ಧರ್ಮಸ್ಥಳ ಪ್ರಕರಣ: ಮೃತದೇಹಗಳ ಹೂತಿಟ್ಟ ಜಾಗ ತೋರಿಸಿದ ಸಾಕ್ಷಿ ದೂರುದಾರ

Date:

ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಹಿಂದೆ ನಡೆದಿವೆ ಎನ್ನಲಾದ ಅಪರಾಧ ಕೃತ್ಯಗಳಿಗೆ ಸಂಬಂಧಿಸಿದ ಮೃತದೇಹಗಳನ್ನು ಹೂತು ಹಾಕಿದ ಪ್ರಕರಣದ (ಸಂಖ್ಯೆ 39/2025 ) ಸಾಕ್ಷಿ ದೂರುದಾರ ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಸಮೀಪದಲ್ಲಿ ಮೃತದೇಹಗಳನ್ನು ಹೂತು ಹಾಕಿದ ಜಾಗವನ್ನು ವಿಶೇಷ ತನಿಖಾ‌ ತಂಡದ (ಎಸ್ಐಟಿ) ಅಧಿಕಾರಿಗಳಿಗೆ ಸೋಮವಾರ ತೋರಿಸಿದರು.

ಮುಖಕ್ಕೆ‌ ಮುಸುಕು ಹಾಕಿದ್ದ ಸಾಕ್ಷಿ ದೂರುದಾರನನ್ನು ಬಿಗಿ ಪೊಲೀಸ್ ಭದ್ರತೆಯೊಂದಿಗೆ ಎಸ್ಐಟಿ ಅಧಿಕಾರಿಗಳು ನೇತ್ರಾವತಿ ಸ್ನಾನ ಘಟ್ಟದ ಬಳಿಗೆ ಕರೆತಂದರು.

ನೇತ್ರಾವತಿ ನದಿ ಪಕ್ಕದಲ್ಲೇ ಇರುವ ಕಾಡಿನೊಳಗೆ ಎಸ್ಐಟಿ ಅಧಿಕಾರಿಗಳನ್ನು ಸಾಕ್ಷಿ ದೂರುದಾರ ಕರೆದೊಯ್ದ. ಆತನ ಜೊತೆಗೆ ಮೂವರು ವಕೀಲರೂ ಸ್ಥಳಕ್ಕೆ ತೆರಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಹೆಣ್ಣು ಮಕ್ಕಳ ಸುರಕ್ಷತೆಗೆ ‘ಶಕ್ತಿಶ್ರೀ’ ಸಾಕೇ?

ಸಾಕ್ಷಿ ದೂರುದಾರನನ್ನು ಮಂಗಳೂರಿನ ಮಲ್ಲಿಕಟ್ಟೆಯ ಪ್ರವಾಸಿ ಬಂಗಲೆಯಲ್ಲಿ ಎಸ್ಐಟಿ ಅಧಿಕಾರಿಗಳು ಶನಿವಾರ ಮತ್ತು ಭಾನುವಾರ ವಿಚಾರಣೆಗೆ ಒಳಪಡಿಸಿದ್ದರು. ಸೋಮವಾರ ಎಸ್ಐಟಿ ಎದುರು ಹಾಜರಾದ ಆತನನ್ನು ಬೆಳ್ತಂಗಡಿಯ ಎಸ್ಐಟಿ ಕಚೇರಿಗೆ ಕರೆದೊಯ್ದರು. ಬಳಿಕ ಅಲ್ಲಿಂದ ನೇತ್ರಾವತಿ ಸ್ನಾನಘಟ್ಟಕ್ಕೆ ಬಿಗಿ ಭದ್ರತೆಯೊಂದಿಗೆ ಕರೆದೊಯ್ದರು.

ಎಸ್ಐಟಿಯ ಅಧಿಕಾರಿಗಳಾದ ಎಂ ಎನ್ ಅನುಚೇತ್, ಜಿತೇಂದ್ರ ಕುಮಾರ್ ದಯಾಮ, ಸಿ ಎ ಸೈಮನ್ ಮೊದಲಾದ ಅಧಿಕಾರಿಗಳು ಇದ್ದರು.

ಎಸ್‌ಐಟಿ ಮುಖ್ಯಸ್ಥರಾಗಿರುವ ಆಂತರಿಕ ಭದ್ರತಾ ವಿಭಾಗದ ಪೊಲೀಸ್‌ ಮಹಾ ನಿರ್ದೇಶಕ ಪ್ರಣವ್ ಮೊಹಾಂತಿ ಅವರು ಮಂಗಳೂರಿಗೆ ಭಾನುವಾರ ಭೇಟಿ ನೀಡಿ ತನಿಖೆಯ ಬಗ್ಗೆ ಎಸ್ಐಟಿ ಅಧಿಕಾರಿಗಳಿಗೆ ಮಾರ್ಗದರ್ಶನ ಮಾಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...