ದಕ್ಷಿಣ ಕನ್ನಡ | ಪತ್ನಿಗೆ ತ್ರಿವಳಿ ತಲಾಖ್ ಹೇಳಿದ ಪತಿ ಬಂಧನ

Date:

ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿ ತ್ರಿವಳಿ ತಲಾಖ್ ಹೇಳಿ ದೂರವಿಟ್ಟಿದ್ದ ವ್ಯಕ್ತಿಯೊಬ್ಬನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.

ದಕ್ಷಿಣ ಕನ್ನಡ ಇಲ್ಲೆಯ ಮಂಗಳೂರಿನ ದೇರಳಕಟ್ಟೆ ಅಸೈಗೊಳಿ ನಿವಾಸಿ ಅಬ್ದುಲ್ ಕರೀಂ ಬಂಧಿತ ವ್ಯಕ್ತಿ. ಆತ ತನ್ನ ಪತ್ನಿಗೆ ನಿರಂತರವಾಗಿ ವರದಕ್ಷಿಣೆ ಕಿರುಕುಳ ನೀಡುತ್ತಿದ್ದ, ಹಲ್ಲೆ ಮಾಡುತ್ತಿದ್ದ ಎಂದು ಆರೋಪಿಸಲಾಗಿದೆ.

ಇತ್ತೀಚೆಗೆ ಆತ ತನ್ನ ಪತ್ನಿಗೆ ತ್ರಿವಳಿ ತಲಾಖ್ ಹೇಳಿ ಸಂಬಂಧ ಕಳೆದುಕೊಂಡಿದ್ದ. ಇದರಿಂದ ಮನನೊಂದ ಆತನ ಪತ್ನಿ ಕರೀಂ ವಿರುದ್ಧ ಮಂಗಳೂರಿನ ಪಾಂಡೇಶ್ವರ ಮಹಿಳಾ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರು ದಾಖಲಿಸಿಕೊಂಡ ಪೊಲೀಸರು ಮಂಗಳವಾರ ರಾತ್ರಿ ಆತನನ್ನು ಬಂಧಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆರೋಪಿ ಕರೀಂನನ್ನು ಬುಧವಾರ ನ್ಯಾಯಾಲಯದಲ್ಲಿ ಹಾಜರು ಪಡಿಸಲಾಗಿದೆ. ಮೂರನೇ ಜೆಎಂಎಫ್‌ಸಿ ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಆರೋಪಿಯ ವಿರುದ್ದ ವರದಕ್ಷಿಣೆ ನಿಷೇಧ ಕಾಯ್ದೆ ಸೆಕ್ಷನ್ 3, 4, ಮತ್ತು ಐಪಿಸಿ ಸೆಕ್ಷನ್ 323, 498A, 504, 506 ಹಾಗೂ ಮುಸ್ಲಿಂ ಮಹಿಳಾ ರಕ್ಷಣಾ ಕಾಯ್ದೆ ಸೆಕ್ಷನ್ 4ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...