ದಕ್ಷಿಣ ಕನ್ನಡ | ವಾಟ್ಸ್ಯಾಪ್‌ ಮೂಲಕ ತ್ರಿವಳಿ ತಲಾಖ್‌ ನೀಡಿದ ಪತಿ; ಪತ್ನಿ ದೂರು

Date:

ವಿದೇಶದಲ್ಲಿರುವ ಪತಿ ವಾಟ್ಸಾಪ್ ಸಂದೇಶದ ಮೂಲಕ ತನ್ನ ಪತ್ನಿಗೆ ದಿಢೀರ್ ತ್ರಿವಳಿ ತಲಾಖ್ ನೀಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಜಯನಗರದಲ್ಲಿ ನಡೆದಿದೆ.

ಕೇರಳ ತ್ರಿಶ್ಯೂರ್ ಮೂಲದ ಅಬ್ದುಲ್ ರಶೀದ್ ಏಳು ವರ್ಷಗಳ ಹಿಂದೆ ಸುಳ್ಯ ಬಳಿಯ ಜಯನಗರದ ಮಿಸ್ರಿಯಾ ಎಂಬಾಕೆಯನ್ನು ವಿವಾಹವಾಗಿದ್ದರು. ಅವರಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಎರಡು ವರ್ಷಗಳ ಹಿಂದೆ ಮಿಸ್ರಿಯಾ ಅವರನ್ನು ವಿದೇಶಕ್ಕೆ ಕರೆಸಿಕೊಂಡಿದ್ದ ರಶೀದ್ ಬಳಿಕ ಎರಡನೇ ಮಗುವಿನ ಹೆರಿಗೆಗಾಗಿ ಪತ್ನಿಯ ತವರು ಮನೆ ಸುಳ್ಯದಲ್ಲಿ ಬಿಟ್ಟು ವಿದೇಶಕ್ಕೆ ಉದ್ಯೋಗಕ್ಕೆ ತೆರಳಿದ್ದರು. ಆದರೆ ಕಳೆದ ಆರು ತಿಂಗಳಿನಿಂದ ಸಂಸಾರದಲ್ಲಿ ವಿರಸ ಉಂಟಾಗಿತ್ತು.

ಈ ಸುದ್ದಿ ಓದಿದ್ದೀರಾ? ಮಹಿಳಾ ಮೀಸಲಾತಿ | ದೇವೇಗೌಡರ ಕನಸಿಗೆ ಮರುಜೀವ: ಎಚ್‌ ಡಿ ಕುಮಾರಸ್ವಾಮಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕುಟುಂಬ ಕಲಹದ ಕುರಿತು ಸಂಬಂಧಿಕರು, ಹಿರಿಯರು ಮಾತನಾಡಿ ಸಮಸ್ಯೆ ಬಗೆಹರಿಸಲು ಪ್ರಯತ್ನಿಸಿದ್ದರು. ಆದರೆ ಇದಕ್ಕೆ ಆಸ್ಪದ ನೀಡದ ರಶೀದ್, ಪತ್ನಿಯ ವಾಟ್ಸಾಪ್‌ಗೆ ತ್ರಿವಳಿ ತಲಾಖ್‌ನ ಸಂದೇಶ ಕಳುಹಿಸಿದ್ದಾನೆ. ಇದರಿಂದ ನೊಂದ ಮಿಸ್ರಿಯಾ ಸುಳ್ಯ ಪೊಲೀಸರಿಗೆ ದೂರು ನೀಡಿದ್ದು, ನ್ಯಾಯ ಕೊಡಿಸುವಂತೆ ಕೋರಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಮುಸ್ಲಿಂ ಪ್ರೊಟೆಕ್ಷನ್ ಆಫ್ ರೈಟ್ ಆಕ್ಟ್ 2019ರ ಪ್ರಕಾರ ಸುಳ್ಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಹೇಶ್ ಶೆಟ್ಟಿ ತಿಮರೋಡಿಗೆ ಮೂರನೇ ಬಾರಿ ಗಡಿಪಾರು ಆದೇಶ, ಮಧ್ಯರಾತ್ರಿ ನೋಟಿಸ್ ಜಾರಿ !

ಧರ್ಮಸ್ಥಳ ಸೌಜನ್ಯ ‌ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಮೂರನೇ...

ಕರಾವಳಿ | LPG ಅಭಾವ; ಹೋಟೆಲ್ ಉದ್ಯಮಕ್ಕೆ ಭಾರೀ ಹೊಡೆತ

ಮಧ್ಯಪ್ರಾಚ್ಯ ದೇಶಗಳಲ್ಲಿ ಉಂಟಾಗಿರುವ ಯುದ್ಧದ ಪರಿಣಾಮವಾಗಿ ಅಡುಗೆ ಅನಿಲ (LPG) ಸರಬರಾಜಿನಲ್ಲಿ...

ಧರ್ಮಸ್ಥಳ ಪೊಲೀಸ್ ಠಾಣೆಗೆ ಆಯೋಗದ ಅಧ್ಯಕ್ಷರ ಭೇಟಿ

ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಾದ ಶಶಿಧರ್ ಎಸ್.ಕೋಸಂಬೆ...

ಮಂಗಳೂರು | ಪಾಸ್ಟಿಕ್, ಪತ್ರಿಕೆಯಲ್ಲಿ ಹೋಟೆಲ್ ಬಿಸಿ ಆಹಾರ ಪಾರ್ಸೆಲ್ ನಿಷೇಧಕ್ಕೆ ಸೂಚನೆ

ಹೋಟೆಲ್, ಕ್ಯಾಂಟೀನ್, ಕೆಫೆಗಳಲ್ಲಿ ಪ್ಲಾಸ್ಟಿಕ್ ಕವರ್, ಪತ್ರಿಕೆಗಳಲ್ಲಿ ಬಿಸಿ ಆಹಾರ ಪದಾರ್ಥಗಳನ್ನು...