ಉದ್ಯೋಗ ಮಾಹಿತಿ | ರೈಲ್ವೆ ನೇಮಕಾತಿ ಮಂಡಳಿಗಳ ಹುದ್ದೆಗಳಿಗೆ ಅರ್ಜಿ ಆಹ್ವಾನ: ಮಾ.2 ಕೊನೆಯ ದಿನ

Date:

ರೈಲ್ವೆ ನೇಮಕಾತಿ ಮಂಡಳಿಗಳು(RRB) ಗ್ರೂಪ್-ಡಿ(ಹಂತ 1) ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ವೆಬ್​ತಾಣಗಳಲ್ಲಿ ಪ್ರಕಟಣೆಯನ್ನು ಬಿಡುಗಡೆ ಮಾಡಿದೆ. ಈ ಅಧಿಸೂಚನೆಯನ್ನು 22,000ಕ್ಕೂ ಅಧಿಕ ತಾತ್ಕಾಲಿಕ ಹುದ್ದೆಗಳಿಗೆ ನೇಮಕಾತಿ ಮಾಡುವುದಾಗಿ ಅದೇಶ ಹೊರಡಿಸಲಾಗಿದೆ.

ಆರ್‌ಆರ್‌ಬಿ ಘೋಷಿಸಿದ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ 2026ರ ಜನವರಿ 31ರಿಂದ ಆರಂಭವಾಗಿದ್ದು, ಅಭ್ಯರ್ಥಿಗಳು 2026 ಮಾರ್ಚ್ 2ರವರೆಗೆ ಅರ್ಜಿ ಸಲ್ಲಿಸಬಹುದು.

ಅಗತ್ಯವಿರುವ ಕನಿಷ್ಠ ವಯಸ್ಸು 18 ವರ್ಷಗಳು ಮತ್ತು ಗರಿಷ್ಠ ವಯಸ್ಸು 36 ವರ್ಷಗಳು. ಈ ಸಂಬಂಧಿತ ವಿವರಗಳು ಈ ಕೆಳಗಿನಂತಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಭ್ಯರ್ಥಿಗಳು ಈ ಲಿಂಕ್​ನಲ್ಲಿ https://www.rrbapply.gov.in/#/auth/landing ಅರ್ಜಿ ಸಲ್ಲಿಸಬಹುದು.

ಪ್ರಮುಖ ದಿನಾಂಕಗಳು

  • ಅಧಿಸೂಚನೆ ದಿನಾಂಕ: 30 ಜನವರಿ 2026
  • ಆನ್ಲೈನ್ ಅರ್ಜಿ ಆರಂಭ: 31 ಜನವರಿ 2026
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 2 ಮಾರ್ಚ್ 2026
  • ಶುಲ್ಕ ಪಾವತಿಗೆ ಕೊನೆಯ ದಿನಾಂಕ: 2 ಮಾರ್ಚ್ 2026
  • ಪರೀಕ್ಷೆ ದಿನಾಂಕ: ಶೀಘ್ರವೇ ತಿಳಿಸಲಾಗುವುದು
  • ಭರ್ತಿ ಕಾರ್ಡ್: ಪರೀಕ್ಷೆಗೆ ಮೊದಲು
  • ಫಲಿತಾಂಶ ದಿನಾಂಕ: ಶೀಘ್ರವೇ ಅಪ್ಡೇಟ್ ಮಾಡಲಾಗುವುದು.
  • ವಿವರಗಳಿಗೆ ಅಭ್ಯರ್ಥಿಗಳು ಆರ್ಆರ್ಬಿ ಅಧಿಕೃತ ವೆಬ್ ತಾಣವನ್ನು ಪರೀಕ್ಷಿಸಿ ದೃಢಪಡಿಸಬಹುದು.

ಅರ್ಜಿ ಶುಲ್ಕ: ಜನರಲ್/ಒಬಿಸಿ/ಇಡಬ್ಲ್ಯುಎಸ್: 500 ರೂ. (+ ಜಿಎಸ್ಟಿ ಶೇ.18) ಎಸ್‌ಸಿ/ಎಸ್‌ಟಿ/ ಪಿಡಬ್ಲ್ಯೂಡಿ/ಇಎಕ್ಸ್ಎಸ್: 250 ರೂ.(+ ಜಿಎಸ್ಟಿ ಶೇ 18). I ಮೊತ್ತವನ್ನು ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ಇಂಟರ್ನೆಟ್ ಬ್ಯಾಂಕಿಂಗ್, ಐಎಂಪಿಎಸ್, ಕ್ಯಾಶ್ ಕಾರ್ಡ್/ ಮೊಬೈಲ್ ವಾಲೆಟ್ ಮೂಲಕ ಪಾವತಿಸುವ ಅವಕಾಶವಿದೆ.

ಒಟ್ಟು ಹುದ್ದೆಗಳು:

  • 22,000ಕ್ಕೂ ಅಧಿಕ ಹುದ್ದೆಗಳು
  • ಜನರಲ್ – 9,235 ಹುದ್ದೆಗಳು
  • ಇಡಬ್ಲ್ಯುಸಿ- 2,237 ಹುದ್ದೆಗಳು
  • ಒಬಿಸಿ- 5,217 ಹುದ್ದೆಗಳು
  • ಎಸ್‌ಸಿ- 3,231 ಹುದ್ದೆಗಳು
  • ಎಸ್‌ಟಿ- 1,726 ಹುದ್ದೆಗಳು

ಹುದ್ದೆಯ ಹೆಸರು: ಪಾಯಿಂಟ್ಸ್ಮ್ಯಾನ್-ಬಿ, ಸಹಾಯಕ (ಟ್ರ್ಯಾಕ್ ಮಿಷಿನ್), ಸಹಾಯಕ (ಬ್ರಿಡ್ಜ್), ಟ್ರ್ಯಾಕ್ ಮೈಂಟೇನೆನ್ಸ್ ಜ್ಯೂನಿಯರ್, ಸಹಾಯಕ ಪಿ-ವೇ, ಸಹಾಯಕ (ಸಿ&ಡಬ್ಲ್ಯು). ಸಹಾಯಕ ಟಿಆರ್​ಡಿ, ಸಹಾಯಕ (ಎಸ್ &ಟಿ), ಸಹಾಯಕ ಲೋಕೋ ಶೆಡ್ (ಡೀಸೆಲ್), ಸಹಾಯಕ ಲೋಕೋಶೆಡ್ (ಎಲೆಕ್ಟ್ರಿಕಲ್), ಸಹಾಯಕ ಆಪರೇಶನ್ಸ್ (ಎಲೆಕ್ಟ್ರಿಕಲ್), ಸಹಾಯಕ ಟಿಎಲ್ &ಎಸಿ, ಸಹಾಯಕ ಟಿಎಲ್ &ಎಸಿ (ವರ್ಕ್‌ಶಾಪ್‌), ಸಹಾಯಕ ಟಿಎಲ್ & ಎಸಿ(ವರ್ಕ್‌ಶಾಪ್‌), ಸಹಾಯಕ(ವರ್ಕ್‌ಶಾಪ್) ಮೆಕಾನಿಕಲ್.

ವಿದ್ಯಾರ್ಹತೆ: NCVT/SCVTಯಿಂದ ಮಾನ್ಯತೆ ಪಡೆದ ಶಾಲೆಯಿಂದ 10ನೇ ತರಗತಿ (ಪ್ರೌಢಶಾಲೆ) ಪೂರ್ಣಗೊಳಿಸಿದ ಅಥವಾ NCVTಯಿಂದ ನೀಡಲಾದ ರಾಷ್ಟ್ರೀಯ ಅಪ್ರೆಂಟಿಸ್‌ಶಿಪ್ ಪ್ರಮಾಣಪತ್ರ(NAC) ಹೊಂದಿರುವ ಅಭ್ಯರ್ಥಿಗಳು RRB ಗ್ರೂಪ್ D ನೇಮಕಾತಿ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಆಯ್ಕೆ ಪ್ರಕ್ರಿಯೆ:

  • ಕಂಪ್ಯೂಟರ್ ಆಧಾರಿತ ಪರೀಕ್ಷೆ(ಸಿಬಿಟಿ-1)
  • ದೈಹಿಕ ಸಾಮರ್ಥ್ಯ ಪರೀಕ್ಷೆ
  • ದಾಖಲೆ ಪರಿಶೀಲನೆ
  • ವೈದ್ಯಕೀಯ ಪರೀಕ್ಷೆ

ಈ ಕೆಳಗಿನ ಲಿಂಕ್‌ಗಳಲ್ಲಿ ವಿವರಗಳನ್ನು ಪಡೆಯಬಹುದು- https://sarkariresult.com.cm/railway-rrb-group-d-level-1-recruitment-2026-online/

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಹೇಶ್ ಶೆಟ್ಟಿ ತಿಮರೋಡಿಗೆ ಮೂರನೇ ಬಾರಿ ಗಡಿಪಾರು ಆದೇಶ, ಮಧ್ಯರಾತ್ರಿ ನೋಟಿಸ್ ಜಾರಿ !

ಧರ್ಮಸ್ಥಳ ಸೌಜನ್ಯ ‌ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಮೂರನೇ...

ಕರಾವಳಿ | LPG ಅಭಾವ; ಹೋಟೆಲ್ ಉದ್ಯಮಕ್ಕೆ ಭಾರೀ ಹೊಡೆತ

ಮಧ್ಯಪ್ರಾಚ್ಯ ದೇಶಗಳಲ್ಲಿ ಉಂಟಾಗಿರುವ ಯುದ್ಧದ ಪರಿಣಾಮವಾಗಿ ಅಡುಗೆ ಅನಿಲ (LPG) ಸರಬರಾಜಿನಲ್ಲಿ...

ಧರ್ಮಸ್ಥಳ ಪೊಲೀಸ್ ಠಾಣೆಗೆ ಆಯೋಗದ ಅಧ್ಯಕ್ಷರ ಭೇಟಿ

ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಾದ ಶಶಿಧರ್ ಎಸ್.ಕೋಸಂಬೆ...

ಮಂಗಳೂರು | ಪಾಸ್ಟಿಕ್, ಪತ್ರಿಕೆಯಲ್ಲಿ ಹೋಟೆಲ್ ಬಿಸಿ ಆಹಾರ ಪಾರ್ಸೆಲ್ ನಿಷೇಧಕ್ಕೆ ಸೂಚನೆ

ಹೋಟೆಲ್, ಕ್ಯಾಂಟೀನ್, ಕೆಫೆಗಳಲ್ಲಿ ಪ್ಲಾಸ್ಟಿಕ್ ಕವರ್, ಪತ್ರಿಕೆಗಳಲ್ಲಿ ಬಿಸಿ ಆಹಾರ ಪದಾರ್ಥಗಳನ್ನು...