಕಾಶ ನೀಡಬಾರದು ಎಂದು ದೇವಳದ ಕಾರ್ಯ ನಿರ್ವಹಣಾ ಅಧಿಕಾರಿಗೆ ಕೋಮುವಾದಿ ಸಂಘಟನೆಗಳು ಮನವಿ ಸಲ್ಲಿಸಿವೆ.

ಅಲ್ಲದೆ, ಹಿಂದು ಹಿತರಕ್ಷಣಾ ವೇದಿಕೆ, ಸುಬ್ರಹ್ಮಣ್ಯ ಹೆಸರಿನಲ್ಲಿ ಕುಮಾರಧಾರ ಬಳಿ ಬ್ಯಾನರ್‌ಅನ್ನೂ ಕೂಡ ಹಾಕಲಾಗಿದೆ. “ಚಂಪಾ ಷಷ್ಠಿ ಸಂದರ್ಭದಲ್ಲಿ ನಡೆಯುವ ಜಾತ್ರೆಯಲ್ಲಿ ಅನ್ಯಮತೀಯರ ವ್ಯಾಪಾರ ನಿಷೇಧಿಸಲಾಗಿದೆ” ಎಂದು ಬ್ಯಾನರ್‌ನಲ್ಲಿ ಬರೆಯಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...