ದಕ್ಷಿಣ ಕನ್ನಡ | ಉದ್ಯಮಿ ರಾಮದಾಸ್ ಕಾಮತ್ ಸಾವಿನ ಸುತ್ತ ಶಂಕೆ; ಎಸ್‌ಐಟಿ ತನಿಖೆಗೆ ಉದ್ಯಮಿ ಬಿಆರ್‌ ಶೆಟ್ಟಿ ಆಗ್ರಹ

Date:

ದುಬೈನಲ್ಲಿ ಉದ್ಯಮ ನಡೆಸುತ್ತಿದ್ದ, ಮಂಗಳೂರಿನಲ್ಲಿಯೂ ಹಲವು ವ್ಯವಹಾರಗಳಲ್ಲಿ ಹೂಡಿಕೆ ಮಾಡಿದ್ದ ಉದ್ಯಮಿ ಮುಂಡ್ಕೂರು ರಾಮದಾಸ್ ಕಾಮತ್ ಸಾವಿನ ಬಗ್ಗೆ ಅವರ ಸ್ನೇಹಿತ, ಎನ್‌ಆರ್‌ಐ ಉದ್ಯಮಿ ಡಾ. ಬಿ.ಆರ್‌ ಶೆಟ್ಟಿ ಶಂಕೆ ವ್ಯಕ್ತಪಡಿಸಿದ್ದಾರೆ. ಕಾಮತ್ ಅವರ ಸಾವು ಆತ್ಮಹತ್ಯೆಯಲ್ಲ ಯಾರೋ ಕೊಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಕಾಮತ್ ಸಾವು ಪ್ರಕರಣವನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿ ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ.

ಕಾಮತ್ ಸಾವಿನ ಪ್ರಕರಣವನ್ನು ಎಸ್‌ಐಟಿ ತನಿಖೆ ನಡೆಸುವಂತೆ ಆಗ್ರಹಿಸಿ ಬಿ.ಆರ್‌ ಶೆಟ್ಟಿ ಅವರು ಮಂಗಳೂರು ಪೊಲೀಸ್ ಕಮಿಷನರ್, ರಾಜ್ಯ ಪೊಲೀಸ್ ಮಹಾನಿರ್ದೇಶಕರು, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಗೃಹ ಸಚಿವ ಪರಮೇಶ್ವರ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಪತ್ತ ಬರೆದಿದ್ದಾರೆ.

“ದುಬೈನಲ್ಲಿ ಹಲವು ವ್ಯವಹಾರಗಳನ್ನು ನಡೆಸುತ್ತಿದ್ದ ರಾಮದಾಸ್ ಕಾಮತ್ ಅವರು ಮಂಗಳೂರಿನಲ್ಲಿಯೂ ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ಕಾಮತ್ ಕೋಟ್ಯಂತರ ರೂಪಾಯಿ ಹೂಡಿಕೆ ಮಾಡಿದ್ದರು. ಕಾಮತ್ ಮತ್ತು ನಾನು 50 ವರ್ಷಗಳಿಂದ ಸ್ನೇಹಿತರು. ಅವರನ್ನು ನಾನು ಹತ್ತಿರದಿಂದ ಬಲ್ಲೆ. ಅವರು ಆತ್ಮಹತ್ಯೆ ಮಾಡಿಕೊಳ್ಳವ ಮನಸ್ಥಿತಿಯವರಲ್ಲ. ಅವರ ಸಾವಿನ ಹಿಂದೆ ಮೋರನೇ ವ್ಯಕ್ತಿಯ ಕೈವಾಡವಿದೆ. ಪ್ರಕರಣವನ್ನು ಎಸ್‌ಐಟಿ ತನಿಖೆ ನಡೆಸಬೇಕು” ಎಂದು ಬಿ.ಆರ್‌ ಶೆಟ್ಟಿ ಒತ್ತಾಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮಲ್ಟಿ ಮಿಲಿಯನೇರ್ ಆಗಿರುವ ಕಾಮತ್ ಅವರು ಹಲವಾರು ವ್ಯವಹಾರಗಳಲ್ಲಿ ಹೂಡಿಕೆ ಮಾಡಿದ್ದಾರೆ. ಇದರ ಜೊತೆಗೆ ದೇವಸ್ಥಾನ, ಮಠಗಳಿಗೆ ಕೋಟ್ಯಂತರ ರೂಪಾಯಿ ದಾನ ಮಾಡಿದ್ದಾರೆ. ಅಂತಹವರ ಸಾವಿನ ಬಗ್ಗೆ ನನಗೆ ಪತ್ರಿಕೆಗಳಲ್ಲಿ ಶ್ರದ್ಧಾಂಜಲಿ ಜಾಹೀರಾತು ನೋಡಿ ತಿಳಿಯಿತು. ಇದು ನಿಜಕ್ಕೂ ಆಘಾತಕಾರಿ. ಒಬ್ಬ ಉದ್ಯಮಿಯ ಸಾವು ನಿಗೂಢವಾಗಿ ಮರೆಯಾಗಿದೆ ಅಂದರೆ, ಅದು ಆತ್ಮಹತ್ಯೆ ಆಗಿರಲು ಸಾಧ್ಯವಿಲ್ಲ” ಎಂದು ಬಿ.ಆರ್‌ ಶೆಟ್ಟಿ ಹೇಳಿದ್ದಾರೆ.

“ಕಾಮತ್  ಅವರು ತಮ್ಮ ಜೀವನದಲ್ಲಿ ಉತ್ತಮ ಶಿಸ್ತು ಮತ್ತು ದೃಢ ಮನಸ್ಸು ಉಳ್ಳವರಾಗಿದ್ದರು. ಕಾಮತ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಅನ್ನುವುದನ್ನು ನಂಬಲಾಗದು. ಸಾವಿನ ಬಗ್ಗೆ ಸಾರ್ವಜನಿಕ ವಲಯದಲ್ಲಿ ಹಲವು ರೀತಿಯ ಮಾತುಗಳು ಕೇಳಿಬರುತ್ತಿವೆ. ಸರಿಯಾದ ತನಿಖೆ ನಡೆದರೆ ಸತ್ಯಾಂಶ ಹೊರಗೆ ಬರುತ್ತದೆ” ಎಂದು ಅವರು ಹೇಳಿದ್ದಾರೆ.

“ಈಗಿನ ಕಾಲದಲ್ಲಿ ಸಿಸಿಟಿವಿ, ಮೊಬೈಲ್ ಕರೆ ಮಾಹಿತಿ, ಹಲವು ಮಾದರಿಯ ಸಾಕ್ಷ್ಯಗಳು ಸಿಗುತ್ತವೆ. ಪೊಲೀಸರು ತನಿಖೆ ನಡೆಸಿದರೆ, ಪ್ರಕರಣದ ಹಿಂದೆ ಯಾರಿದ್ದಾರೆ ಅನ್ನುವುದನ್ನು ಪತ್ತೆ ಹಚ್ಚುವುದು ಕಷ್ಟವೇನಲ್ಲ. ಯಾರಾದ್ರೂ ಅವರಿಗೆ ಮಾನಸಿಕ ಒತ್ತಡ ಕೊಟ್ಟು ಸಾಯಲು ಪ್ರೇರಣೆ ನೀಡಿದ್ದಾರೆಯೇ, ಕೊಲೆ ಮಾಡಿದ್ದಾರೆಯೇ ಎಂಬುದನ್ನು ಪತ್ತೆ ಮಾಡಬೇಕು” ಎಂದು ಅವರು ಆಗ್ರಹಿಸಿದ್ದಾರೆ.

“ಕೊನೆಯ ಮೂರು ತಿಂಗಳಲ್ಲಿ ರಾಮದಾಸ್ ಕಾಮತ್ ಜೊತೆಗೆ ಸಂಪರ್ಕ ಹೊಂದಿದ್ದವರನ್ನು ತನಿಖೆ ಮಾಡಬೇಕು. ಸಿಸಿಟಿವಿ ಮಾಹಿತಿಗಳು ಪೊಲೀಸರಿಗೆ ಸತ್ಯಾಂಶ ಹೊರ ತೆಗೆಯಲು ಪ್ರಬಲ ಸಾಕ್ಷ್ಯವಾಗಲಿದೆ. ಈಗಾಗಲೇ ಸಾವಾಗಿ 12 ದಿನಗಳು ಕಳೆದಿವೆ. ಆದರೂ, ಪೊಲೀಸರ ತನಿಖೆಯಲ್ಲಿ ಯಾವುದೇ ಪ್ರಗತಿ ಕಂಡಿಲ್ಲ. ಪ್ರಕರಣದ ಗಂಭೀರತೆ ಪರಿಗಣಿಸಿ ನಿಗದಿತ ಸೆಕ್ಷನ್ ಪ್ರಕಾರ  ಪ್ರಕರಣ ದಾಖಲಿಸಬೇಕು. ಕಾನೂನು ರೀತಿಯಲ್ಲಿ ತನಿಖೆ ನಡೆಸಬೇಕು” ಎಂದು ಬಿ.ಆರ್‌ ಶೆಟ್ಟಿ ಆಗ್ರಹಿಸಿದ್ದಾರೆ.

ಪ್ರಕರಣ ಸಂಬಂಧ ಈದಿನ.ಕಾಮ್‌ ಜೊತೆ ಮಾತನಾಡಿದ ಪತ್ರಕರ್ತ ತಾರಾನಾಥ್ ಕಾಪಿಕಾಡ್, “ಕಾಮತ್ ಅವರು ಗೌಡ ಸಾರಸ್ವತ ಬ್ರಾಹ್ಮಿಣ್ ಸಮುದಾಯಕ್ಕೆ ಸೇರಿದವರು. ಅದೇ ಸಮುದಾಯದ ಶಾಸಕ ವೇದ ವೇದವ್ಯಾಸ ಕಾಮತ್ ಅವರು ಪ್ರಕರಣದ ಬಗ್ಗೆ ಯಾವುದೇ ಮಾತನ್ನಾಡಿಲ್ಲವೆಂದು ಬಿ.ಆರ್‌ ಶೆಟ್ಟಿ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೆಲವರು ರಾಮದಾಸ ಕಾಮತ್ ಅವರನ್ನು ಬ್ಲಾಕ್‌ಮೇಲ್‌ ಮಾಡಿರಬಹುದು. ಆ ಕಾರಣದಿಂದಾಗಿ ರಾಮದಾದ್ ಕಾಮತ್ ಅವರ ಸಾವಾಗಿರಬಹುದೆಂದು ಬಿ.ಆರ್‌ ಶೆಟ್ಟಿ ಶಂಕಿಸಿದ್ದಾರೆ. ಪ್ರಕರಣದಲ್ಲಿ ಸರಿಯಾದ ತನಿಖೆ ನಡೆಯದಿದ್ದಾರೆ, ನ್ಯಾಯಾಲಯದ ಮೆಟ್ಟಿಲೇರುವುದಾಗಿ ಅವರು ಹೇಳಿದ್ದಾರೆ” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ?: 1000 ಮದ್ಯದಂಗಡಿಗಳನ್ನು ನಾವು ತೆರೆಯುವುದಿಲ್ಲ: ಸಿಎಂ ಸಿದ್ದರಾಮಯ್ಯ

ರಾಮದಾಸ್ ಕಾಮತ್ ಅವರ ಮೃತದೇಹವು ಸೆ.17ರಂದು ಮಂಗಳೂರಿನ ರಥಬೀದಿಯ ಅಪಾರ್ಟ್ಮೆಂಟ್ ಒಂದರಲ್ಲಿ ಪತ್ತೆಯಾಗಿದೆ. ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಆದರೆ, ಅವರ ಸಾವಿಗೆ ಯಾವುದೇ ರೀತಿಯ ಕಾರಣಗಳು ತಿಳಿದುಬಂದಿಲ್ಲ. ಪ್ರಕರಣ ನಡೆದು 15 ದಿನ ಕಳೆದರೂ ಯಾವುದೇ ಮಾಹಿತಿ ಹೊರಬಂದಿಲ್ಲ. ಪ್ರಕರಣವನ್ನು ಪೊಲೀಸರು ಮತ್ತು ಕೆಲವು ಸ್ಥಾಪಿತ ಹಿತಾಸಕ್ತಿಗಳು ಸೇರಿ ಮುಚ್ಚಿ ಹಾಕಲು ಯತ್ನಿಸುತ್ತಿವೆ ಎಂಬ ಆರೋಪಗಳು ಕೇಳಿಬಂದಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...