ದಕ್ಷಿಣ ಕನ್ನಡ | ತಾಕತ್ತಿದ್ರೆ ನನ್ನನ್ನು ಗಡಿಪಾರು ಮಾಡಿ: ವಜ್ರದೇಹಿ ಸ್ವಾಮೀಜಿ

Date:

ದಕ್ಷಿಣ ಕನ್ನಡ ಜಿಲ್ಲಾಡಳಿತಕ್ಕೆ ತಾಕತ್ತಿದ್ರೆ ನನ್ನನ್ನು ಗಡಿಪಾರು ಮಾಡಲಿ. ಜಮೀರ್ ಅಹ್ಮದ್ ಖಾನ್‌ ಅವರನ್ನು ಗಡಿಪಾರು ಮಾಡಲಿ. ಜಮೀರ್ ಅವರನ್ನು ಪಾಕಿಸ್ತಾನಕ್ಕೆ ಗಡಿಪಾರು ಮಾಡಬೇಕು. ಆ ತಾಕತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಇದ್ಯಾ ಎಂದು ವಜ್ರದೇಹಿ ರಾಜಶೇಖರಾನಂದ ಸ್ವಾಮೀಜಿ ಹೇಳಿದ್ದಾರೆ.

ಜಿಲ್ಲೆಯ ಸುಳ್ಯದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು ಮಂಗಳೂರಿನ ಬಜರಂಗದಳದ ಕೆಲವು ಕಾರ್ಯಕರ್ತರನ್ನು ಗಡಿಪಾರು ಮಾಡಿರುವ ಜಿಲ್ಲಾಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಾಕತ್ತಿನ ಸವಾಲು ಹಾಕಿದ್ದಾರೆ.

“ಗೋವುಗಳ ರಕ್ಷಣೆ ಮಾಡಿದ್ದಕ್ಕಾಗಿ ಹಿಂದುತ್ವವಾದಿ ಕಾರ್ಯಕರ್ತರ ವಿರುದ್ಧ 10-20 ಪ್ರಕರಣ ದಾಖಲಾಗಿವೆ. ಸರ್ಕಾರಕ್ಕೆ ನಮ್ಮ ಮಕ್ಕಳನ್ನು ಕಂಡರೆ ಭಯ. ಹಾಗಾಗಿ, ಹಿಂದು ಕಾರ್ಯಕರ್ತ ಲತೇಶ್ ನನ್ನು ಗಡಿಪಾರು ಮಾಡಿದ್ದಾರೆ. ಜಿಲ್ಲಾಡಳಿತಕ್ಕೆ ತಾಕತ್ತಿದ್ರೆ ನನ್ನನ್ನ ಗಡಿಪಾರು ಮಾಡಲಿ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೋಮು ಗಲಭೆ, ಅನೈತಿಕ ಪೊಲೀಸ್ ಗಿರಿ ಸೇರಿದಂತೆ ಹಲವು ಪ್ರಕರಣಗಳಲ್ಲಿ ಆರೋಪಿಯಾಗಿರುವ ಬಜರಂಗದಳದ ಹಲವು ಕಾರ್ಯಕರ್ತರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡಿಪಾರು ಮಾಡಲು ಜಿಲ್ಲಾಡಳಿತ ನಿರ್ಧರಿಸಿದೆ. ಆ ಸಂಬಂಧ ಬಜರಂಗದಳದ ಕಾರ್ಯಕರ್ತ ಲತೇಶ್ ಗುಂಡ್ಯ, ಪ್ರಜ್ವಲ್, ನಿಶಾಂತ್, ಪ್ರದೀಪ್ ಮತ್ತು ದಿನೇಶ್‌ಗೆ ನೋಟಿಸ್ ಜಾರಿ ಮಾಡಿದೆ.

“ಸಾಮಾಜಿಕ ಅಶಾಂತಿ ಕಾರಣರಾಗಿರುವ ನಿಮ್ಮನ್ನ ಯಾಕೆ ಗಡಿಪಾರು ಮಾಡಬಾರದು. ಈ ಬಗ್ಗೆ ಕಾರಣ ನೀಡಬೇಕು ಮತ್ತು ನವೆಂಬರ್ 22ರಂದು ಪುತ್ತೂರು ಸಹಾಯಕ ಆಯುಕ್ತರ ಎದುರು ಹಾಜರಾಗಬೇಕು” ಎಂದು ನೋಟಿಸ್‌ನಲ್ಲಿ ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...