ಮಂಗಳೂರು | ಬಹುಸಂಸ್ಕೃತಿ ಉತ್ಸವ ಕಾರ್ಯಕ್ರಮಕ್ಕೆ ಸಿಎಂ ಗೈರು, ಕಾದು ಕುಳಿತ ಜನರಿಗೆ ತೀವ್ರ ಬೇಸರ

Date:

ಮಂಗಳೂರು ನಗರದ ಪುರಭವನದಲ್ಲಿ ಆಯೋಜಿಸಲಾಗಿದ್ದ ಬಹುಸಂಸ್ಕೃತಿ ಉತ್ಸವ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗೈರಾಗಿದ್ದು, ಕಾರ್ಯಕ್ರಮದ ಆಯೋಜಕರು ಮತ್ತು ಮಂಗಳೂರು ಜನರಿಗೆ ತೀವ್ರ ಬೇಸರ ತರಿಸಿದೆ.

ಸಿದ್ದರಾಮಯ್ಯ ಅವರ ಬರುವಿಕೆಗಾಗಿ ಮೂರು ಗಂಟೆಗೂ ಹೆಚ್ಚು ಸಮಯ ಕಾದುಕುಳಿತಿದ್ದ ನೂರಾರು ಜನರು ಮತ್ತು ಪತ್ರಕರ್ತರು ಕೊನೆಗೆ ಬಂದ ದಾರಿಗೆ ಸುಂಕ ಇಲ್ಲ ಎಂಬಂತೆ ಹಿಡಿಶಾಪ ಹಾಕಿ ವಾಪಾಸ್ ತೆರಳಿದ್ದಾರೆ.

ಸಿದ್ದರಾಮಯ್ಯ ಶುಕ್ರವಾರ ಮಂಗಳೂರು ಪ್ರವಾಸದಲಿದ್ದರು. ಮಧ್ಯಾಹ್ನ 1 ಗಂಟೆಗೆ ಮೇರಿಹಿಲ್‌ನಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಮಂಗಳೂರು ಪ್ರಾದೇಶಿಕ ಕೇಂದ್ರ ಕಚೇರಿ ಕಟ್ಟಡದ ಶಿಲಾನ್ಯಾಸ ನೆರವೇರಿಸಿದ ಸಿಎಂ ಬಳಿಕ ಪುರಭವನದಲ್ಲಿ ಆಯೋಜನೆಯಾಗಿದ್ದ ಬಹುಸಂಸ್ಕೃತಿ ಉತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಬೇಕಿತ್ತು. ಆದರೆ, ಆ ಕಾರ್ಯಕ್ರಮಕ್ಕೆ ಸಿಎಂ ಗೈರು ಹಾಜರಾದರು. ಅಧಿಕೃತ ಸರ್ಕಾರಿ ಕಾರ್ಯಕ್ರಮಕ್ಕೆ ಗೈರುಹಾಜರಾದ ಸಿಎಂ‌ ಸಿದ್ದರಾಮಯ್ಯ ವಿಧಾನ‌ ಪರಿಷತ್ ಸದಸ್ಯ ಐವನ್ ಡಿಸೋಜಾ ಮತ್ತು ಸ್ಪೀಕರ್ ಯು.ಟಿ ಖಾದರ್ ಅವರ ನಿವಾಸದಲ್ಲಿ ಕಾಲ ಕಳೆದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಾಮುಖ್ಯತೆಯ ಬಹುಸಂಸ್ಕೃತಿ ಉತ್ಸವಕ್ಕೆ ಗೈರಾಗಿದ್ದು ಕಾರ್ಯಕ್ರಮದ ಆಯೋಜಕರು ಮತ್ತು ನೆರದಿದ್ದ ನೂರಾರು ಜನರ ಅಸಮಾಧಾನಕ್ಕೆ ಕಾರಣವಾಗಿದೆ. ಕೋಮುಸೂಕ್ಷ್ಮ ಪ್ರದೇಶದಲ್ಲಿ‌ ಸಮಾಜ ಮತ್ತು ಸಮುದಾಯಗಳ ನಡುವೆ ನಂಬಿಕೆ ವಿಶ್ವಾಸ ಸೌಹಾರ್ದತೆ ಮೂಡಿಸುವ ಉದ್ದೇಶದಿಂದ ಹಮ್ಮಿಕೊಂಡಿದ್ದ ಬಹುಸಂಸ್ಕೃತಿ ಉತ್ಸವ ಕಾರ್ಯಕ್ರಮವು ಸಿಎಂ‌ ಸಿದ್ದರಾಮಯ್ಯನವರಿಗೆ ಮುಖ್ಯವಾಗಬೇಕಿತ್ತು. ವಿಧಾನ ಪರಿಷತ್ ಸದಸ್ಯ ಮತ್ತು ಸ್ಪೀಕರ್ ಮನೆಯಲ್ಲಿ ಕಾಲಹರಣ ಮಾಡುವ ಬದಲು ಬಹುಸಂಸ್ಕೃತಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ಸಮಾಜಕ್ಕೆ ಉತ್ತಮ ಸಂದೇಶ ನೀಡಬೇಕಿತ್ತು ಎಂಬ ಮಾತುಗಳು ಕೇಳಿಬಂದಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ ಪೊಲೀಸ್ ಠಾಣೆಗೆ ಆಯೋಗದ ಅಧ್ಯಕ್ಷರ ಭೇಟಿ

ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಾದ ಶಶಿಧರ್ ಎಸ್.ಕೋಸಂಬೆ...

ಮಂಗಳೂರು | ಪಾಸ್ಟಿಕ್, ಪತ್ರಿಕೆಯಲ್ಲಿ ಹೋಟೆಲ್ ಬಿಸಿ ಆಹಾರ ಪಾರ್ಸೆಲ್ ನಿಷೇಧಕ್ಕೆ ಸೂಚನೆ

ಹೋಟೆಲ್, ಕ್ಯಾಂಟೀನ್, ಕೆಫೆಗಳಲ್ಲಿ ಪ್ಲಾಸ್ಟಿಕ್ ಕವರ್, ಪತ್ರಿಕೆಗಳಲ್ಲಿ ಬಿಸಿ ಆಹಾರ ಪದಾರ್ಥಗಳನ್ನು...

ಮಂಗಳೂರು | ಅಮೆರಿಕದ ಯುದ್ದಕೋರ ನೀತಿಗಳು ದುಡಿಯುವ ವರ್ಗಕ್ಕೆ ಮಾರಕ: ಕೆ ಮಹಾಂತೇಶ್

ಅಮೆರಿಕ ಇಸ್ರೇಲ್‌ನ ಯುದ್ದಕೋರ ನೀತಿಗಳಿಂದಾಗಿ ಜಗತ್ತಿನೆಲ್ಲಡೆ ಯುದ್ಧದ ಕಾರ್ಮೋಡ ಕವಿದಿದ್ದು, ಜನಸಾಮಾನ್ಯರು...

ಮಂಗಳೂರು | ಯಕ್ಷಗಾನ ಕಲಾವಿದರಿಗೆ ಆರ್ಥಿಕ ರಕ್ಷಣೆ ಬೇಕು : ದಯಾನಂದ ಪೈ

ಯಕ್ಷಗಾನ ಹಲವು ಕಲೆಗಳಿಂದ ಪೋಷಿತಗೊಂಡು ರೂಪುಗೊಂಡ ಶ್ರೇಷ್ಠವಾದ ಸಂಪದ್ಭರಿತ ಕಲೆಯಾದರೂ ಕಲಾವಿದರ...