ಮಂಗಳೂರು | ಹತ್ಯೆಯ ಹಿಂದಿರುವ ಅಪರಾಧಿಗಳಿಗೆ ಶಿಕ್ಷೆಯಾಗಲಿದೆ: ಸಚಿವ ದಿನೇಶ್ ಗುಂಡೂರಾವ್

Date:

ಮಂಗಳೂರಿನಲ್ಲಿ ನಡೆದ ದ್ವೇಷ ಹತ್ಯೆಯ ಹಿಂದೆ ಯಾರೇ ಇರಲಿ, ತನಿಖೆ ನಡೆಸಿ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಶುಕ್ರವಾರ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, “ಸುಹಾಸ್ ಶೆಟ್ಟಿಯವರನ್ನ ಘೋರವಾಗಿ ಹತ್ಯೆ ಮಾಡಲಾಗಿದ್ದು, ಇದೊಂದು ದುರ್ಘಟನೆ” ಎಂದು ವಿಷಾದ ವ್ಯಕ್ತಪಡಿಸಿದರು.

“ಮಂಗಳೂರಿನಲ್ಲಿ ಇತ್ತಿಚೆಗೆ ನಡೆದ ಹತ್ಯೆಗಳ ಹಿನ್ನೆಲೆಯಲ್ಲಿ ಪೊಲೀಸರು ಕೈಗೊಂಡಿರುವ ಕ್ರಮಗಳ ಕುರಿತಂತೆ ಸಿಎಂ ಸಿದ್ದರಾಮಯ್ಯ ಅವರ ಜೊತೆ ಚರ್ಚಿಸಿದ್ದೇನೆ. ಮಂಗಳೂರಿನಲ್ಲಿ ದ್ವೇಷ ಹತ್ಯೆಗಳು ನಡೆಯುತ್ತಿರುವುದು ಖಂಡನೀಯ.‌ ಈ ರೀತಿಯ ಹತ್ಯೆಗಳನ್ನ ನಿಯಂತ್ರಣಕ್ಕೆ ತರಲು ಎಲ್ಲಾ ಸಂಘಟನೆಗಳು, ಪಕ್ಷಗಳು ಸೇರಿ ಸಹಕರ ಅಗತ್ಯವಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅಶ್ರಫ್ ಎಂಬ ವ್ಯಕ್ತಿ ಹತ್ಯೆ ಹಿಂದೆಯೇ ಸುಹಾಸ್ ಶೆಟ್ಟಿಯವರ ಈ ಕೊಲೆ ಆಗಿದೆ. ಸುಹಾಸ್ ಕೂಡಾ ರೌಡಿ ಶೀಟರ್ ಆಗಿದ್ದರು. ಆದರೆ ಈ ರೀತಿಯ ಕೊಲೆ ಆಗಬಾರದು. ನಮಗೆ ಎಲ್ಲರೂ ಒಂದೇ. ಜಾತಿ ಧರ್ಮಯಾವುದೇ ಇರಲಿ. ಈ ರೀತಿಯ ಕೊಲೆಗಳು ಮರುಕಳಿಸಬಾರದು.‌ ಇದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಹತ್ಯೆಯ ಹಿಂದೆ ಯಾರೇ ಇದ್ದರೂ ತನಿಖೆ ನಡೆಸಿ ಶಿಕ್ಷೆ ಕೊಡಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು” ಎಂದು ದಿನೇಶ್ ಗುಂಡೂರಾವ್ ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕರ್ನಾಟಕಕ್ಕೂ ಕಾಲಿಟ್ಟ ಮಾಬ್ ಲಿಂಚಿಂಗ್; ಇಲ್ಲಿ ಸರ್ಕಾರ ಜೀವಂತವಿದೆಯೇ?

ಮಂಗಳೂರಿನಲ್ಲಿ ವಾತಾವರಣ

“ಮಂಗಳೂರಿನಲ್ಲಿ ಬಹಳ ಗಂಭೀರವಾಗಿ ಭಯದ ವಾತಾವರಣ ಇದೆ. ಹೀಗಾಗಿ ಪರಿಸ್ಥಿತಿ ನಿಭಾಯಿಸಲು ಜಿಲ್ಲಾಡಳಿತಕ್ಕೂ ಸೂಚನೆ ನೀಡಿದ್ದೇನೆ. ಇವತ್ತು ಸುಹಾಸ್ ಅವರ ಅಂತ್ಯಕ್ರಿಯೆ ನೆರವೇರಲಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕ್ರಮಗಳನ್ನ ತೆಗೆದುಕೊಳ್ಳಲು ಸೂಚಿಸಲಾಗಿದೆ. ಬಿಜೆಪಿ ನಾಯಕರು ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಸ್ವತಂತ್ರರು. ಬಿಜೆಪಿ ನಾಯಕರು
ಯಾರು ಕೂಡಾ ಜವಾಬ್ದಾರಿ ಮರೆತು ನಡೆದುಕೊಳ್ಳಬಾರದು. ಸಂಘರ್ಷಕ್ಕೆ ನಾವು ಅವಕಾಶ ಮಾಡಿಕೊಡಬಾರದು. ಸರ್ಕಾರ ಎಲ್ಲಾ ರೀತಿಯ ಕ್ರಮಗಳನ್ನು ತೆಗೆದುಕೊಳ್ಳಲಿದೆ. ಅನೇಕ ಮುಖಂಡರು ಇವತ್ತು ದಕ್ಷಿಣ ಕನ್ನಡ ಕ್ಕೆ ಭೇಟಿ ನೀಡುತ್ತಿದ್ದು, ಅಲ್ಲಿ ಮಾತಾಡುವಾಗ ಜವಾಬ್ದಾರಿ ಯಿಂದ ಮಾತಾಡಬೇಕು.‌ ಯಾರನ್ನು ಕೂಡಾ ಓಲೈಸುವಂತೆ ಮಾತಾಡಬಾರದು. ನಾವು ಮಾತಾಡುವಾಗಾ ಏನು ಪರಿಣಾಮಗಳು ಆಗಲಿವೆ ಎಂಬುದನ್ನು ಯೋಚಿಸಿ ಮಾತನಾಡಲಿ” ಎಂದು ಸಚಿವ ದಿನೇಶ್ ಗುಂಡೂರಾವ್ ಮನವಿ ಮಾಡಿದರು.‌

“ಹತ್ಯೆ ತನಿಖೆಯಾಗಬೇಕು. ಯಾವುದೇ ಒತ್ತಡಗಳಿಲ್ಲದೇ ಪೋಲಿಸರಿಗೆ ಕ್ರಮ ತೆಗೆದುಕೊಳ್ಳುವಂತ ವಾತಾವರಣ ನಾವು ಕಲ್ಪಿಸಿಕೊಡಲಿದ್ದೇವೆ. ಯಾರು ಅಪರಾದ ಮಾಡಿದ್ದಾರೆ ಅವರಿಗೆ ಶಿಕ್ಷೆ ಆಗಬೇಕು. ಕಾನೂನು ಪ್ರಕಾರ ಕ್ರಮ ಆಗಲಿದೆ.‌
ಮಂಗಳೂರಿಗೆ ಸಾದ್ಯವಾದಗೆಲ್ಲಾ ಭೇಟಿ ಕೊಟ್ಟು ಅಗತ್ಯ ನಿರ್ದೇಶನಗಳನ್ನ ನೀಡಿದ್ದೇನೆ. ಅಧಿಕಾರಿಗಳು, ಪೊಲೀಸರ ಜೊತೆ ಸಭೆ ಮಾಡಿದ್ದೇನೆ. ಲ್ಯಾಂಡ್ ಮಾಫಿಯಾ, ಡ್ರಗ್ಸ್ ಕಂಟ್ರೋಲ್ ಮಾಡೋದಕ್ಕೆ ಅಧಿಕಾರಿಗಳ ಜೊತೆ ಸಭೆ ಮಾಡಿದ್ದೇನೆ. ಈ ರೀತಿ ಘಟನೆಗಳು ಮೇಲ್ನೋಟಕ್ಕೆ ಕೋಮು ವೈಷ್ಯಮ್ಯ ಇರುವುದನ್ನ ತೋರಿಸುತ್ತದೆ. ತನಿಖೆಯಾದ ಬಳಿಕ ಕಾರಣ ಗೊತ್ತಾಗಲಿದೆ” ಎಂದು ವಿವರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...