ದಕ್ಷಿಣ ಕನ್ನಡ | ಉಸ್ತುವಾರಿ ಸಚಿವರಿಂದ ಸ್ಮಾರ್ಟ್ ಸಿಟಿ ಕಾಮಗಾರಿಗಳ ಪರಿಶೀಲನೆ

Date:

ರಾಷ್ಟ್ರೀಯ ಹೆದ್ದಾರಿಯಿಂದ ಮೋರ್ಗನ್ ಗೇಟ್‌ವರೆಗಿನ ಚತುಷ್ಫಥ ರಸ್ತೆ ಕಾಮಗಾರಿ ಪರಿಶೀಲಿಸಿ ಅಭಿವೃದ್ಧಿಯಿಂದ ದಕ್ಷಿಣ ಭಾಗದಿಂದ ನಗರ ಪ್ರವೇಶಕ್ಕೆ ಸಂಚಾರ ಸುಗಮವಾಗಲಿದೆ ಎಂದು ಆರೋಗ್ಯ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ನಿರ್ಮಾಣಗೊಳ್ಳುತ್ತಿರುವ ವಿವಿಧ ಕಾಮಗಾರಿಗಳ ಸ್ಥಳ ಪರಿಶೀಲನೆ ನಡೆಸಿದ ವೇಳೆ ಜೆಪ್ಪು ರೈಲ್ವೇ ಅಂಡರ್‌ ಪಾಸ್‌ ಪರಿಶೀಲನೆ ಬಳಿಕ ಮಾತನಾಡಿದರು.

ಜಲಾಭಿಮುಖ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದ ಸಚಿವರು ಅಧಿಕಾರಿಗಳಿಂದ ಸಮಗ್ರ ಮಾಹಿತಿ ಪಡೆದರು. ವಾಟರ್ ಫ್ರಂಟ್ ರಸ್ತೆ ಕಾಮಗಾರಿಯನ್ನು ಮೋರ್ಗನ್ ಗೇಟ್, ಮುಳಿಹಿತ್ಲು ಮತ್ತು ಬೋಳಾರ ಲೀವೆಲ್‌ಗೆ ಖುದ್ದು ತೆರಳಿ ವೀಕ್ಷಿಸಿದರು. ವಾಟರ್ ಫ್ರಂಟ್ ರಸ್ತೆ ನಿರ್ಮಾಣಗೊಳ್ಳಲಿರುವ ಪ್ರದೇಶದಲ್ಲಿ ಸುಮಾರು ಒಂದು ಕಿ.ಮೀ. ನಷ್ಟು ನಡೆದುಕೊಂಡು ಹೋದ ಸಚಿವರು, ಸ್ಥಳೀಯರೊಂದಿಗೂ ಮಾತನಾಡಿ, ಅಹವಾಲು ಆಲಿಸಿದರು. ನದಿ ತೀರದಲ್ಲಿ ವೀನುಗಾರಿಕೆ ಮಾಡುತ್ತಾ ನೆಲೆಸಿರುವ ಶಿಳ್ಳೆ ಖ್ಯಾತರಿಗೆ ಪುನರ್ವಸತಿ ಕಲ್ಪಿಸುವ ಬಗ್ಗೆ ಪರಿಶೀಲಿಸುವಂತೆ ಸಚಿವರು ಜಿಲ್ಲಾಧಿಕಾರಿಗೆ ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಳಿಕ ಮಾತನಾಡಿದ ಸಚಿವರು, ಕೆಲವೆಡೆ ಈ ಕಾಮಗಾರಿಗೆ ಸಮಸ್ಯೆಗಳು ಉಂಟಾಗಿವೆ. ಕಾಮಗಾರಿ ಟೆಂಡರ್ ಅಂತಿಮಗೊಳ್ಳುವ ಮೊದಲೇ ಇದನ್ನು ಬಗೆಹರಿಸಬೇಕಿತ್ತು. ಈ ಹಿನ್ನೆಲೆಯಲ್ಲಿ ಜಮೀನು ಬಳಕೆದಾರರೊಂದಿಗೆ ಮಾತುಕತೆ ನಡೆಸಿ, ಯೋಜನೆಗೆ ಸಹಕರಿಸಲು ಕೋರುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಈ ಯೋಜನೆಗೆ ಸಂಪರ್ಕ ರಸ್ತೆ, ಪಾರ್ಕಿಂಗ್ ಮತ್ತಿತರ ಕಾಮಗಾರಿಗಳಿಗೂ ಆದ್ಯತೆ ನೀಡಲು ದಿನೇಶ್ ಗುಂಡೂರಾವ್ ಸೂಚಿಸಿದರು.

ವಾಟರ್ ಫ್ರಂಟ್ ಕಾಮಗಾರಿಗೆ ಬಂದರು ಇಲಾಖೆ ಈಗಾಗಲೇ ನಿರಾಕ್ಷೇಪಣೆ ಪತ್ರ ನೀಡಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಸಚಿವರಿಗೆ ಮಾಹಿತಿ ನೀಡಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಎಸ್‌ಸಿ/ಎಸ್‌ಟಿ ವಿದ್ಯಾರ್ಥಿನಿಯರಿಗೆ ಸೌಲಭ್ಯ ಕಲ್ಪಿಸಲು ಮಹಿಳಾ ವಿವಿ ವಿಫಲ; ಡಿವಿಪಿ ಆರೋಪ

ಈ ಸಂದರ್ಭದಲ್ಲಿ ಶಾಸಕರುಗಳಾದ ಮಂಜುನಾಥ ಭಂಢಾರಿ, ಹರೀಶ್ ಕುಮಾರ್, ಜಿಲ್ಲಾ ಪಂಚಾಯತ್ ಸಿಇಒ ಡಾ.ಆನಂದ್, ಸ್ಮಾರ್ಟ್ ಸಿಟಿ ಎಂಡಿ ರಾಜು, ಮಾಜಿ ಶಾಸಕರುಗಳಾದ ಜೆ ಆರ್ ಲೋಬೋ, ಐವನ್ ಡಿಸೋಜ, ಮಹಾನಗರಪಾಲಿಕೆ ಸದಸ್ಯ ಪ್ರವೀಣ್ ಕುಮಾರ್ ಆಳ್ವ, ಎ ಸಿ ವಿನಯರಾಜ್ ಸೇರಿದಂತೆ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...