ದಕ್ಷಿಣ ಕನ್ನಡ | ವಿದ್ಯುತ್‌ ಖಾಸಗೀಕರಣ – ಆದಾನಿ ಜೇಬು ತುಂಬಿಸುವ ಹುನ್ನಾರ: ಸಿಐಟಿಯು

Date:

ವಿದ್ಯುತ್ ಖಾಸಗೀಕರಣಕ್ಕೆ ಮುಂದಾಗಿರುವ ಕೇಂದ್ರ ಸರ್ಕಾರದ ನಡೆ ಅಪಾಯದ ಮುನ್ಸೂಚನೆಯಾಗಿದೆ. ಇದು ಅದಾನಿ ಮತ್ತು ಟಾಟಾ ಕಂಪನಿಯ ಜೇಜು ತುಂಬಿಸುವ ವ್ಯವಸ್ಥೆಯಾಗಿದೆ ಎಂದು ಸಿಐಟಿಯು ಮುಖಂಡ ಸುನಿಲ್‌ಕುಮಾರ್ ಬಜಾಲ್ ಆರೋಪಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಂಘಟನೆಗಳ ಜಂಟಿ ವೇದಿಕೆ (ಜೆಸಿಟಿಯು), ವಿವಿಧ ರೈತ ಸಂಘಟನೆಗಳ ಒಕ್ಕೂಟ (ಎಸ್‌ಕೆಎಂ) ಹಾಗೂ ವಿದ್ಯಾರ್ಥಿ, ಯುವಜನ, ಮಹಿಳಾ, ದಲಿತ, ಆದಿವಾಸಿ ಹಾಗೂ ಜನಪರ ಸಂಘಟನೆಗಳ ವೇದಿಕೆಯಿಂದ ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ಬಿಜೈಯ ಮೆಸ್ಕಾಂ ಪ್ರಧಾನ ಕಚೇರಿ ಎದುರು ನಡೆದ ಪ್ರತಿಭಟನೆಯಲ್ಲಿ ಮಾತನಾಡಿದರು.

“ಕಳೆದ ಒಂಭತ್ತು ವರ್ಷಗಳಿಂದ ವಿದ್ಯುತ್ ಕ್ಷೇತ್ರವನ್ನು ಖಾಸಗೀಕರಣಗೊಳಿಸಲು ವ್ಯವಸ್ಥಿತ ಹುನ್ನಾರ ನಡೆಸುತ್ತಿರುವ ಕೇಂದ್ರ ಸರ್ಕಾರ 2023ರ ವಿದ್ಯುತ್ ಕಾಯ್ದೆಯ ಮೂಲಕ ಸರ್ಕಾರದ ಹಿಡಿತವನ್ನು ಸಡಿಲಗೊಳಿಸಿದೆ. ವಿದ್ಯುತ್ ಕ್ಷೇತ್ರ ಖಾಸಗೀಕರಣಗೊಂಡರೆ ಬಳಕೆದಾರರ ಮೇಲೆ ದಬ್ಬಾಳಿಕೆ, ಮಾನಸಿಕ ಹಿಂಸೆ ಉಂಟಾಗುತ್ತದೆ” ಎಂದು ಸುನಿಲ್ ಕುಮಾರ್ ಬಜಾಲ್ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“2025ರ ಏಪ್ರಿಲ್‌ನಿಂದ ಎಲ್ಲ ಬಳಕೆದಾರರು ಪ್ರೀಪೇಯ್ಡ್‌ ಸ್ಮಾರ್ಟ್ ಮೀಟರ್‌ಗಳನ್ನು ಅಳವಡಿಸಬೇಕಾಗುತ್ತದೆ. ಪ್ರತಿ ಮೀಟರ್‌ಗೆ ₹8,000ದಂತೆ ದೇಶದ 26 ಕೋಟಿ ವಿದ್ಯುತ್ ಗ್ರಾಹಕರ ಮೂಲಕ ₹2,08,0000 ಕೋಟಿ ಹಣವನ್ನು ಮೀಟರ್ ಅಳವಡಿಕೆಗಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಖಾಸಾ ದೋಸ್ತಿಗಳಾದ ಅದಾನಿ ಮತ್ತು ಟಾಟಾ ಕಂಪನಿಯ ಜೇಬು ತುಂಬಿಸುವ ಹುನ್ನಾರ ಇದಾಗಿದೆ. ಇದರಿಂದ ವಿದ್ಯುತ್ ದರ ಏರಿಕೆಯಾಗಲಿದೆ” ಎಂದು ಹೇಳಿದರು.

“ಸ್ಮಾರ್ಟ್ ಮೀಟರ್‌ಗಳನ್ನು ಅಳವಡಿಸದಂತೆ ವಿಶ್ವಸಂಸ್ಥೆ ಈಗಾಗಲೇ ಎಚ್ಚರಿಕೆ ನೀಡಿದ್ದರೂ ಅದನ್ನು ಮೀರಿ ಭಾರತದಲ್ಲಿ ಈ ವ್ಯವಸ್ಥೆಗೆ ಮುಂದಾಗುತ್ತಿರುವುದು ಅಪಾಯದ ಮುನ್ಸೂಚನೆಯಾಗಿದೆ. ಈ ಬಗ್ಗೆ ಧ್ವನಿ ಎತ್ತುವುದು ಅಗತ್ಯವಾಗಿದೆ” ಎಂದರು.

ಎಐಟಿಯುಸಿಯ ಎಚ್‌ ಪಿ ರಾವ್ ಮಾತನಾಡಿ, “ಸರ್ಕಾರಿ ಸಂಸ್ಥೆಗಳ ಖಾಸಗೀಕರಣವನ್ನು ನಾವು ವಿರೋಧಿಸುತ್ತಾ ಬಂದಿದ್ದರೂ ಕೇಂದ್ರ ಸರ್ಕಾರ ಮಾತ್ರ ಈ ಬಗ್ಗೆ ಕ್ಯಾರೇೆ ಎನ್ನುತ್ತಿಲ್ಲ. ಜನರನ್ನು ಖಾಸಗಿಯವರ ಗುಲಾಮರನ್ನಾಗಿ ಮಾಡುವ ಕಾರ್ಯದ ಬಗ್ಗೆ ನಾವು ಎಚ್ಚೆತ್ತುಕೊಳ್ಳಬೇಕು” ಎಂದು  ಹೇಳಿದರು.

ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಯೋಜನೆ ಪ್ರಸ್ತಾಪಾಸಿ ಮಾತನಾಡಿ, “ಈ ಯೋಜನೆಯಡಿ ಚೆನ್ನೈನ ಸರ್ಕಾರಿ ಸಂಸ್ಥೆಯಲ್ಲಿ ಖಾಸಗಿಯವರು ಬೋಗಿಗಳನ್ನು ತಯಾರಿಸಲು ಅವಕಾಶ ನೀಡಲಾಗುತ್ತಿದೆ. ಸರ್ಕಾರದ ಸಂಸ್ಥೆಯ ಜತೆಗೆ ವಿದ್ಯುತ್, ನೀರು ಎಲ್ಲವನ್ನೂ ಬಳಸಿ ಅಲ್ಲಿ ಬೋಗಿಗಳನ್ನು ತಯಾರಿಸಿ ಸರ್ಕಾರಕ್ಕೆ ಮಾರಾಟ ಮಾಡಿ ನಿರ್ವಹಣೆ ಮಾಡುವ ಕಾರ್ಯ ಖಾಸಗಿಯವರಿಗೆ ಒಪ್ಪಿಸಿ ಅವರಿಗೆ ಲಾಭ ಮಾಡಿಸುವ ತಂತ್ರಗಾರಿಕೆ ಇದಾಗಿದ್ದು, ಇದೀಗ ಜೀವನದ ಬಹು ಮುಖ್ಯವಾದ ವಿದ್ಯುತ್ ಕ್ಷೇತ್ರವನ್ನು ಖಾಸಗೀಕರಣಕ್ಕೆ ಕೇಂದ್ರ ಸರ್ಕಾರ ಮುಂದಾಗಿರುವುದು ಆತಂಕಕಾರಿ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಜಿಲ್ಲಾ ಉಸ್ತುವಾರಿ ಸಚಿವ ಯಾರೆಂಬುದೇ ನನಗೆ ಗೊತ್ತಿಲ್ಲ: ಶಾಸಕ ಬೇಳೂರು ಗೋಪಾಲಕೃಷ್ಣ

ದಲಿತ ಸಂಘಟನೆಯ ಮುಖಂಡ ಎಂ ದೇವದಾಸ್ ಮಾತನಾಡಿ, “ಈಸ್ಟ್ ಇಂಡಿಯಾ ಕಂಪನಿಯ ಮೂಲಕ ಬ್ರಿಟಿಷರು ಭಾರತದ ಸಂಪತ್ತನ್ನು ಕೊಳ್ಳೆ ಹೊಡೆದು ಇಂಗ್ಲೆಂಡ್‌ಗೆ ಸಾಗಿಸಿದ್ದರು. ಇದೀಗ ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಬಂದ ಬಳಿಕ ದೇಶದ ಸಂಪತ್ತನ್ನು ಅಂಬಾನಿ, ಅದಾನಿಗಳಿಗೆ ಮಾರಾಟ ಮಾಡುವ ಕಾರ್ಯ ನಡೆಯುತ್ತಿದೆ. ಹಾಗಾಗಿ ದೇಶದ ಸಂಪತ್ತನ್ನು ಉಳಿಸಲು ಈ ಖಾಸಗೀಕರಣದ ಹೋರಾಟ ಅನಿವಾರ್ಯ” ಎಂದರು.

ಪ್ರತಿಭಟನೆಯಲ್ಲಿ ವಿವಿಧ ಸಂಘಟನೆಗಳ ಪ್ರಮುಖರುಗಳಾದ ಸೀತಾರಾಂ ಬೇರಿಂಜ, ವಿ ಕುಕ್ಯಾನ್, ಶೇಖರ್, ನಾಗೇಶ್ ಕೋಟ್ಯಾನ್, ಭಾರತಿ ಬೋಳಾರ್, ಸುಹಾನ್ ಆಳ್ವ, ಮಂಜಪ್ಪ ಪುತ್ರನ್, ಪ್ರಮೀಳಾ ದೇವಾಡಿಗ, ಅಶುಂತ ಡಿಸೋಜಾ ಸೇರಿದಂತೆ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...