ದಕ್ಷಿಣ ಕನ್ನಡ | ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಅನ್ಯಾಯ; ತುರ್ತು ಟೆಂಡರ್‌ ಕರೆಯಲು ಎಡಿಸಿ ಸೂಚನೆ

Date:

ಮಂಗಳೂರಿನ ಮಂಗಳಾದೇವಿ ಜಾತ್ರಾ ಮಹೋತ್ಸವದಲ್ಲಿ ಎಲ್ಲ ಸಮುದಾಯ ವ್ಯಾಪಾರಸ್ಥರಿಗೂ ಅವಕಾಶ ನೀಡಬೇಕು. ಕೂಡಲೇ ತುರ್ತು ಟೆಂಡರ್‌ ಕರೆದು ಬಹಿರಂಗ ಹರಾಜು ಮಾಡಿ, ಮುಸ್ಲಿಂ ವ್ಯಾಪಾರಿಗಳಿಗೂ ವ್ಯಾಪಾರಕ್ಕೆ ಅವಕಾಶ ಮಾಡಿಕೊಡಬೇಕು ಎಂದು ನಗರ ಪಾಲಿಕೆ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಜಿ ಸಂತೋಷ್ ಕುಮಾರ್ ತಾಕೀತು ಮಾಡಿದ್ದಾರೆ.

ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ ನೀಡಬಾರದು ಎಂದು ಸನಾತನ ಸಂಸ್ಥೆಯ ಮುಖಂಡರೊಬ್ಬರು ದೇವಸ್ಥಾನ ಆಡಳಿತ ಮಂಡಳಿಗೆ ಮನವಿ ಮಾಡಿದ್ದರು. ಅವರ ಮನವಿಯಂತೆ ಮಂಡಳಿಯು ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ ನೀಡದೆ ವಂಚಿಸಿತ್ತು. ಇದನ್ನು ಖಂಡಿಸಿ ಜಾತ್ರೆ ವ್ಯಾಪಾರಸ್ಥರ ಸಂಘ ಮತ್ತು ಡಿವೈಎಫ್‌ಐ ಮುಖಂಡರು ಜಿಲ್ಲಾಧಿಕಾರಿಗೆ ದೂರು ನೀಡಿದ್ದರು. ಅಲ್ಲದೆ, ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಈ ಬೆನ್ನಲ್ಲೇ ಸಂಘಟನೆಗಳ ಮುಖಂಡರು, ದೇವಸ್ಥಾನ ಆಡಳಿತ ಮಂಡಳಿ ಮತ್ತು ಮಹಾನಗರ ಪಾಲಿಕೆ ಅಧಿಕಾರಿಗಳೊಂದಿಗೆ ಅಪರ ಜಿಲ್ಲಾಧಿಕಾರಿ ಸಭೆ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಭೆಯಲ್ಲಿ ತಮ್ಮ ತಪ್ಪನ್ನು ದೇವಸ್ಥಾನ ಆಡಳಿತ ಮಂಡಳಿ ಒಪ್ಪಿಕೊಂಡಿದೆ. “ಹಿಂದು ಸನಾತನ ಜಾತ್ರೆ ವ್ಯಾಪಾರಸ್ಥರ ಅರ್ಜಿ ಆಧಾರದಲ್ಲಿ ಸಂಘರ್ಷ ನಡೆಯಬಹುದು ಎಂದು ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ ನೀಡಲಾಗಿಲ್ಲ” ಎಂದು ಮಂಡಳಿಯ ಪ್ರತಿನಿಧಿಗಳು ಒಪ್ಪಿಕೊಂಡಿದ್ದಾರೆ.

ಈ ಬಗ್ಗೆ, ಮಂಡಳಿಯ ಪ್ರತಿನಿಧಿಗಳನ್ನು ತರಾಟೆಗೆ ತೆಗೆದುಕೊಂಡ ಅಪರ ಜಿಲ್ಲಾಧಿಕಾರಿ, “ಮುಸ್ಲಿಂ ವ್ಯಾಪಾರಿಗಳನ್ನು ಭಯ ಹುಟ್ಟಿಸಿ ವಾಪಸ್ ಕಳುಹಿಸಿರುವುದು ಸರಿಯಲ್ಲ. ವ್ಯಾಪಾರಿಗಳಿಗೆ ಭದ್ರತೆ ಕೊಟ್ಟು ಎಲ್ಲರನ್ನು ಒಳಗೊಳ್ಳುವಂತ ಕೆಲಸ ಮಾಡಬೇಕು. ದೇವಸ್ಥಾನದ ಜಾಗವನ್ನು ಹೊರತುಪಡಿಸಿ, ನಗರಪಾಲಿಕೆ ಜಾಗದಲ್ಲಿ ತುರ್ತು ಟೆಂಡರು ಕರೆದು ಶನಿವಾರ ಬೆಳಿಗ್ಗೆಯೇ ಬಹಿರಂಗ ಹರಾಜು ಮಾಡಬೇಕು. ಎಲ್ಲರಿಗೂ ವ್ಯಾಪಾರ ಮಾಡಲು ಅವಕಾಶವಾಗುವಂತೆ ಸೂಕ್ತ ಕ್ರಮ ಕೈಗೊಳ್ಳಬೇಕು” ಎಂದು ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಮಹಾನಗರ ಪಾಲಿಕೆ ಉಪ ಆಯುಕ್ತ (ಕಂದಾಯ) ರೇಖಾ ಶೆಟ್ಟಿ, ಸಹಾಯಕ ಪೊಲೀಸ್ ಆಯುಕ್ತ ಮಹೇಶ್ ಕುಮಾರ್, ಮಂಗಳಾದೇವಿ ದೇವಸ್ಥಾನದ ಪ್ರತಿನಿಧಿಗಳು, ಬೀದಿಬದಿ ಮತ್ತು ಜಾತ್ರೆ ವ್ಯಾಪಾರಸ್ಥರ ಸಂಘದ ಬಿ.ಕೆ ಇಮ್ತಿಯಾಝ್, ಸುನಿಲ್ ಕುಮಾರ್ ಬಜಾಲ್, ಹರೀಶ್ ಪೂಜಾರಿ, ಪ್ರವೀಣ್ ಕುಮಾರ್ ಕದ್ರಿ, ರಿಯಾಜ್, ಶಾಫಿ ಬೆಂಗ್ರೆ, ಆಸೀಫ್ ಬಾವ ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...