ದಕ್ಷಿಣ ಕನ್ನಡ | ಮಹಾನಗರ ಪಾಲಿಕೆಯ ಈಜು ಕೊಳದಲ್ಲಿ ಮುಳುಗಿ ಯುವಕ ಸಾವು

Date:

ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ನಗರದ ಲೇಡಿಹಿಲ್ ಬಳಿ ಇರುವ ಮಂಗಳೂರು ನಗರ ಪಾಲಿಕೆಯ ಈಜು ಕೊಳದಲ್ಲಿ ಈಜುಗಾರಿಕೆ ವೇಳೆ ಹರಿಯಾಣ ಮೂಲದ ಅಭಿಷೇಕ್ ಎಂಬ ಯುವಕನೊಬ್ಬ ಮೃತಪಟ್ಟಿರುವ ದುರ್ಘಟನೆ ನಡೆದಿದೆ.

ನಗರ ಪಾಲಿಕೆಯ ಈ ಈಜುಕೊಳದಲ್ಲಿ ಮಂಗಳವಾರ ಸಂಜೆ ವೇಳೆ ಸಾರ್ವಜನಿಕರಿಗೆ ಈಜಲು ಅವಕಾಶ ಇರುವ ಟಿಕೆಟ್ ಪಡೆದುಕೊಂಡು ಅಭಿಷೇಕ್ ಆನಂದ್ (30) ಈಜುಕೊಳಕ್ಕೆ ಬಂದಿದ್ದರು. ನೀರಿಗಿಳಿದ ಅಭಿಷೇಕ್ ತುಂಬಾ ಹೊತ್ತಿನ ತನಕ ಮೇಲಕ್ಕೆ ಬಾರದಿರುವುದನ್ನು ಈಜುಗಾರರು ಗಮನಿಸಿ ಜೀವರಕ್ಷಕರಿಗೆ ಮಾಹಿತಿ ನೀಡಿದ್ದರು. ಜೀವ ರಕ್ಷಕರು ನೀರಿಗಿಳಿದು 15 ಅಡಿ ಆಳದಲ್ಲಿ ಕುಸಿದು ಬಿದ್ದಿದ್ದ ಅಭಿಷೇಕ್‌ನನ್ನು ಮೇಲೆತ್ತಿ ಪ್ರಾಥಮಿಕ ಚಿಕಿತ್ಸೆ ನೀಡಿ ವೆನ್ಲಾಕ್ ಸರ್ಕಾರಿ ಆಸ್ಪತ್ರೆ ಕೊಂಡೊಯ್ದರು. ಆಸ್ಪತ್ರೆಗೆ ತರುವಷ್ಟರಲ್ಲಿಯೇ ಯುವಕ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೀದರ್‌ | ಕಾರಂಜಾ ಸಂತ್ರಸ್ತರ ಹೋರಾಟ : ಪರಿಣಿತರ ಉನ್ನತ ಮಟ್ಟದ ಸಭೆ ನಡೆಸಿ ನಿರ್ಣಯ : ಡಿ.ಕೆ.ಶಿವಕುಮಾರ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೃತ ಯುವಕ ಹರಿಯಾಣ ರಾಜ್ಯದ ಗುರ್ಗಾಂವ್ ಮೂಲದವನಾಗಿದ್ದಾನೆ. ಯುವಕ ಮಂಗಳೂರಿನಲ್ಲಿ ಏನು ಮಾಡುತ್ತಿದ್ದ, ಯಾರ ಜೊತೆಗೆ ಈಜು ಕೊಳಕ್ಕೆ ಬಂದಿದ್ದ ಎನ್ನುವ ಮಾಹಿತಿ ಪೊಲೀಸರಿಗೆ ಲಭ್ಯವಾಗಿಲ್ಲ. ಇದೇ ಮೊದಲ ಬಾರಿಗೆ ಈ ಯುವಕ ಇಲ್ಲಿನ ಈಜುಕೊಳಕ್ಕೆ ಬಂದಿರಬೇಕು. ಈತ ಈ ಮೊದಲು ಇಲ್ಲಿ ಬಂದಿರುವುದನ್ನು ಗಮನಿಸಿಲ್ಲವೆಂದು ಈಜುಕೊಳದ ಸಿಬ್ಬಂದಿಗಳು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...