ದಕ್ಷಿಣ ಕನ್ನಡ | ಸುರತ್ಕಲ್‌ ಟೋಲ್‌ ಮುಕ್ತ ಹಾಗೂ ಹೆದ್ದಾರಿಯ ಹಲವು ಸಮಸ್ಯೆ ಪರಿಹಾರಕ್ಕೆ ಆಗ್ರಹ; ಡಿ.1ರಂದು ಸಭೆ

Date:

ಒಂದು ವರ್ಷದಿಂದ ಪಾಳು ಬಿದ್ದಿದ್ದು, ಮತ್ತೆ ಸುಂಕ ಸಂಗ್ರಹ ಆರಂಭದ ಕುರಿತು ಜನಸಾಮಾನ್ಯರಲ್ಲಿ ವದಂತಿ ಆತಂಕಕ್ಕೆ ಕಾರಣವಾಗಿದ್ದ ಸುರತ್ಕಲ್ ನಿರುಪಯುಕ್ತ ಟೋಲ್ ಗೇಟ್‌ನ ಕೆಲವು ಟೋಲ್ ಸಂಗ್ರಹ ಬೂತ್‌ಗಳನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಗುರುವಾರದಂದು ತೆರವುಗೊಳಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್‌ ಟೋಲ್‌ ಸಂಗ್ರಹ ಕಳೆದ ಡಿಸೆಂಬರ್‌ 1ರಂದು ರದ್ದುಗೊಂಡಿದ್ದು, ಹೋರಾಟದ ಗೆಲುವು ಸಾಧಿಸಿದ ದಿನವಾಗಿದೆ. ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಗೆಲುವಿನ ಸಂಭ್ರಮಾಚರಣೆ ಹಾಗೂ ಅದೇ ಸಂದರ್ಭ ನಿರುಪಯುಕ್ತ ಟೋಲ್ ಗೇಟ್ ರಚನೆ ತೆರವು, ನಂತೂರು, ಸುರತ್ಕಲ್ ಹೆದ್ದಾರಿಯನ್ನು ಟೋಲ್ ಮುಕ್ತ ರಸ್ತೆಯನ್ನಾಗಿಸುವುದೂ ಸೇರಿದಂತೆ ಹೆದ್ದಾರಿಯ ಹಲವು ಸಮಸ್ಯೆಗಳ ಪರಿಹಾರಕ್ಕಾಗಿ ಆಗ್ರಹಿಸಿ ಸಭೆ ಆಯೋಜಿಸಿದೆ.

ಟೋಲ್‌ ತೆರವು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆಗ್ರಹ ಸಭೆಗೆ ದೊಡ್ಡ ಜನ ಬೆಂಬಲ ದೊರಕಿದ್ದು, ಹೋರಾಟ ಸಮಿತಿಯೂ ಕಾರ್ಯಕ್ರಮದ ಯಶಸ್ಸಿಗೆ ವ್ಯಾಪಕ ಸಿದ್ದತೆ ನಡೆಸುತ್ತಿದೆ.

ಈ ಸುದ್ದಿ ಓದಿದ್ದೀರಾ? ತುಮಕೂರು | ಹಣ ಮಂಜೂರಾತಿಗೆ ಅಧಿಕಾರಿಗಳಿಂದ ಲಂಚ; ಗ್ರಾ.ಪಂ ಕಚೇರಿಯಲ್ಲಿ ದನ ಕಟ್ಟಿ ಪ್ರತಿಭಟನೆ

ಈಗ, ಸಂಭ್ರಮಾಚರಣೆಯ ಮುನ್ನಾ ದಿನ ನಿರುಪಯುಕ್ತ ಟೋಲ್ ಗೇಟ್‌ನಲ್ಲಿ ಪಾಳು ಬಿದ್ದಿದ್ದ ಬೂತ್‌ಗಳನ್ನು ತೆರವುಗೊಳಿಸಿರುವುದು ಕುತೂಹಲಕ್ಕೆ ಕಾರಣವಾಗಿದೆ. ಮತ್ತೆ ಹೋರಾಟ ಭುಗಿಲೇಳುವ ಸಾಧ್ಯತೆಗಳ ಹಿನ್ನಲೆಯಲ್ಲಿ ಈ ಅಲ್ಪ ಪ್ರಮಾಣದ ತೆರವು ಪ್ತಕ್ರಿಯೆ ನಡೆದಿದೆ ಎಂಬುದು ಸಾರ್ವಜನಿಕರ ಚರ್ಚೆಗೆ ಕಾರಣವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...