ದಕ್ಷಿಣ ಕನ್ನಡ | ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ದೂರು ದಾಖಲು

Date:

ಇತ್ತೀಚೆಗೆ ಮೈಸೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮುಸ್ಲಿಂ ಮಹಿಳೆಯರ ವಿರುದ್ಧ ಕಲ್ಲಡ್ಕ ಪ್ರಭಾಕರ್ ಭಟ್ ಅವಹೇಳನಾಕಾರಿ ಹೇಳಿಕೆ ನೀಡಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ದಕ್ಷಿಣ ಕನ್ನಡ ಜಿಲ್ಲಾ ಮುಸ್ಲಿಂ ಒಕ್ಕೂಟ ದೂರು ದಾಖಲಿಸಿದೆ.

ಮಂಗಳೂರು ದಕ್ಷಿಣ ಠಾಣೆಯಲ್ಲಿ ಒಕ್ಕೂಟದ ಮುಖಂಡರು ದೂರು ದಾಖಲಿಸಿದ್ದಾರೆ. “ಪ್ರಭಾಕರ್ ಭಟ್ ಕೋಮು ಪ್ರಚೋದನಕಾರಿ ಹೇಳಿಕೆ ನೀಡಿದ್ದು, ಮುಸ್ಲಿಂ ಸಮುದಾಯದ ವಿರುದ್ಧ ಮತೀಯ ಉದ್ವಿಗ್ನತೆ ಸೃಷ್ಠಿಸುತ್ತಿದ್ದಾರೆ. ಮತೀಯ ಗಲಭೆಗಳನ್ನು ಹುಟ್ಟು ಹಾಕುವ ರೀತಿಯ ಹೇಳಿಕೆ ನೀಡಿದ್ದಾರೆ” ಎಂದು ಆರೋಪಿಸಿದ್ದಾರೆ.

” ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಪೊಲೀಸರು,ಸರ್ಕಾರ ಮತ್ತು ಜಿಲ್ಲಾಡಳಿತ ಪ್ರಕರಣ ದಾಖಲಿಸಬೇಕು. ಪ್ರಕರಣ ದಾಖಲಿಸಲು ಹಿಂಜರಿದರೆ, ಅವರ ಹೇಳಿಕೆಗಳಿಂದಾಗಿ ಅಹಿತಕರ ಘಟನೆಗಳು ನಡೆಯುವ ಸಾಧ್ಯತೆಗಳಿವೆ. ಇದಕ್ಕೆ ಸರ್ಕಾರ ಮತ್ತು ಪೊಲೀಸ್‌ ಇಲಾಖೆ ಹೊಣೆಯಾಗುತ್ತದೆ” ಎಂದು ಒಕ್ಕೂಟದ ಮುಖಂಡರು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದೂರು ದಾಖಲಿಸುವ ವೇಳೆ, ಒಕ್ಕೂಟದ ಅಧ್ಯಕ್ಷ, ಮಾಜಿ ಮೇಯರ್ ಕೆ.ಅಶ್ರಫ್, ಅಬ್ದುಲ್ ಜಲೀಲ್,ಅಶ್ರಫ್ ಬದ್ರಿಯಾ, ಸಾಲಿಹ್ ಬಜ್ಪೆ, ಹಿದಾಯತ್ ಮಾರಿಪಲ್ಲ,ಹಿದಾಯತ್ ಕೃಷ್ಣಾಪುರ,ಮೊಹಮ್ಮದ್ ಹನೀಫ್.ಯು, ವಿ.ಏಚ್. ಕರೀಮ್, ಫಾರೂಕ್ ಮತ್ತಿತರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...