ಕಡಬ | ಕೋವಿಯಿಂದ ಗುಂಡು ಹಾರಿಸಿಕೊಂಡು ಮೃತಪಟ್ಟ ಸ್ಥಿತಿಯಲ್ಲಿ ಬಾಲಕನ ಶವ ಪತ್ತೆ

Date:

ಕೋವಿಯಿಂದ ಗುಂಡು ಹಾರಿಸಿಕೊಂಡು ಮೃತಪಟ್ಟ ಸ್ಥಿತಿಯಲ್ಲಿ ಬಾಲಕನ ಶವ ಪತ್ತೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ರಾಮಕುಂಜ ಗ್ರಾಮದಲ್ಲಿ ನಡೆದಿದೆ.

ಮೃತ ಬಾಲಕನನ್ನು ರಾಮಕುಂಜದ ವಸಂತ್ ಅಮೀನ್ ಪುತ್ರ ಮೋಕ್ಷ(17) ಗುರುತಿಸಲಾಗಿದೆ. ಬಾಲಕನ ತಂದೆಯೂ ಚೂರಿಯಿಂದ ಇರಿದ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಘಟನೆಯ ಬಗ್ಗೆ ಹಲವು ಅನುಮಾನಗಳು ಮೂಡಿವೆ.

ಮನೆಯಲ್ಲಿ ಕೌಟುಂಬಿಕ ಕಲಹ ಸಂಘರ್ಷಕ್ಕೆ ಕಾರಣವಾಗಿರುವ ಬಗ್ಗೆ ಅನುಮಾನ ಇದ್ದು, ತಂದೆ ಮತ್ತು ಮಗನ ಮಧ್ಯೆ ಮನೆಯಲ್ಲಿ ಪರಸ್ಪರ ಜಗಳ ನಡೆದಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಜಗಳದ ವೇಳೆ ಕೋವಿಯಿಂದ ಗುಂಡು ಹಾರಿದ್ದು, ಗುಂಡು ತಗುಲಿ ಬಾಲಕ ಸಾವನಪ್ಪಿರುವ ಸಾಧ್ಯತೆ ಇದ್ದು, ಬಾಲಕನ ಸಾವು ಹಲವು ಅನುಮಾನಕ್ಕೆ ಕಾರಣವಾಗಿದೆ. ಬಾಲಕನೇ ಶೂಟ್ ಮಾಡಿಕೊಂಡಿದ್ದಾ ಅಥವಾ ತಂದೆಯೇ ಶೂಟ್ ಮಾಡಿದ್ದಾ ಎಂಬ ಬಗ್ಗೆ ಅನುಮಾನವಿದೆ. ಇನ್ನು ಗಲಾಟೆಯಲ್ಲಿ ತಂದೆ ವಸಂತ್ ಅಮೀನ್ ಅವರಿಗೂ ಚೂರಿ ಇರಿತದ ಗಾಯವಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೇರಳ ಮೂಲದವರಾಗಿರುವ ವಸಂತ ಅಮೀನ್ ಅವರು ರಾಮಕುಂಜ ಪಾದೆ ಎಂಬಲ್ಲಿ ಜಾಗ ಖರೀದಿಸಿ ಮನೆ ಮಾಡಿ ತಂದೆ, ಮಗ ಜೊತೆಯಾಗಿ ವಾಸವಿದ್ದರು. ಮಂಗಳೂರು ಖಾಸಗಿ ಶಿಕ್ಷಣ ಸಂಸ್ಥೆ ವಿದ್ಯಾರ್ಥಿಯಾಗಿದ್ದ ಮೋಕ್ಷ ಅವರು ಯಾವ ಕಾರಣಕ್ಕಾಗಿ ಈ ಕೃತ್ಯ ಎಸಗಿದ್ದಾರೆ ಎನ್ನುವುದು ಪೊಲೀಸ್ ತನಿಖೆಯಿಂದಷ್ಟೇ ತಿಳಿದುಬರಬೇಕಿದೆ.

ಘಟನೆಗೆ ಸಂಬಂಧಿಸಿದಂತೆ ವಸಂತ ಅಮೀನ್ ವಿರುದ್ಧ ಅವರ ಪತ್ನಿ ಜಯಶ್ರೀ ದೂರು ದಾಖಲಿಸಿದ್ದು, ಮಗನನ್ನು ವಸಂತ ಶೂಟ್ ಮಾಡಿ ಕೊಲೆ ಮಾಡಿದ್ದಾರೆಂದು ದೂರು ದಾಖಲಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಧಾರವಾಡ | ‘ಅಂಬಿಕಾತನಯದತ್ತ ರಾಷ್ಟ್ರೀಯ ಪ್ರಶಸ್ತಿ’ಗೆ ಪ್ರೊ.‌ಮಾಲತಿ ಪಟ್ಟಣಶೆಟ್ಟಿ, ಸತೀಶ್ ಕುಲಕರ್ಣಿ ಆಯ್ಕೆ

ಪತ್ನಿ ಜಯಶ್ರೀ ಪತಿಯೊಂದಿಗೆ ಮನಸ್ತಾಪಗೊಂಡು ಮಂಗಳೂರಿನ ತನ್ನ ತಾಯಿ ಮನೆಯಲ್ಲಿದ್ದರು. ಕಳೆದ ಒಂದು ವರ್ಷದಿಂದ ಮನೆಯಲ್ಲಿ ತಂದೆ ಮತ್ತು ಮಗ ಮಾತ್ರ ವಾಸವಿದ್ದರು ಎಂದು ಹೇಳಲಾಗುತ್ತಿದೆ.

ಸ್ಥಳಕ್ಕೆ ಕಡಬ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಇಡೀ ಪ್ರಕರಣ ಹಲವು ಅನುಮಾನಗಳಿಗೆ ಕಾರಣವಾಗಿದ್ದು, ಪೊಲೀಸ್ ತನಿಖೆಯ ನಂತರವೇ ನಿಜಾಂಶ ತಿಳಿಯಬೇಕಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಹೇಶ್ ಶೆಟ್ಟಿ ತಿಮರೋಡಿಗೆ ಮೂರನೇ ಬಾರಿ ಗಡಿಪಾರು ಆದೇಶ, ಮಧ್ಯರಾತ್ರಿ ನೋಟಿಸ್ ಜಾರಿ !

ಧರ್ಮಸ್ಥಳ ಸೌಜನ್ಯ ‌ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಮೂರನೇ...

ಕರಾವಳಿ | LPG ಅಭಾವ; ಹೋಟೆಲ್ ಉದ್ಯಮಕ್ಕೆ ಭಾರೀ ಹೊಡೆತ

ಮಧ್ಯಪ್ರಾಚ್ಯ ದೇಶಗಳಲ್ಲಿ ಉಂಟಾಗಿರುವ ಯುದ್ಧದ ಪರಿಣಾಮವಾಗಿ ಅಡುಗೆ ಅನಿಲ (LPG) ಸರಬರಾಜಿನಲ್ಲಿ...

ಧರ್ಮಸ್ಥಳ ಪೊಲೀಸ್ ಠಾಣೆಗೆ ಆಯೋಗದ ಅಧ್ಯಕ್ಷರ ಭೇಟಿ

ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಾದ ಶಶಿಧರ್ ಎಸ್.ಕೋಸಂಬೆ...

ಮಂಗಳೂರು | ಪಾಸ್ಟಿಕ್, ಪತ್ರಿಕೆಯಲ್ಲಿ ಹೋಟೆಲ್ ಬಿಸಿ ಆಹಾರ ಪಾರ್ಸೆಲ್ ನಿಷೇಧಕ್ಕೆ ಸೂಚನೆ

ಹೋಟೆಲ್, ಕ್ಯಾಂಟೀನ್, ಕೆಫೆಗಳಲ್ಲಿ ಪ್ಲಾಸ್ಟಿಕ್ ಕವರ್, ಪತ್ರಿಕೆಗಳಲ್ಲಿ ಬಿಸಿ ಆಹಾರ ಪದಾರ್ಥಗಳನ್ನು...