ದಕ್ಷಿಣ ಕನ್ನಡ | ಅಲೆಮಾರಿ ಶಿಳ್ಳೆಕ್ಯಾತ ಕುಟುಂಬಗಳಿಗೆ ಶಾಶ್ವತ ಸೂರು ಕಲ್ಪಿಸಲು ಡಿವೈಎಫ್ಐ ಒತ್ತಾಯ

Date:

ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಗೆ ಒಳಪಡುವ ಬೋಳಾರ ವಾರ್ಡಿನ ನೇತ್ರಾವತಿ ನದಿ ತೀರದಲ್ಲಿ ಅಲೆಮಾರಿ ಶಿಳ್ಳೆಕ್ಯಾತ ಸಮುದಾಯದ 8 ಕುಟುಂಬಗಳು ಕಳೆದ ಹಲವಾರು ವರ್ಷಗಳಿಂದ ತೆಪ್ಪದ ಮೂಲಕ ಮೀನು ಹಿಡಿದು ಜೀವನ ನಡೆಸುತ್ತಿದ್ದು, ಈಗ ತಮ್ಮ ಗುಡಿಸಲುಗಳನ್ನು ಕಳೆದುಕೊಂಡು ಬೀದಿಪಾಲಾಗುವ ಪರಿಸ್ಥಿತಿ ಬಂದೊದಗಿದೆ.

ಸ್ಮಾರ್ಟ್ ಸಿಟಿ ಯೋಜನೆಯಡಿ 30 ಕೋಟಿ ರೂ. ವೆಚ್ಚದಲ್ಲಿ ನದಿ ತೀರದಲ್ಲಿ ನಿರ್ಮಿಸಲು ಹೊರಟಿರುವ ವಾಕಿಂಗ್ ಟ್ರ್ಯಾಕ್, ಸೈಕಲ್ ಟ್ರ್ಯಾಕ್, ಪ್ಲೇ ಏರಿಯಾದಂತಹ ಕಾಮಗಾರಿಗಳು ಅಲೆಮಾರಿ ಶಿಳ್ಳೆಕ್ಯಾತ ಸಮುದಾಯದ ಗುಡಿಸಲುಗಳಿರುವ ಜಾಗದಲ್ಲೇ ನಿರ್ಮಾಣವಾಗಲಿವೆ. ಇದರಿಂದ ಈ ಸಮುದಾಯ ಕನಿಷ್ಟ ಮೂಲ ಸೌಕರ್ಯಗಳಿಲ್ಲದೆ ಬದುಕುತ್ತಿರುವ ಸಣ್ಣ ಗುಡಿಸಲುಗಳನ್ನೂ ಕಳೆದುಕೊಂಡು ಬೀದಿಗೆ ಬೀಳುವ ಹೀನಾಯ ಪರಿಸ್ಥಿತಿ ಉಂಟಾಗುವ ಸಾಧ್ಯತೆ ಇದೆ.

“ಶಿಳ್ಳೆಕ್ಯಾತ ಸಮುದಾಯ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಹಲವಾರು ಬಾರಿ ಸಂಬಂಧಪಟ್ಟ ಇಲಾಖೆಗಳಿಗೆ ಮನವಿ ಸಲ್ಲಿಸಿದರೂ, ಶಾಶ್ವತ ಸೂರಿಗಾಗಿ ಮನೆ ನಿವೇಶನಕ್ಕೆ ಅರ್ಜಿ ಸಲ್ಲಿಸಿ ಹಲವು ವರುಷಗಳು ಕಳೆದರೂ ಈವರೆಗೆ ಯಾವುದೇ ಸವಲತ್ತುಗಳನ್ನು ನೀಡಲು ಆಳುವ ಸರ್ಕಾರಗಳಿಗಾಗಲಿ, ಜಿಲ್ಲಾಡಳಿತಕ್ಕಾಗಲಿ ಸಾಧ್ಯವಾಗಿಲ್ಲ. ಸದ್ಯ ಅವರೇ ಟಾರ್ಪಾಲ್ ಹಾಸಿ ಟೆಂಟ್ ನಿರ್ಮಿಸಿಕೊಂಡು ಬದುಕುತ್ತಿರುವ ಗುಡಿಸಲುಗಳಲ್ಲೇ ನೆಮ್ಮದಿಯಿಂದ ಜೀವನ ನಡೆಸುತ್ತಿರುವಾಗ ಇಂತಹ ಯೋಜನೆಗಳು ಆ ಸಮುದಾಯವನ್ನು ಇನ್ನಷ್ಟು ಅನಾಥರನ್ನಾಗಿಸುವ ಸ್ಥಿತಿಗೆ ತಲುಪಿಸುತ್ತಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಗದಗ | ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿಗಿಲ್ಲ ಬೋಧಕರು; ವಿದ್ಯಾರ್ಥಿಗಳ ಭವಿಷ್ಯ ಅತಂತ್ರ

ಸ್ಮಾರ್ಟ್ ಸಿಟಿ ಯೋಜನೆಯಿಂದ ಮನೆ ಕಳೆದುಕೊಂಡು ಬೀದಿ ಪಾಲಾಗುವ ಆತಂಕದಲ್ಲಿರುವ ಅಲೆಮಾರಿ ಶಿಳ್ಳೆಕ್ಯಾತ ಸಮುದಾಯದ 8 ಗುಡಿಸಲುಗಳನ್ನು ಉಳಿಸಲು ಅಥವಾ ಪರ್ಯಾಯ ಶಾಶ್ವತ ಮನೆ ನಿರ್ಮಿಸಿಕೊಡಲು ಸಂಬಂಧಪಟ್ಟ ಇಲಾಖೆ, ಜಿಲ್ಲಾಡಳಿತ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಡಿವೈಎಫ್ಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಪರವಾಗಿ ಜಿಲ್ಲಾಧ್ಯಕ್ಷ ಬಿ ಕೆ ಇಮ್ತಿಯಾಜ್, ಕಾರ್ಯದರ್ಶಿ ಸಂತೋಷ್ ಬಜಾಲ್ ಆಗ್ರಹಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...