ಮಂಗಳೂರು | ಸೋಷಿಯಲ್ ಆ್ಯಂಡ್ ವೆಲ್ಫೇರ್ ಟ್ರಸ್ಟ್‌ನ ದಶಮಾನೋತ್ಸವ

Date:

ನಮ್ಮ ಸಮಾಜದಲ್ಲಿ ನಂಬಿಕೆ ಮತ್ತು ಮೌಲ್ಯಗಳು ನಿಧಾನವಾಗಿ ಕುಸಿಯುತ್ತಿವೆ. ನಂಬಿಕೆಯಿಲ್ಲದ ವ್ಯವಸ್ಥೆಯಲ್ಲಿ ನಾವು ಬದುಕುತ್ತಿದ್ದೇವೆ. ಹೆತ್ತವರು ಮಕ್ಕಳಿಗೆ ಚಿಕ್ಕಂದಿನಿಂದಲೇ ಸತ್ಯ, ಪ್ರಾಮಾಣಿಕತೆ, ಶಿಸ್ತು ಮತ್ತು ಮಾನವೀಯ ಮೌಲ್ಯಗಳನ್ನು ಕಲಿಸಬೇಕು. ಮೌಲ್ಯಗಳು ಮನುಷ್ಯನ ಬದುಕಿನ ಪ್ರಮುಖ ಆಧಾರವಾಗಬೇಕು ಎಂದು ಮಂಗಳೂರು ವಿವಿ ಉಪಕುಲಪತಿ ಪ್ರೊ. ಪಿ ಎಲ್ ಧರ್ಮ ಅವರು ಪ್ರಸ್ತುತ ಸಮಾಜದ ಮೌಲ್ಯಾಧಾರಿತ ಬದುಕಿನ ಅಗತ್ಯತೆಯ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದರು.

ಮಂಗಳೂರು ನಗರದ ಸೋಷಿಯಲ್ ಆ್ಯಂಡ್ ವೆಲ್ಫೇರ್ ಟ್ರಸ್ಟ್‌ನ ದಶಮಾನೋತ್ಸವ ಸಮಾರೋಪ ಮತ್ತು ದಿನೇಶ್ ಪೈ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದರು.

“ಭಾರತ್ ಸೋಷಿಯಲ್ ಆ್ಯಂಡ್ ವೆಲ್ಫೇರ್ ಟ್ರಸ್ಟ್ ಬಡವರಿಗೆ ಬದುಕು ಕಟ್ಟಿಕೊಡುವ ಮಹತ್ವದ ಕೆಲಸ ಮಾಡುತ್ತಿದೆ. ಶಿಕ್ಷಣಕ್ಕೆ ನೆರವು ನೀಡುವ ಮೂಲಕ ಈ ಟ್ರಸ್ಟ್ ಸಮಾಜದ ಅಸಮಾನತೆಯನ್ನು ಕಡಿಮೆ ಮಾಡುವ ಕಾರ್ಯದಲ್ಲಿ ತೊಡಗಿದೆ. ಇದು ಅತ್ಯಂತ ಮಹತ್ವ ಕಾರ್ಯ ಶ್ಲಾಘನೀಯ ಸೇವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇಂದಿನ ಯುವ ಪೀಳಿಗೆಯ ಎದುರಿರುವ ಸವಾಲುಗಳ ಕುರಿತು ಮಾತನಾಡಿದ ಅವರು, “ಯಾವುದೇ ಸಮಸ್ಯೆ ಅಥವಾ ಒತ್ತಡ ಎದುರಾದಾಗ ಮದ್ಯಪಾನ ಹಾಗೂ ಡ್ರಗ್ಸ್ ಪರಿಹಾರವಾಗಬಾರದು. ಅವು ಬದುಕನ್ನು ಹಾಳುಮಾಡುತ್ತವೆ. ಮಹಿಳೆಯರು ಶೋಷಣೆಯ ವಿರುದ್ಧ ಧೈರ್ಯವಾಗಿ ನಿಲ್ಲಬೇಕು. ಮಕ್ಕಳು ಮದ್ಯ, ಮಾಧಕ ವ್ಯಸನ ಹಾಗೂ ದುಶ್ಚಟಗಳಿಗೆ ಬಲಿಯಾಗದಂತೆ ಹೆತ್ತವರು ಸದಾ ಎಚ್ಚರಿಕೆಯಿಂದಿರಬೇಕು” ಎಂದು ಕಿವಿಮಾತು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬಿಎಸ್‌ಡಬ್ಲ್ಯೂಟಿ ಅಧ್ಯಕ್ಷ ಎನ್. ಅಮೀನ್ ಪಕ್ಕಲಡ್ಕ ಮಾತನಾಡಿ, “ಭಾರತ್ ಸೋಷಿಯಲ್ ಆ್ಯಂಡ್ ವೆಲ್ಫೇರ್ ಟ್ರಸ್ಟ್ ಕಳೆದ ಹತ್ತು ವರ್ಷಗಳಿಂದ ಶಿಕ್ಷಣ, ಆರೋಗ್ಯ ಮತ್ತು ಸಮಾಜ ಕಲ್ಯಾಣ ಕ್ಷೇತ್ರಗಳಲ್ಲಿ ನಿರಂತರ ಸೇವೆ ಸಲ್ಲಿಸುತ್ತಿದೆ. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಅವಕಾಶ ಒದಗಿಸುವುದೇ ನಮ್ಮ ಸಂಸ್ಥೆಯ ಧ್ಯೇಯ. ಯಾವುದೇ ಪ್ರತಿಫಲಾಪೇಕ್ಷೆಯನ್ನು ನಾವು ಬಯಸುವುದಿಲ್ಲ. ವಿದ್ಯಾರ್ಥಿಗಳು ಸಾಧನೆ ಮಾಡಿ ಸಮಾಜಕ್ಕೆ ಕೊಡುಗೆ ನೀಡುವ ಮನೋಭಾವ ಬೆಳೆಸಿಕೊಂಡರೆ ಅದೇ ಸಾರ್ಥಕ” ಎಂದು ಹೇಳಿದರು.

ಮಂಗಳೂರು ವಿಶ್ವವಿದ್ಯಾಲಯದ ನಿವೃತ್ತ ಅಧೀಕ್ಷಕ ಹರೀಶ್ ಕುಮಾರ್ ಕೆ ಪ್ರಾಸ್ತಾವಿಕವಾಗಿ ಮಾತನಾಡಿ, “ಭಾರತ್ ಸೋಷಿಯಲ್ ಆ್ಯಂಡ್ ವೆಲ್ಫೇರ್ ಟ್ರಸ್ಟ್ ಕಡಿಮೆ ಸಂಪನ್ಮೂಲಗಳೊಂದಿಗೆ ದೊಡ್ಡ ಸಾಮಾಜಿಕ ಬದಲಾವಣೆಗೆ ಪ್ರಯತ್ನಿಸುತ್ತಿದೆ. ಈ ಸಂಸ್ಥೆಯ ಸೇವಾ ಮನೋಭಾವ ಇತರರಿಗೆ ಮಾದರಿಯಾಗಿದೆ. ಯಾವುದೇ ಪ್ರಚಾರ ಬಯಸದೆ, ದೇಣಿಗೆ ಸಂಗ್ರಹಿಸದೆ, ಪ್ರತಿಫಲಾಪೇಕ್ಷೆಯಿಲ್ಲದೆ ಕಾರ್ಯನಿರ್ವಹಿಸುವ ಇಂತಹ ಟ್ರಸ್ಟ್ ಬೆರಳೆಣಿಕೆಯಷ್ಟೂ ಇಲ್ಲ ಎನ್ನಬಹುದು” ಎಂದರು.

ಹಿರಿಯ ಸಮಾಜ ಸೇವಕ ಕೆ ಪಿ ಕರೀಮ್ ಅವರು ದಶಮಾನೋತ್ಸವ “BSWT ಸಾಧನೆಗಳ ಪಕ್ಷಿ ನೋಟ” ವಿಶೇಷ ಡಾಕ್ಯುಮೆಂಟರಿಯನ್ನು ಬಿಡುಗಡೆಗೊಳಿಸಿದರು.‌

ಬಿಎಸ್‌ಡಬ್ಲ್ಯೂಟಿ

ಈ ಸಂದರ್ಭದಲ್ಲಿ ಉಡುಪಿಯ ಹಿರಿಯ ಸಮಾಜ ಸೇವಕ ದಿನೇಶ್ ಪೈ ಅವರಿಗೆ ʼಬಿಎಸ್‌ಡಬ್ಲ್ಯೂಟಿ ವರ್ಷದ ವ್ಯಕ್ತಿ–2025ʼ ಪ್ರಶಸ್ತಿಯನ್ನು ಪ್ರದಾನ ಮಾಡಿ ಗೌರವಿಸಲಾಯಿತು.

“ನಾನು ಮಾಡಿದ ಕೆಲಸಕ್ಕೆ ಪ್ರಶಂಸೆಯ ಬೆನ್ನತ್ತಿ ಹೋದವನಲ್ಲ. ಯಾವುದೋ ಮೂಲೆಯಲ್ಲಿ ನನ್ನ ಪಾಡಿಗೆ ಕೆಲಸ ಮಾಡುತ್ತಿದ್ದ ನನ್ನನ್ನು ಗುರುತಿಸಿ ವರ್ಷದ ವ್ಯಕ್ತಿ ಪ್ರಶಸ್ತಿ ನೀಡಿ ಗೌರವಿಸುವುದರಿಂದ ನಿಜಕ್ಕೂ ಭಾವುಕನಾಗಿದ್ದೇನೆ ಈ ಕಾಲದಲ್ಲೂ ಗುರುತಿಸುವವರು ಇದ್ದಾರಲ್ಲ, ಇದು ನನ್ನ ಜೀವನದುದ್ದಕ್ಕೂ ಸಾರ್ಥಕ ಗುರುತಿಸುವಿಕೆ ಇದಾಗಿದೆ” ಎಂದು ದಿನೇಶ್ ಪೈ ಸನ್ಮಾನ ಸ್ವೀಕರಿಸಿ ಭಾವುಕರಾಗಿ ನುಡಿದರು.

ಭಾರತ್ ಸೋಷಿಯಲ್ ಆ್ಯಂಡ್ ವೆಲ್ಫೇರ್ ಟ್ರಸ್ಟ್‌ನ ಹನ್ನೊಂದನೇ ವರ್ಷದ ವಿದ್ಯಾರ್ಥಿ ವೇತನವನ್ನು ಸುಮಾರು 200 ಅರ್ಹ ವಿದ್ಯಾರ್ಥಿಗಳಿಗೆ ವಿತರಿಸಲಾಯಿತು. ಶಿಕ್ಷಣದ ಮೂಲಕ ಅವರ ಭವಿಷ್ಯವನ್ನು ರೂಪಿಸುವ ಸಂಕಲ್ಪವನ್ನು ಸಂಸ್ಥೆ ಪುನರುಚ್ಚರಿಸಿತು.

ವಿದ್ಯಾರ್ಥಿ ಹಾಗೂ ಹೆತ್ತವರಿಗೆ ಆಯೋಜಿಸಲಾದ ವಿಶೇಷ ಕಾರ್ಯಾಗಾರದಲ್ಲಿ ಕಾರ್ಕಳದ ಕ್ರಿಯೇಟಿವ್ ಎಜುಕೇಷನಲ್ ಫೌಂಡೇಷನ್ ಸಹ ನಿರ್ದೇಶಕ ಅಶ್ವತ್ ಎಸ್ ಎಲ್ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿ, “ಧನಾತ್ಮಕ ಹಾಗೂ ನಕಾರಾತ್ಮಕ ಒತ್ತಡವನ್ನು ಗುರುತಿಸಿ ಮಕ್ಕಳಿಗೆ ಸರಿಯಾದ ಮಾರ್ಗದರ್ಶನ ನೀಡುವುದು ಇಂದಿನ ಅಗತ್ಯ. ಹೆತ್ತವರು ಮಕ್ಕಳ ಬೇಡಿಕೆಗಳನ್ನು ಪೂರೈಸುವುದು ಮಾತ್ರವಲ್ಲದೆ ಅವರ ದಿನನಿತ್ಯದ ಚಲನೆಗಳ ಮೇಲೆ ಸದಾ ಜಾಗರೂಕತೆಯಿಂದ ಇರಬೇಕು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಗದಗ | ರಾಜ್ಯಪಾಲರ ವಿರುದ್ಧ ಎಚ್ ಕೆ ಪಾಟೀಲ್ ಆಕ್ರೋಶ: ವೇದಿಕೆಯಲ್ಲಿ ಬಿಜೆಪಿ ಶಾಸಕನಿಂದ ವಾಗ್ವಾದ

ಮಂಗಳೂರಿನ ಡಾ. ಪಿ ದಯಾನಂದ ಪೈ, ಪಿ. ಸತೀಶ್ ಪೈ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಜಯಕರ ಭಂಡಾರಿ, ಸಮಾಜ ಸೇವಕ ಎನ್ ಶೀನ ಶೆಟ್ಟಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ. ಅಶ್ವಿನಿ ಶೆಟ್ಟಿ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿ, ಸಮಾಜ ಸೇವೆಯಲ್ಲಿನ BSWT ಸಂಸ್ಥೆಯ ನಿಸ್ವಾರ್ಥ ಸೇವೆಯನ್ನು ಅತಿಥಿಗಳು ವಿಶೇಷವಾಗಿ ಸ್ಮರಿಸಿದರು. ಟ್ರಸ್ಟ್‌ನ ಸಮಾಜಮುಖಿ ಕಾರ್ಯಗಳನ್ನು ಶ್ಲಾಘಿಸಿದರು.

ವಿಶ್ವ ವಿದ್ಯಾಲಯ ಕಾಲೇಜಿನ ವಿದ್ಯಾರ್ಥಿನಿಗಳು ಕುವೆಂಪು ಅವರ ತೇನವಿನ ಭಾವಗೀತೆ ಹಾಡುವುದರ ಮೂಲಕ ಕಾರ್ಯಕ್ರಮ ಆರಂಭವಾಯಿತು. ವೇದಿಕೆಯಲ್ಲಿ ಸಾಂಕೇತಿಕವಾಗಿ ವಿದ್ಯಾರ್ಥಿ ವೇತನ ವಿತರಿಸಲಾಯಿತು. ಹಾಗೆಯೇ ಹೊಲಿಗೆ ತರಬೇತಿ ಶಿಬಿರದಲ್ಲಿ ಉತ್ತಮ ಪ್ರತಿಭೆ ತೋರಿಸಿದ ಹೊಲಿಗೆ ಯಂತ್ರವನ್ನು ವಿತರಿಸಲಾಯಿತು. ಮಂಗಳೂರು ವಿಶ್ವವಿದ್ಯಾಲಯ ಕಾಲೇಜಿನ ಪ್ರಾಂಶುಪಾಲರಾದ ಗಣಪತಿ ಗೌಡ ಎಸ್ ಇದ್ದರು. ಅವಿನಾಶ್ ಕಾಮತ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಹೇಶ್ ಶೆಟ್ಟಿ ತಿಮರೋಡಿಗೆ ಮೂರನೇ ಬಾರಿ ಗಡಿಪಾರು ಆದೇಶ, ಮಧ್ಯರಾತ್ರಿ ನೋಟಿಸ್ ಜಾರಿ !

ಧರ್ಮಸ್ಥಳ ಸೌಜನ್ಯ ‌ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಮೂರನೇ...

ಕರಾವಳಿ | LPG ಅಭಾವ; ಹೋಟೆಲ್ ಉದ್ಯಮಕ್ಕೆ ಭಾರೀ ಹೊಡೆತ

ಮಧ್ಯಪ್ರಾಚ್ಯ ದೇಶಗಳಲ್ಲಿ ಉಂಟಾಗಿರುವ ಯುದ್ಧದ ಪರಿಣಾಮವಾಗಿ ಅಡುಗೆ ಅನಿಲ (LPG) ಸರಬರಾಜಿನಲ್ಲಿ...

ಧರ್ಮಸ್ಥಳ ಪೊಲೀಸ್ ಠಾಣೆಗೆ ಆಯೋಗದ ಅಧ್ಯಕ್ಷರ ಭೇಟಿ

ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಾದ ಶಶಿಧರ್ ಎಸ್.ಕೋಸಂಬೆ...

ಮಂಗಳೂರು | ಪಾಸ್ಟಿಕ್, ಪತ್ರಿಕೆಯಲ್ಲಿ ಹೋಟೆಲ್ ಬಿಸಿ ಆಹಾರ ಪಾರ್ಸೆಲ್ ನಿಷೇಧಕ್ಕೆ ಸೂಚನೆ

ಹೋಟೆಲ್, ಕ್ಯಾಂಟೀನ್, ಕೆಫೆಗಳಲ್ಲಿ ಪ್ಲಾಸ್ಟಿಕ್ ಕವರ್, ಪತ್ರಿಕೆಗಳಲ್ಲಿ ಬಿಸಿ ಆಹಾರ ಪದಾರ್ಥಗಳನ್ನು...