ದಕ್ಷಿಣ ಕನ್ನಡ | ಪ್ರಭಾಕರ್ ಭಟ್ ವಿರುದ್ಧ ಹೆಚ್ಚಿದ ಆಕ್ರೋಶ; ಬಂಧನಕ್ಕೆ ಸಮಾನ ಮನಸ್ಕರ ಆಗ್ರಹ

Date:

ಮುಸ್ಲಿಂ ಹೆಣ್ಣು ಮಕ್ಕಳ ಬಗ್ಗೆ ಸಂಘಪರಿವಾರದ ಮುಖಂಡ ಪ್ರಭಾಕರ್ ಭಟ್ ನೀಡಿರುವ ಹೇಳಿಕೆ ಖಂಡನೀಯ. ಹೆಣ್ಣು ಮಕ್ಕಳಿರುವ ಯಾವುದೇ ಜಾತಿ ಧರ್ಮದವರು ಇದನ್ನ ಒಪ್ಪಲು ಸಾಧ್ಯವಿಲ್ಲ ಎಂದು ಸಮಾನ ಮನಸ್ಕರ ಸಂಘಟನೆಗಳು ಹೇಳಿವೆ.

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಕಾಂಗ್ರೆಸ್‌, ಸಿಪಿಐಎಂ, ದಸಂಸ, ರೈತ ಸಂಘ ಸೇರಿದಂತೆ ಸಮಾನ ಮನಸ್ಕರ ಸಂಘಟನೆಗಳ ಮುಖಂಡರು ಪತ್ರಿಕಾಗೋಷ್ಠಿ ನಡೆಸಿದ್ದಾರೆ. “ಪ್ರಭಾಕರ್ ಭಟ್ ಹೇಳಿಕೆ ಸಮಗ್ರ ಮಹಿಳೆಯರಿಗೆ ಮಾಡಿದ ಅವಮಾನ. ಮಹಿಳೆಯರ ಮನಸ್ಸಿಗೆ ನೋವಾಗುವ ಆತನ ಹೇಳಿಕೆಯನ್ನು ನಾವು ಖಂಡಿಸುತ್ತೇವೆ” ಎಂದು ಮಾಜಿ ಶಾಸಕ ರಮಾನಾಥ್ ರೈ ಹೇಳಿದ್ದಾರೆ.

“ಪ್ರಭಾಕರ್ ಭಟ್ ಅನೇಕ ಬಾರಿ ಪ್ರಚೋದನಾಕಾರಿ ಮಾತುಗಳನ್ನಾಡುತ್ತಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಅಧಿಕಾರ ಕಳೆದುಕೊಂಡ ಬಳಿಕ, ಇಂತಹ ಕೋಮುವಾದಿಗಳು ಏನು ಮಾಡಬೇಕೆಂದು ಗೊತ್ತಾಗದಂತಾಗಿದ್ದಾರೆ. ಹಾಗಾಗಿ, ಕೋಮು ಪ್ರಚೋದನೆ ಮಾಡುವ ಭಾಷಣ ಮಾಡಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಆತನನ್ನು ಬಂಧಿಸಬೇಕೆಂದು ಎಲ್ಲೆಡೆ ಒತ್ತಡಗಳಿವೆ. ತಡಮಾಡದೆ ಆತನನ್ನು ಬಂಧಿಸಬೇಕು. ಆತನ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

“ಹಿಂದುಗಳ ಹೆಣ್ಣು ಮಕ್ಕಳ ಡ್ರೆಸ್ ಕೋಡ್ಅನ್ನ ಅಪಮಾನಿಸುವ ಕೆಲಸವನ್ನೂ ಪ್ರಭಾಕರ್ ಭಟ್ ಮಾಡಿದ್ದಾರೆ. ಎಲ್ಲ ಭಾಷೆ, ಸಮುದಾಯ, ಧರ್ಮದ ಜನರು ಆತನ ಬಂಧನಕ್ಕೆ ಆಗ್ರಹಿಸುತ್ತಿದ್ದಾರೆ” ಎಂದು ಒತ್ತಾಯಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...