ದಕ್ಷಿಣ ಕನ್ನಡ | ಕೇಬಲ್ ಹಾಕಲು ಕೆಪಿಟಿಸಿಎಲ್ ಅಗೆದ ರಸ್ತೆ ದುರಸ್ತಿಗೆ ಎಂಸಿಸಿ ಸೂಚನೆ

Date:

ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ನಗರದಲ್ಲಿ ವಿದ್ಯುತ್ ಕೇಬಲ್ ಅಳವಡಿಸಲು ಅಗೆದಿರುವ ರಸ್ತೆಯನ್ನು ಕೂಡಲೇ ದುರಸ್ತಿಗೊಳಿಸುವಂತೆ ಮಂಗಳೂರು ಮಹಾನಗರ ಪಾಲಿಕೆಯು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮಕ್ಕೆ (ಕೆಪಿಟಿಸಿಎಲ್) ಪತ್ರ ಬರೆದಿದೆ.

ಕಾಮಗಾರಿ ಪೂರ್ಣಗೊಂಡ ಬಳಿಕ ರಸ್ತೆಗಳನ್ನು ಸರಿಯಾಗಿ ದುರಸ್ತಿ ಮಾಡಿಲ್ಲವೆಂದು ಕೆಪಿಟಿಸಿಎಲ್ ಕಾರ್ಯನಿರ್ವಾಹಕ ಎಂಜಿನಿಯರ್‌ಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

“ಬಿಜೈ ಸಬ್ ಸ್ಟೇಷನ್‌ನಿಂದ ನೆಹರೂ ಮೈದಾನದವರೆಗೆ ಎಚ್‌ಡಿಡಿ ತಂತ್ರಜ್ಞಾನ ಬಳಸಿ ಕಾಂಕ್ರೀಟ್ ರಸ್ತೆ ಅಗೆದು 110 ಕೆವಿ ಕೇಬಲ್ ಹಾಕುವ ಕಾಮಗಾರಿ ಕೈಗೆತ್ತಿಕೊಳ್ಳಲಾಗಿತ್ತು. ಹಾಗಾಗಿ ಕೇಬಲ್‌ಗಳನ್ನು ಹಾಕಲು ರಸ್ತೆಯನ್ನು ಅಗೆದ ನಂತರ, ಅದನ್ನು ಸರಿಯಾಗಿ ಪುನಃಸ್ಥಾಪಿಸಿಲ್ಲ. ಪರಿಣಾಮವಾಗಿ, ಪಾದಚಾರಿಗಳು ಮತ್ತು ವಾಹನಗಳ ಸಂಚಾರಕ್ಕೆ ತೊಂದರೆಯಾಗಿದೆ” ಎಂದು ಎಂಸಿಸಿ ಅಧಿಕಾರಿ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕೆಎಸ್ ರಾವ್ ರಸ್ತೆಯ ಸಿಟಿ ಸೆಂಟರ್ ಮಾಲ್ ಬಳಿ ಮತ್ತು ಟ್ರಾಫಿಕ್ ಸಿಗ್ನಲ್ ಬಳಿ ಕೇಬಲ್ ಹಾಕಲು ಅಗೆದ ಗುಂಡಿಗಳಲ್ಲಿ ದ್ವಿಚಕ್ರ ವಾಹನ ಸವಾರರು ಆಕಸ್ಮಿಕವಾಗಿ ಬಿದ್ದಿರುವ ಬಗ್ಗೆ ಮಹಾನಗರ ಪಾಲಿಕೆಗೆ ಅನೇಕ ದೂರುಗಳು ಬಂದಿವೆ. ಕಾಮಗಾರಿಗಾಗಿ ಅಗೆದ ರಸ್ತೆಯನ್ನು ಸರಿಯಾಗಿ ಮುಚ್ಚದಿರುವುದು ಕಂಡುಬಂದಿದ್ದು, ದ್ವಿಚಕ್ರ ವಾಹನವು ಹಳ್ಳಕ್ಕೆ ಬೀಳುವ ಫೋಟೋ ಕೂಡ ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿದೆ. ಈ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಅಧಿಕಾರಿಗಳ ಜವಾಬ್ದಾರಿಯ ಕೊರತೆಯ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ” ಎಂದು ಉಲ್ಲೇಖಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಚಿಕ್ಕಮಗಳೂರು | ಬಿಇಒ ಕಚೇರಿಯಲ್ಲಿ ಮ್ಯಾನೇಜರ್ ಆತ್ಮಹತ್ಯೆ 

“ಮಂಗಳೂರು ಮಹಾನಗರ ಪಾಲಿಕೆಯ ಕಾರ್ಯಪಾಲಕ ಅಭಿಯಂತರರು ಕೇಬಲ್ ಹಾಕಲು ಅಗೆದ ರಸ್ತೆಯ ದುರಸ್ತಿ ಕಾರ್ಯವನ್ನು ಕೂಡಲೇ ಕೈಗೆತ್ತಿಕೊಂಡು ಆದಷ್ಟು ಬೇಗ ಪೂರ್ಣಗೊಳಿಸಬೇಕು” ಎಂದು ಕೆಪಿಟಿಸಿಎಲ್‌ಗೆ ಸೂಚಿಸಿದ್ದಾರೆ.

“ನಗರದಲ್ಲಿ ರಸ್ತೆಗಳನ್ನು ಅಗೆಯುವಾಗ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಖಚಿತಪಡಿಸಿಕೊಳ್ಳುವ ಬಗ್ಗೆ ಗುತ್ತಿಗೆದಾರರಿಗೆ ಎಚ್ಚರಿಕೆ ನೀಡುವಂತೆ ಮಂಗಳೂರು ಮಹಾನಗರ ಪಾಲಿಕೆ ಕೆಪಿಟಿಸಿಎಲ್‌ಗೆ ತಿಳಿಸಿದ್ದು, ಗುತ್ತಿಗೆದಾರರ ನಿರ್ಲಕ್ಷ್ಯದಿಂದ ಯಾವುದೇ ಅಪಘಾತ ಸಂಭವಿಸಿದರೆ ಅವರನ್ನೇ ಹೊಣೆಗಾರರನ್ನಾಗಿ ಮಾಡಿ” ಎಂದು ಎಂಸಿಸಿ ಕೆಪಿಟಿಸಿಎಲ್‌ಗೆ ಪತ್ರ ಬರೆದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...