ದಕ್ಷಿಣ ಕನ್ನಡ | ಪ್ರಧಾನ ಅಂಚೆ ಕಚೇರಿಗೆ ವಿದೇಶಿ ಪ್ರವಾಸಿಗರ ಭೇಟಿ

Date:

ಈ ವರ್ಷದ ಮೊದಲ ವಿದೇಶಿ ಕ್ರೂಸ್ ಶುಕ್ರವಾರದಂದು ನವ ಮಂಗಳೂರು ಬಂದರಿಗೆ ಆಗಮಿಸಿದ್ದು, ಅದರಲ್ಲಿದ್ದ ಅನೇಕ ವಿದೇಶಿ ಪ್ರವಾಸಿಗರು ಪಾಂಡೇಶ್ವರದಲ್ಲಿರುವ ಮಂಗಳೂರು ಪ್ರಧಾನ ಅಂಚೆ ಕಚೇರಿಗೆ ಭೇಟಿ ನೀಡಿದ್ದಾರೆ. ಅಂಚೆ ಸೇವೆ ಹಾಗೂ ಭಾರತದ ವಿವಿಧ ಅಂಚೆ ಚೀಟಿಗಳ ಬಗ್ಗೆ ಮಾಹಿತಿ ಪಡೆದು ಸಂತಸ ವ್ಯಕ್ತಪಡಿಸಿದರು.

ಮಂಗಳೂರು ಪ್ರಧಾನ ಅಂಚೆ ಕಚೇರಿಯಲ್ಲಿ ಇರುವ ಫಿಲಾಟೆಲಿಕ್ ಬ್ಯುರೋವು ಇದೀಗ ಅಧಿಕೃತ ಪ್ರವಾಸಿ ತಾಣವಾಗುವ ಪ್ರಕ್ರಿಯೆಯಲ್ಲಿದೆ. ಇಲ್ಲಿಗೆ ಭೇಟಿ ನೀಡಿದ ವಿದೇಶಿ ಪ್ರವಾಸಿಗರಿಗೆ ದೀಪಾ ಅವರು ಅಂಚೆ ಚೀಟಿಗಳ ಬಗ್ಗೆ ಸಮಗ್ರ ಮಾಹಿತಿ ನೀಡಿದರು. ಪ್ರವಾಸಿಗರು ಅಂಚೆ ಕಚೇರಿಯ ಕಾರ್ಯ ನಿರ್ವಹಣೆಯನ್ನು ನೋಡಿ ಮೆಚ್ಚುಗೆ ವ್ಯಕ್ತಪಡಿಸಿದರು. ಇಲ್ಲಿಂದಲೇ ಅವರು ಅವರವರ ದೇಶಕ್ಕೆ ಚಿತ್ರ ಸಹಿತ ಅಂಚೆ ಕಾರ್ಡ್‌ಗಳನ್ನು ಪೋಸ್ಟ್ ಮಾಡಿದರು.

ಮಂಗಳೂರು ಅಂಚೆ ಕಚೇರಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವರಿಷ್ಠ ಅಂಚೆ ಪಾಲಕ ಶ್ರೀನಾಥ್ ಬಸ್ರೂರು ಅವರು ವಿದೇಶಿ ಪ್ರವಾಸಿಗರನ್ನು ಸ್ವಾಗತಿಸಿ ಅವರಿಗೆ ಅಂಚೆ ಕಚೇರಿಯ ಸೇವೆಗಳ  ಬಗ್ಗೆ ತಿಳಿಸಿದರು. ವಿದೇಶಿ ಪ್ರವಾಸಿಗರಿಗೆ ಭಾರತೀಯ ಅಂಚೆಯ ಬಗ್ಗೆ ಹೆಚ್ಚು ಮಾಹಿತಿ ನೀಡುವ ವಿಶೇಷ ಕಿಟ್‌ ಕೂಡ ಇಲ್ಲಿನ ಫಿಲಾಟೆಲಿಕ್ ಬ್ಯುರೋದಲ್ಲಿ ಲಭ್ಯವಾಗುವಂತೆ ವ್ಯವಸ್ಥೆ ಮಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಹಾಸನ | ಆಲೂರಿನಲ್ಲಿ ರೈಲುಗಳ ನಿಲುಗಡೆಗೆ ಆಗ್ರಹ

ಆಸ್ಟ್ರೇಲಿಯಾದ ಇಬ್ಬರು, ಸ್ಪೈನ್ ದೇಶದ ಇಬ್ಬರು, ಅಮೆರಿಕಾದ ಮೂವರು ಹಾಗೂ ನ್ಯೂಯಾರ್ಕ್‌ನ ಇಬ್ಬರು ಪ್ರವಾಸಿಗರು ಈ ತಂಡದಲ್ಲಿ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...