ದಕ್ಷಿಣ ಕನ್ನಡ | ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ; ಸಭೆ ಕರೆದ ಜಿಲ್ಲಾಧಿಕಾರಿ

Date:

ಕರಾವಳಿಯಲ್ಲಿ ಜಾತ್ರೆ, ಸಮಾರಂಭಗಳ ವ್ಯಾಪಾರಗಳ ಮೇಲೆ ಕೋಮು ದ್ವೇಷದ ಛಾಯೆ ಮತ್ತೆ ಮುನ್ನೆಲೆಗೆ ಬಂದಿದೆ. ಮಂಗಳೂರಿನ ಮಂಗಳಾದೇವಿ ದೇವಸ್ಥಾನದ ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ವ್ಯಾಪಾರ ಮಾಡಲು ಅವಕಾಶ ನೀಡಲಾಗಿಲ್ಲ. ಸನಾತನಿಗಳ ಮಾತಿಗೆ ಕಟ್ಟುಬಿದ್ದು ಆಡಳಿತ ಮಂಡಳಿಯು ಮುಸ್ಲಿಂ ವ್ಯಾಪಾರಿಗಳಿಗೆ ವಂಚಿಸಿದೆ ಎಂಬ ಆರೋಪ ಕೇಳಿಬಂದಿದೆ. ವಿವಿಧ ಸಂಘಟನೆಗಳು ಅದನ್ನು ಖಂಡಿಸಿದ್ದು, ಶುಕ್ರವಾರ ಜಿಲ್ಲಾಧಿಕಾರಿ ಸಭೆ ಕರೆದಿದ್ದಾರೆ ಎಂದು ತಿಳಿದುಬಂದಿದೆ.

ಅಕ್ಟೋಬರ್ 15ರಿಂದ 24ರವರೆಗೆ ಮಂಗಳಾದೇವಿ ಜಾತ್ರಾ ಮಹೋತ್ಸವ ನಡೆಯಲಿದೆ. ಜಾತ್ರೆಯಲ್ಲಿ ಅಂಗಡಿ ಮಳಿಗೆ ತೆರೆಯಲು ಮುಸ್ಲಿಂ ವ್ಯಾಪಾರಿಗಳು ಅರ್ಜಿ ಸಲ್ಲಿಸಿದ್ದರೂ, ಅವರನ್ನು ದೇವಸ್ಥಾನ ಆಡಳಿತ ಮಂಡಳಿ ನಿರ್ಲಕ್ಷಿಸಿದೆ. ನಾಳೆ ಬನ್ನಿ, ಆಗ ಬನ್ನಿ, ಈಗ ಬನ್ನಿ ಅಂತ ಹೇಳುತ್ತಾ ಕಾಲ ಹರಣ ಮಾಡಿದೆ. ಇದೀಗ, ನಾವು ಕರೆದಾಗ ನೀವು ಬಂದಿಲ್ಲ. ನಿಮಗೆ ವ್ಯಾಪಾರ ಮಾಡಲು ಅವಕಾಶವಿಲ್ಲ ಎಂದು ಆಡಳಿತ ಮಂಡಳಿ ಹೇಳಿದೆ. ಉದ್ದೇಶಪೂರ್ವಕವಾಗಿ ಮುಸ್ಲಿಂ ವ್ಯಾಪಾರಿಗಳನ್ನು ಹೊರಗಿಡುವ ಹುನ್ನಾರ ನಡೆದಿದೆ ಎಂದು ಜನಪರ ಸಂಘಟನೆಗಳು ಮತ್ತು ಮುಸ್ಲಿಂ ವ್ಯಾಪಾರಿಗಳು ಆರೋಪಿಸಿದ್ದಾರೆ.

ಮಂಗಳಾದೇವಿ ಜಾತ್ರೆಯೂ ಸೇರಿದಂತೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ನಡೆಯುವ ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ವ್ಯಾಪಾರ ಮಾಡಲು ಅವಕಾಶ ನೀಡಲೇಬೇಕೆಂದು ಒತ್ತಾಯಿಸಿ ಜಾತ್ರೆ ವ್ಯಾಪಾರಸ್ಥರ ಸಮನ್ವಯ ಸಮಿತಿ ಒತ್ತಾಯಿಸಿದೆ. ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ದೂರು ನೀಡಿದೆ. ಅವರ ದೂರನ್ನು ಪರಿಗಣಿಸಿರುವ ಜಿಲ್ಲಾಧಿಕಾರಿ ಶುಕ್ರವಾರ ಮಧ್ಯಾಹ್ನ ಸಭೆ ಕರೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಸ್ಲಿಂ ವ್ಯಾಪಾರಿಗಳಿಗೆ ವ್ಯಾಪಾರ ನಿರ್ಬಂಧಿಸಿರುವ ಕುರಿತು ಈದಿನ.ಕಾಮ್ ಜೊತೆ ಮಾತನಾಡಿದ ಡಿವೈಎಫ್‌ಐ ಸಂಘಟನೆ ಸುನೀಲ್ ಕುಮಾರ್ ಬಜಾಲ್, “ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧಿಸುವ ಖಯಾಲಿ ಕೆಲವು ವರ್ಷಗಳಿಂದ ನಡೆಯುತ್ತಲೇ ಇದೆ. ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಇದು ಹೆಚ್ಚಾಗಿತ್ತು. ಇಗ ಸರ್ಕಾರ ಬದಲಾಗಿದೆ. ಆದರೂ, ಅಧಿಕಾರಿಗಳಿಗೆ ಹಿಂದಿನ ಸರ್ಕಾರದ ಮನಸ್ಥಿತಿ ಬದಲಾಗಿಲ್ಲ. ಹೀಗಾಗಿ, ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ ಹೇರುವುದನ್ನು ಮುಂದುವರೆಸುತ್ತಿದ್ದಾರೆ. ದೇವಸ್ಥಾನ ಆಡಳಿತ ಮಂಡಳಿಯು ಉದ್ದೇಶಪೂರ್ವ ಮುಸ್ಲಿಂ ವ್ಯಾಪಾರಿಗಳನ್ನು ದೂರವಿಡುತ್ತಿದೆ” ಎಂದು ಆರೋಪಿಸಿದ್ದಾರೆ.

“ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ ನೀಡದೇ ಇರುವ ಬಗ್ಗೆ ಪ್ರಶ್ನಿಸಿದಾಗ, ಸನಾತನ ಸಂಸ್ಥೆಯ ಮುಖಂಡರೊಬ್ಬರು ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ ನೀಡದಂತೆ ಮನವಿ ಸಲ್ಲಿಸಿದ್ದಾರೆ. ಹೀಗಾಗಿ, ಸಮಸ್ಯೆ ಮಾಡಿಕೊಳ್ಳುವುದು ಬೇಡವೆಂದು ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ ನೀಡಲಿಲ್ಲವೆಂದು ದೇವಸ್ಥಾನ ಆಡಳಿತ ಮಂಡಳಿ ಒಪ್ಪಿಕೊಂಡಿದೆ” ಎಂದು ಅವರು ತಿಳಿಸಿದ್ದಾರೆ.

ಜಿಲ್ಲಾಧಿಕಾರಿ 2

“ದೇವಸ್ಥಾನದ ಒಳ ಪ್ರಾಂಗಣದಲ್ಲಿ ಅನ್ಯಧರ್ಮೀಯರು ವ್ಯಾಪಾರ ಮಾಡುವಂತಿಲ್ಲ ಎಂಬುದು ನಮಗೂ ಗೊತ್ತಿದೆ. ಆ ಪರಾಂಗಣದಲ್ಲಿ ದೇವಸ್ಥಾನದ್ದೇ ಅದ ಒಂದೆರಡು ಅಂಗಡಿಗಳು ಮಾತ್ರ ಇರುತ್ತವೆ. ಆದರೆ, ಜಾತ್ರೆ ನಡೆಯುವುದು ದೇವಸ್ಥಾನದ ಹೊರಭಾಗದಲ್ಲಿ. ಮುಖ್ಯವಾಗಿ ರಸ್ತೆ ಆಸುಪಾಸು ಮತ್ತು ಮೈದಾನದಲ್ಲಿ. ಆ ಪ್ರದೇಶವು ಮಹಾನಗರ ಪಾಲಿಕೆ ಅಧೀನಕ್ಕೆ ಬರುತ್ತದೆ. ಅಲ್ಲಿ ವ್ಯಾಪಾರ ಮಾಡಲು ಅನುಮತಿ ನೀಡಬೇಕಾದವರು ಪಾಲಿಕೆಯ ಆಯುಕ್ತರು. ಆದರೆ, ಜಾತ್ರೆಯಲ್ಲಿ ವ್ಯಾಪಾರ ಮಾಡಲು ಆಡಳಿತ ಮಂಡಳಿ ಅನುಮತಿ ನೀಡುತ್ತಿದೆ. ಇದು ಕಾನೂನುಬಾಹಿರ” ಎಂದು ಸುನೀಲ್ ಕುಮಾರ್ ಆರೋಪಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಕೋಮು ದ್ವೇಷ ಪ್ರಕರಣ: ವಿಕ್ರಮ್ ಹೆಗಡೆ ವಿರುದ್ಧ ವಿಚಾರಣೆ ಹಿಂಪಡೆಯಲು ಮುಂದಾಗಿದೆಯೇ ಸರ್ಕಾರ?

“ದೇವಸ್ಥಾನದ ಮುಂಭಾಗದ ರಥಬೀದಿಯಲ್ಲಿ ವ್ಯಾಪಾರ ನಡೆಸಲು ಅನುಮತಿ ನೀಡುವಲ್ಲಿಯೂ ಆಡಳಿತ ಮಂಡಳಿ ಭಾರೀ ಸುಲಿಗೆ ಮಾಡುತ್ತಿದೆ. ಜಾತ್ರೆಗಳಲ್ಲಿ ವ್ಯಾಪಾರ ಮಾಡಲು 50 ರಿಂದ 100 ರೂ. ಅಥವಾ 200 ರೂ. ಶುಲ್ಕ ವಸೂಲಿ ಮಾಡಬೇಕು. ಈ ಹಿಂದೆ ಅಷ್ಟೇ ಶುಲ್ಕ ವಿಧಿಸಲಾಗುತ್ತಿತ್ತು. ಆದರೆ, ಈಗ ಒಂದು ವಾರಕ್ಕೆ 7,500 ರೂ. ಶುಲ್ಕ ವಸೂಲಿ ಮಾಡುತ್ತಿದ್ದಾರೆ. ಚುರುಮುರಿ ಮಾರುವವರು ದಿನಕ್ಕೆ ಕನಿಷ್ಠ 1,000 ರೂ. ಶುಲ್ಕವನ್ನೇ ಭರಿಸಬೇಕಾಗುತ್ತದೆ. ಇದು ಹಗಲು ದರೋಡೆಯಾಗಿದೆ. ಅಷ್ಟೊಂದು ಶುಲ್ಕ ವಿಧಿಸಿ ವ್ಯಾಪಾರ ಮಾಡಿ, ವ್ಯಾಪಾರಸ್ಥರು ಏನನ್ನು ಗಳಿಸಲು ಸಾಧ್ಯ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ವ್ಯಾಪಾರ ನಿರ್ಬಂಧ ಮತ್ತು ಅಧಿಕ ಶುಲ್ಕದ ಬಗ್ಗೆ ಮಹಾನಗರ ಪಾಲಿಕೆ, ಜಿಲ್ಲಾಧಿಕಾರಿಗೆ ದೂರು ನೀಡಿದ್ದೇವೆ. ಪ್ರತಿಭಟನೆ ನಡೆಸಿದ್ದೇವೆ. ಜಿಲ್ಲಾಧಿಕಾರಿ ಶುಕ್ರವಾರ ಮಧ್ಯಾಹ್ನ ಸಭೆ ಕರೆದಿದ್ದಾರೆ. ಸಭೆಯಲ್ಲಿ ಎಲ್ಲದರ ಬಗ್ಗೆಯೂ ಚರ್ಚೆ ನಡೆಸುತ್ತೇವೆ. ವ್ಯಾಪಾರಕ್ಕೆ ಅವಕಾಶ ನೀಡಬೇಕು ಮತ್ತು ಶುಲ್ಕವನ್ನು ಕಡಿತಗೊಳಿಸಬೇಕೆಂದು ಒತ್ತಾಯಿಸುತ್ತೇವೆ” ಎಂದು ಅವರು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...