ದಕ್ಷಿಣ ಕನ್ನಡ | ಖಾಸಗಿ ಕ್ಲಿನಿಕ್, ಆಸ್ಪತ್ರೆಗಳ ನೋಂದಣಿ ಕಡ್ಡಾಯ; ‘ಅನರ್ಹರು ಲೈಂಗಿಕ ಸಮಸ್ಯೆಗಳಿಗೆ ಪರಿಹಾರ ನೀಡುವಂತಿಲ್ಲ’  

Date:

ವೈದ್ಯಕೀಯ ವ್ಯವಸ್ಥೆಗೆ ಸಂಬಂಧಿಸಿದ ಯಾವುದೇ ಸೇವೆಗಳನ್ನು ನೀಡುವ ವ್ಯಕ್ತಿ ಮತ್ತು ಸಂಸ್ಥೆಗಳು ಆರೋಗ್ಯ ಇಲಾಖೆಯಲ್ಲಿ ನೋಂದಣಿ ಮಾಡಿಕೊಳ್ಳುವುದು ಕಡ್ಡಾಯವಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ದೀಪಾ ಪ್ರಭು ತಿಳಿಸಿದ್ದಾರೆ.
ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆಯ ಕಚೇರಿಯಲ್ಲಿ ನಡೆದ ಜಿಲ್ಲಾ ಸಲಹಾ ಸಮಿತಿ ಸಭೆಯಲ್ಲಿ ಮಾತನಾಡಿದರು.
“ಡೆಂಟಲ್, ಆಯುಷ್, ಹೋಮಿಯೋಪತಿ, ಫಿಸಿಯೋಥೆರಿಪಿ, ನ್ಯಾಚುರೋಪತಿ ಸೇರಿದಂತೆ ವ್ಯೆದ್ಯಕೀಯ ಸೇವೆ ನೀಡುವ ಪ್ರತಿಯೊಂದು ಕ್ಲಿನಿಕ್, ಆಸ್ಪತ್ರೆ ಮತ್ತು ವ್ಯಕ್ತಿಗಳು, ಪ್ರಯೋಗಾಲಯ, ಪರೀಕ್ಷಾ ಕೇಂದ್ರಗಳು, ಅಲ್ಟ್ರಾಸೌಂಡ್ ಸಂಸ್ಥೆಗಳು ಕಡ್ಡಾಯವಾಗಿ ಕರ್ನಾಟಕ ಖಾಸಗಿ ವೈದ್ಯಕೀಯ ಸ್ಥಾಪನೆ ಕಾಯ್ದೆ(ಕೆಪಿಎಂಇಎ) ಅಡಿ ನೋಂದಣಿಗೊಳ್ಳಬೇಕಿದೆ. ನೋಂದಣಿ ಆಗದೆ ಕಾರ್ಯ ನಡೆಸುತ್ತಿರುವ ಕ್ಲಿನಿಕ್, ಆಸ್ಪತ್ರೆ ಸಂಸ್ಥೆಗಳನ್ನು ಮುಚ್ಚಲು ಕ್ರಮ ಕೈಗೊಳ್ಳಲಾಗುವುದು” ಎಂದು ಎಚ್ಚರಿಕೆ ನೀಡಿದರು.
ಲೈಂಗಿಕ ಸಮಸ್ಯೆ ಪರಿಹಾರ ಕೇಂದ್ರ: ಲೈಂಗಿಕ ಸಮಸ್ಯೆಗಳಿಗೆ ಪರಿಹಾರ ನೀಡುವ ಹೆಸರಿನಲ್ಲಿ ಅನಧಿಕೃತವಾಗಿ ಕಾರ್ಯಾಚರಿಸುವ ಕೇಂದ್ರಗಳನ್ನು ಮುಚ್ಚಿಸಲು ಕಾರ್ಯಾಚರಣೆ ನಡೆಸಲಾಗುವುದು. ಲೈಂಗಿಕ ಸಮಸ್ಯೆಗಳ ಚಿಕಿತ್ಸೆ, ಆರೋಗ್ಯ ವ್ಯವಸ್ಥೆಯಡಿ ಬರುತ್ತದೆ. ಲೈಂಗಿಕ ಸಮಸ್ಯೆಗಳನ್ನು ಪರಿಹರಿಸುವ ಅಥವಾ ಚಿಕಿತ್ಸೆ ನೀಡುವ ಕೇಂದ್ರಗಳು ಆರೋಗ್ಯ ಇಲಾಖೆಯಲ್ಲಿ ಕಡ್ಡಾಯವಾಗಿ ನೋಂದಣಿಗೊಳ್ಳಬೇಕಿದ್ದು, ಚಿಕಿತ್ಸೆ ನೀಡುವ ವ್ಯಕ್ತಿಗಳು ಸೂಕ್ತ ಅರ್ಹತೆ ಪಡೆದಿರಬೇಕಿದೆ. ಯಾವುದೇ ಅರ್ಹತೆ ಇಲ್ಲದೆ ಅನಧಿಕೃತ ವ್ಯಕ್ತಿಗಳು ಲೈಂಗಿಕ ಸಮಸ್ಯಗಳಿಗೆ ಪರಿಹಾರ ಅಥವಾ ಚಿಕಿತ್ಸೆ ಕೊಡಲು ಅವಕಾಶವಿಲ್ಲ” ಎಂದು ತಿಳಿಸಿದರು.
ಜನನ ಪೂರ್ವ ಲಿಂಗ ನಿರ್ಣಯ: “ಜಿಲ್ಲೆಯಲ್ಲಿರುವ ಎಲ್ಲ ಸ್ಕ್ಯಾನಿಂಗ್ ಕೇಂದ್ರಗಳು ಕಡ್ಡಾಯವಾಗಿ ಆರೋಗ್ಯ ಇಲಾಖೆಯಿಂದ ಲೈಸನ್ಸ್ ಪಡೆದಿರಬೇಕು. ಸ್ಕ್ಯಾನಿಂಗ್ ಕೇಂದ್ರಗಳು ಹೊಸ ಯಂತ್ರ ಖರೀದಿಸಲು ಮತ್ತು ಹಳೆ ಯಂತ್ರ ಬದಲಾಯಿಸಲು ಇಲಾಖೆಯ ಅನುಮತಿ ಪಡೆಯಬೇಕು” ಎಂದು ಡಾ.ದೀಪಾ ಪ್ರಭು ತಿಳಿಸಿದರು.
“ಜನನ ಪೂರ್ವ ಲಿಂಗಪತ್ತಗೆ ಯಾವುದೇ ಕಾರಣಕ್ಕೂ ಅವಕಾಶವಿಲ್ಲ. ಯಾವುದೇ ಸ್ಕ್ಯಾನಿಂಗ್ ಕೇಂದ್ರಗಳು  ಭ್ರೂಣಲಿಂಗ ಪತ್ತೆ ನಡೆಸಿದರೆ ಅಂತಹ ಕೇಂದ್ರಗಳನ್ನು ಮುಚ್ಚಿಸಲು ಕ್ರಮ ಕೈಗೂಳ್ಳಲಾಗುವುದು” ಎಂದು ತಿಳಿಸಿದರು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಸ್ತುತ ಲಿಂಗಾನುಪಾತ 1000 ಪುರುಷರಿಗೆ 963 ಮಹಿಳೆಯರು ಇದ್ದಾರೆ. ಭ್ರೂಣಲಿಂಗ ಪತ್ತೆ ತಡೆಯಲು ಜಾಗೃತಿ ಮೂಡಿಸಲು ವಿದ್ಯಾರ್ಥಿಗಳಿಗೆ ಪ್ರಬಂಧ ಹಾಗೂ ಭಿತ್ತಿಪತ್ರ ರಚಿಸುವ ಸ್ಪರ್ಧೆ ನಡೆಸಲು ಸಭೆಯಲ್ಲಿ ನಿರ್ಣಯಿಸಲಾಯಿತು.
ಜಿಲ್ಲಾ ಸಮಿತಿ ಅಧ್ಯಕ್ಷೆ ಡಾ. ವತ್ಸಲಾ ಕಾಮತ್ ಅಧ್ಯಕ್ಷತೆ ವಹಿಸಿದ್ದರು, ಲೇಡಿಗೋಷನ್ ಆಸ್ಪತ್ರೆಯ ಅಧೀಕ್ಷಕ ಡಾ.ದುರ್ಗಾಪ್ರಸಾದ್, ಸದಸ್ಯರುಗಳಾದ ಡಾ. ಅನಂತರಾಜ ಭಟ್, ಡಾ.ರವಿಚಂದ್ರ, ಡಾ.ಚಿದಾನಂದ, ಡಾ.ಶೆಲ್ಲಿ ಥಾಮಸ್, ಡಾ. ರೀಟಾ ನೊರೋನ್ಹಾ, ಜಿಲ್ಲಾ ವಾರ್ತಾಧಿಕಾರಿ ಖಾದರ್ ಶಾ, ಗುಲ್ಜಾರ್ ಮತ್ತಿತ್ತರರು ಸಭೆಯಲ್ಲಿ ಇದ್ದರು.
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...