ದಕ್ಷಿಣ ಕನ್ನಡ | ಶವಾಗಾರದಲ್ಲಿ ಮೃತದೇಹ ಕೊಳೆತ ಪ್ರಕರಣ; 5 ಲಕ್ಷ ರೂ. ಪರಿಹಾರಕ್ಕೆ ಆದೇಶ

Date:

ಮಂಗಳೂರಿನ ಖಾಸಗಿ ಆಸ್ಪತ್ರೆಯ ಶವಾಗಾರದಲ್ಲಿ ಸಿಬ್ಬಂದಿಗಳ ನಿರ್ಲಕ್ಷ್ಯದಿಂದ ಮೃತದೇಹವೊಂದು ಕೊಳೆತುಹೋಗಿತ್ತು. ಪ್ರಕರಣದಲ್ಲಿ ಮೃತರ ಸಂಬಂಧಕರಿಗೆ 5 ಲಕ್ಷ ರೂ. ಪರಿಹಾರ ನೀಡುವಂತೆ ಆಸ್ಪತ್ರೆಗೆ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಆದೇಶಿಸಿದೆ.

2019ರ ಅಕ್ಟೋಬರ್ 25ರಂದು ಮಂಗಳೂರಿನ ದೇರಳಕಟ್ಟೆಯಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ವಿಲ್ಸನ್ ಅಲನ್ ಫೆರ್ನಾಂಡಿಸ್‌ ಎಂಬವರು ಮೃತಪಟ್ಟಿದ್ದರು. ಅವರ ಮೃತದೇಹವನ್ನು ಶವಾಗಾರದಲ್ಲಿ ಇರಿಸಲಾಗಿತ್ತು. ಶವಾಗಾರದಲ್ಲಿ ಇರಿಸುವುದಕ್ಕಾಗಿಯೂ 2,250 ರೂ. ಹಣವನ್ನು ಆಸ್ಪತ್ರೆ ಪಡೆದುಕೊಂಡಿತ್ತು. ಆದರೆ, ರೆಫ್ರಿಜಿರೇಟರ್ ಹಾಳಾಗಿದೆ, ಮೃತದೇಹವನ್ನು ತೆಗೆದುಕೊಂಡು ಹೋಗಿ ಎಂದು ಅದೇ ಅಕ್ಟೋಬರ್ 27ರಂದು ಆಸ್ಪತ್ರೆಯವರು ಕುಟುಂಬಸ್ಥರಿಗೆ ತಿಳಿಸಿದ್ದರು. ಆ ವೇಳೆಗಾಗಲೇ ಮೃತದೇಹ ಸಂಪೂರ್ಣವಾಗಿ ಕೊಳೆತಿತ್ತು ಎಂದು ವರದಿಯಾಗಿದೆ.

ಮೃತದೇಹ ಕೊಳೆತಿದ್ದರಿಂದ ಅಂತಿಕ ಗೌರವ ಸಲ್ಲಿಸಲು ಸಾಧ್ಯವಾಗದೆ ಕುಟುಂಬ ಮಾನಸಿತವಾಗಿ ನೊಂದಿತ್ತು. ಆಸ್ಪತ್ರೆಯ ವಿರುದ್ಧ ಪೊಲೀಸಸ್ ಠಾಣೆಯಲ್ಲಿ ಮೃತರ ಸಹೋದರ ನೆಲ್ಸರ್ ದೂರು ನೀಡಿದ್ದರು. ಆಸ್ಪತ್ರೆಯ ನಿರ್ಲಕ್ಷ್ಯದಿಂದ ಮೃತದೇಹ ಕೊಳೆತಿದೆ ಎಂದು ಆರೋಪಿಸಿದ್ದರು. ಆದರೆ, ದೂರಿಗೆ ಪ್ರತಿಕ್ರಿಯಿಸಿದ್ದ ಆಸ್ಪತ್ರೆ, “ಆಸ್ಪತ್ರೆಯಿಂದ ಸೂಚನೆ ನೀಡಿದ ತಕ್ಷಣ ಮೃತದೇಹ ತೆಗೆದುಕೊಂಡು ಹೋಗಿದ್ದರೆ ಕೊಳೆಯುತ್ತಿರಲಿಲ್ಲ” ಎಂದು ಉತ್ತರಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆಸ್ಪತ್ರೆಯ ಬೇಜವಾಬ್ದಾರಿ ಹೇಳಿಕೆಯಿಂದ ಸಿಟ್ಟಾದ ಕುಟುಂಬವು ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗಕ್ಕೆ ದೂರು ನೀಡಿತ್ತು. ಪ್ರಕರಣದ ವಿಚಾರಣೆ ನಡೆಸಿಸಿರವು ಆಯೋಗವು ಆಸ್ಪತ್ರೆಗೆ 5 ಲಕ್ಷ ರೂ. ದಂಡ ವಿಧಿಸಿದ್ದು, ಅದನ್ನು ಮೃತರ ಕುಟುಂಬಕ್ಕೆ ನೀಡಬೇಕೆಂದು ಆದೇಶಿಸಿದೆ.

ಒಂದು ತಿಂಗಳೊಳಗೆ ಪರಿಹಾರದ ಹಣವನ್ನು ಪಾವತಿಸದಿದ್ದಾರೆ, ಆ ಮೋತ್ತಕ್ಕೆ ಶೇ.8ರಷ್ಟು ಬಡ್ಡಿದರದಲ್ಲಿ ಬಡ್ಡಿಹಣವನ್ನೂ ಸೇರಿಸಿ ನೀಡಬೇಕೆಂದು ಸೂಚನೆ ನೀಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...